ಬೆಳಗಾವಿ | ಗ್ರಾಮ ಪಂಚಾಯತಿಯಲ್ಲಿ ಭ್ರಷ್ಟಾಚಾರ – ಕ್ರಮಕ್ಕೆ ಆಗ್ರಹ; ಇಲ್ಲವಾದಲ್ಲಿ ಉಪವಾಸ ಸತ್ಯಾಗ್ರಹ

Date:

ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಮುದೇನೂರ, ಓಬಳಾಪೂರ ಗ್ರಾಮ ಪಂಚಾಯತಿಗಳಲ್ಲಿನ ಭ್ರಷ್ಟಾಚಾರ ಸಾಬೀತಾಗಿದ್ದು, ಕ್ರಮ ಕೈಗೊಳ್ಳುವಂತೆ ಸರ್ಕಾರ ಸೂಚಿಸಿದ್ದರೂ, ತಾಲೂಕು, ಜಿಲ್ಲಾ ಪಂಚಾಯತಿ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳು ಕ್ರಮ ಕೈಗೊಂಡಿಲ್ಲ. ಕರ್ತವ್ಯಲೋಪ ಎಸಗಿರುವ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಬೇಕು ಎಂದು ಸಾಮಾಜಿ ಹೋರಾಟಗಾರ ಶ್ರೀನಿವಾಸಗೌಡ ಪಾಟೀಲ್ ಒತ್ತಾಯಿಸಿದ್ದಾರೆ. ರಾಜ್ಯ ಸರ್ಕಾರದ ಪಂಚಾಯತ್ ರಾಜ್ ಇಲಾಖೆಯ ರಾಜ್ಯ ಕಾರ್ಯದರ್ಶಿ ಅಂಜುಮ್ ಪರ್ವೇಜ್ ಅವರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ.

- Advertisement -

“ಮುದೇನೂರ, ಓಬಳಾಪೂರ ಗ್ರಾಮ ಪಂಚಾಯತಿಗಳಲ್ಲಿ ನಡೆದಿರುವ ಭ್ರಷ್ಟಾಚಾರ ಸಾಬೀತಾಗಿದೆ. 78 ಲಕ್ಷ ರೂ. ವಸೂಲಿ ಮಾಡುವಂತೆ ಹಾಗೂ ಎಫ್‌ಐಆರ್ ದಾಖಲಿಸಿ ಕ್ರಮ ಕೈಗೊಳ್ಳವಂತೆ ಸರ್ಕಾರ ಸೂಚಿಸಿದೆ. ಅಲ್ಲದೆ, ರಾಮದುರ್ಗ ತಾಲೂಕಿನ 37 ಪಂಚಾಯತಿಗಳ ಲೆಕ್ಕ ಪರಿಶೋಧನಾ ವರದಿಯಂತೆ 28 ಕೋಟಿ ರೂ. ಬಾಕಿ ವಸೂಲಾತಿ ತಿರುವಳಿಗೆ ಕ್ರಮ ಕೈಗೊಳ್ಳುವಂತೆ ಸರ್ಕಾರ ನೀಡಿದ್ದ ಸುತ್ತೋಲೆಯನ್ನು ಅಧಿಕಾರಿಗಳು ಗಂಭೀರವಾಗಿ ಪರಿಗಣಿಸದೆ, ಕರ್ತವ್ಯಲೋಪ ಎಸಗಿದ್ದಾರೆ. ಅವರೆಲ್ಲರ ವಿರುದ್ಧ ಕ್ರಮ ಕೈಗೊಂಡು, ಸೇವೆಯಿಂದ ವಜಾಗೊಳಿಸಬೇಕು. ಅದಕ್ಕಾಗಿ, ಬೆಳಗಾವಿ ಜಿಲ್ಲಾ ಪಂಚಾಯತಿ ಎದುರು ಮಾರ್ಚ್‌ 4ರಿಂದ ಅನಿರ್ಧಿಷ್ಟಾವಧಿ ಆಹೋರಾತ್ರಿ ಉಪವಾಸ ಸತ್ಯಾಗ್ರಹ ಅರಂಭಿಸುತ್ತೇನೆ” ಎಂದು ಶ್ರೀನಿವಾಸಗೌಡ ಪಾಟೀಲ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

“ಈ ಹಿಂದೆ ಜಿಲ್ಲಾಧಿಕಾರಿ ಕಚೇರಿ ಎದುರು ಉಪವಾಸ ಧರಣಿ ಆರಂಭಿಸಿದ್ದೆ. ಆಗ, 10 ದಿನಗಳ ಒಳಗೆ ಕ್ರಮ ಕೈಗೊಳ್ಳುವುದುದಾಗಿ ಬೆಳಗಾವಿ ಜಿಲ್ಲಾ ಪಂಚಾಯತಿ ಅಧಿಕಾರಿಗಳು ಭರವಸೆ ನೀಡಿದ್ದರು. ಆದರೆ, ಈವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ” ಎಂದು ಆರೋಪಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಸಾರಿಗೆ ಬಸ್ ಟಾಯರ್ ಸ್ಪೋಟ ಪರಿಣಾಮ ಕಂಡಕ್ಟರ್ ಕಾಲಿಗೆ ಗಾಯ

ಲಕ್ಷ್ಮೇಶ್ವರ ಮಾರ್ಗದಲ್ಲಿ ಸಂಚರಿಸುತ್ತಿದ್ದ ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ (ಸಂಖ್ಯೆ:...

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...