ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಅಧ್ಯಕ್ಷರಾಗಿ ಅಣ್ಣಸಾಹೇಬ್ ಜೊಲ್ಲೆ, ಉಪಾಧ್ಯಕ್ಷರಾಗಿ ರಾಜು ಕಾಗೆ ಅವಿರೋಧ ಆಯ್ಕೆ

Date:

ತೀವ್ರ ಜಿದ್ದಾಜಿದ್ದಿಯಿಂದ ಕೂಡಿದ್ದ ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಅಧ್ಯಕ್ಷರಾಗಿ ಅಣ್ಣಸಾಹೇಬ್ ಜೊಲ್ಲೆ, ಉಪಾಧ್ಯಕ್ಷರಾಗಿ ರಾಜು ಕಾಗೆ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.

- Advertisement -

ಈ ಡಿಸಿಸಿ ಬ್ಯಾಂಕ್​ ಚುನಾವಣೆಗೆ ಮುಂಚೆ ನಿರ್ದೇಶಕರ ಸಭೆ ನಡೆದ ಬಳಿಕ ಜೊಲ್ಲೆ ಮತ್ತು ರಾಜು ಕಾಗೆ ನಾಮಪತ್ರ ಸಲ್ಲಿಕೆಗೆ ಹೊರಟರು. ಬಾಲಚಂದ್ರ ಜಾರಕಿಹೊಳಿ ಅವರ ಕಾರಿನಲ್ಲೇ ಈ ಇಬ್ಬರೂ ನಾಮಪತ್ರ ಸಲ್ಲಿಸಲು ತೆರಳಿದ್ದು, ರಾಜ್ಯ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿತ್ತು. ಡಿಸಿಸಿ ಬ್ಯಾಂಕ್ ಬೆಳಗಾವಿ ಜಿಲ್ಲೆಯ ಅತಿದೊಡ್ಡ ಗ್ರಾಮೀಣ ಋಣ ಸಹಕಾರ ಸಂಸ್ಥೆ. ಇದರ ನಿರ್ವಹಣೆಯಲ್ಲಿ ಜಾರಕಿಹೊಳಿ, ಜೊಲ್ಲೆ, ಕತ್ತಿ ಕುಟುಂಬಗಳು ಹಲವು ವರ್ಷಗಳಿಂದ ಪ್ರಭಾವ ಬೀರಿವೆ. ಈ ಬಾರಿಯ ಚುನಾವಣೆಯೂ ರಾಜಕೀಯ ಹೋರಾಟದ ರೂಪ ಪಡೆದಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಕಾಂಗ್ರೆಸ್ ಬಿಜೆಪಿ ಮಧ್ಯೆ 30-30 ತಿಂಗಳು ಅಧಿಕಾರ ಹಂಚಿಕೆ ಸೂತ್ರ ನಡೆದಿದೆ. ರಾಜ್ಯ ಮಟ್ಟದಲ್ಲಿ ಕಾಂಗ್ರೆಸ್ ಬಿಜೆಪಿ ವಿರೋದಿಯಾಗಿದ್ದರೂ ಕೂಡ ಬೆಳಗಾವಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಉಪಾಧ್ಯಕ್ಷ ಆಯ್ಕೆಯಲ್ಲಿ ಮೈತ್ರಿ ನಡೆದಿದೆ.

“ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಅಣ್ಣಸಾಹೇಬ್ ಜೊಲ್ಲೆ, ಉಪಾಧ್ಯಕ್ಷರಾಗಿ ರಾಜು ಕಾಗೆ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಿದ್ದೇವೆ. 30 ತಿಂಗಳ ಅವಧಿಗೆ ಅಧಿಕಾರ ಹಂಚಿಕೆಯಾಗಿದೆ. ಬಿಜೆಪಿಗೆ ಈಗ ಅಧ್ಯಕ್ಷ ಸ್ಥಾನ, ಕಾಂಗ್ರೆಸ್‌ಗೆ ಉಪಾಧ್ಯಕ್ಷ ಸ್ಥಾನ ಹಂಚಿಕೊಂಡಿದ್ದೇವೆ. ಈ ಹಿಂದೆ ನಾವು 3 ಮಂದಿ ಇದ್ದರೂ ಬಿಜೆಪಿಯವರು ಅಧ್ಯಕ್ಷ ಸ್ಥಾನ ಬಿಟ್ಟು ಕೊಟ್ಟಿದ್ದರು. ಈಗ ನಾವು ಬಿಜೆಪಿಯವರಿಗೆ ಅಧ್ಯಕ್ಷ ಸ್ಥಾನ ಬಿಟ್ಟು ಕೊಟ್ಟಿದ್ದೇವೆ. ಜೊಲ್ಲೆಯವರು ನಮ್ಮನ್ನು ನಂಬಿ ಬಂದಿದ್ದರು. ಹೀಗಾಗಿ ಜೊಲ್ಲೆಯವರನ್ನ ಗೆಲ್ಲಿಸಿ, ಅಧ್ಯಕ್ಷರನ್ನಾಗಿ ಮಾಡಿದ್ದೇವೆ. ಸದ್ಯದ ಪರಿಸ್ಥಿತಿಯಲ್ಲಿ ಬ್ಯಾಂಕ್‌ಗೆ ಅಣ್ಣಸಾಹೇಬ್ ಜೊಲ್ಲೆಯವರ ಅಗತ್ಯವಿದೆ” ಎಂದು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಪೌರ ಕಾರ್ಮಿಕರ ವೇತನ ಬಿಡುಗಡೆಗೆ ಒತ್ತಾಯಿಸಿ ಅನಿರ್ಧಿಷ್ಟಾವಧಿ ಧರಣಿ

“ಪ್ರತಿಸ್ಪರ್ಧಿಗಳಿಂದ ನಾಮಪತ್ರ ಸಲ್ಲಿಕೆಯಾಗಿರದ ಕಾರಣ ಅಧ್ಯಕ್ಷ, ಉಪಾಧ್ಯಕ್ಷರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | 271 ರೈತರಿಗೆ ಪರಿಹಾರ ವಿತರಿಸುವ ಪ್ರಕ್ರಿಯೆ

ಭೂಸ್ವಾಧೀನ ಪೂರ್ಣಗೊಂಡು ಅಗತ್ಯ ಜಾಗವನ್ನು ಗುತ್ತಿಗೆದಾರರಿಗೆ ಹಸ್ತಾಂತರಿಸಿದ ಬಳಿಕ ಕಾಮಗಾರಿ ಆರಂಭಿಸಲು...

ರಾಯಚೂರು | ದೇವಸ್ಥಾನ ಕಟ್ಟೆ ಮೇಲೆ ಕುಳಿತಿದ್ದಕ್ಕೆ ಹಲ್ಲೆ ಅರೋಪ: ಐವರ ವಿರುದ್ಧ ಪ್ರಕರಣ ದಾಖಲು

ಲಿಂಗಸುಗೂರು ತಾಲೂಕಿನ ಈಚನಾಳ ಗ್ರಾಮದಲ್ಲಿ ಗದ್ದೆಮ್ಮ ದೇವಸ್ಥಾನದ ಕಟ್ಟೆ ಮೇಲೆ ಕುಳಿತಿದ್ದ...

ಸಕಲೇಶಪುರ | 25 ವರ್ಷ ನೆನಗುದಿಗೆ ಬಿದ್ದಿದ್ದ ಆಟೋ ನಿಲ್ದಾಣ ನಿರ್ಮಾಣ 

ಹಾಸನ ಜಿಲ್ಲೆ ಸಕಲೇಶಪುರ ಪಟ್ಟಣದ ಹಳೆ ಬಸ್ ನಿಲ್ದಾಣದ ಸಮೀಪ ಸ್ಥಳೀಯ...

ಕಾರವಾರ | ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ ಸುಸೂತ್ರ: ಒಟ್ಟು 11,671 ಅಭ್ಯರ್ಥಿಗಳು ಹಾಜರು

ಕಾರವಾರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ ಕಂದಾಯ ಇಲಾಖೆಯ ಗ್ರಾಮ...