ಬೆಳಗಾವಿ | ಡಿಸಿಸಿ ಬ್ಯಾಂಕ್ ಚುನಾವಣೆ; ಲಾಂಗು, ಮಚ್ಚು ಹಿಡಿದು ಪುಂಡರ ಓಡಾಟ!

Date:

ಬೆಳಗಾವಿಯಲ್ಲಿ ಡಿಸಿಸಿ ಬ್ಯಾಂಕ್ ಚುನಾವಣೆ ನಡೆಯುತ್ತಿದ್ದು, ಚುನಾವಣಾ ಕಣದಲ್ಲಿ ಉಮೇಶ್ ಕತ್ತಿ ಮತ್ತು ಸತೀಶ್ ಜಾರಕಿಹೊಳಿ‌ ಬೆಂಬಲಿತ ಸದಸ್ಯರ ನಡುವೆ ಜಿದ್ದಾಜಿದ್ದಿ ನಡೆಯುತ್ತಿದೆ. ಚುನಾವಣೆ ವೇಳೆ ಮತದಾನ ಮಾಡಬೇಕಿರುವ ಕೃಷಿ ಪತ್ತಿನ ಸಹಕಾರಿ ಸಂಘದ ಸದಸ್ಯರ ಕಾವಲಿಗಾಗಿ ಕೆಲವು ಪುಂಡರು ಹುಕ್ಕೇರಿಯಲ್ಲಿ ರಾಜಾರೋಷವಾಗಿಯೇ ಲಾಂಗು, ಮಚ್ಚು ಹಿಡಿದು ಓಡಾಡುತ್ತಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಡಿಯೋದಲ್ಲಿರುವವರು ಕತ್ತಿ ಬೆಂಬಲಿಗರು ಎಂದು ಹೇಳಲಾಗುತ್ತಿದೆ.

- Advertisement -

ವಿಡಿಯೋದಲ್ಲಿ; ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿಯ ವಿಶ್ವರಾಜ್ ಸುಗರ್ಸ್‌ ಕಟ್ಟಡದ ಸುತ್ತಮುತ್ತ ಪುಂಡರು ಲಾಂಗು, ಮಚ್ಚು ಹಿಡಿದು ಓಡಾಡುವ ದೃಶ್ಯಗಳು ಕಂಡುಬಂದಿವೆ. ಸಾರ್ವಜನಿಕವಾಗಿ ಪುಂಡರು ಮಾರಕಾಸ್ತ್ರ ಹಿಡಿದು ಓಡಾಡುತ್ತಿರುವುದು ಜನರಲ್ಲಿ ಭೀತಿ ಹುಟ್ಟುಹಾಕಿದೆ. ಮಾತ್ರವಲ್ಲದೆ, ಜನಾಕ್ರೋಶಕ್ಕೂ ಕಾರಣವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಕತ್ತಿ ಬೆಂಬಲಿತ ಸದಸ್ಯರನ್ನು ವಿರೋಧಿ ಬಣವು ತಮ್ಮ ತೆಕ್ಕೆಗೆ ತೆಗೆದುಕೊಳ್ಳಬಾರದು ಅಥವಾ ಅಪಹರಿಸಬಾರದೆಂದು ಸದಸ್ಯರನ್ನು ಕಾವಲು ಕಾಯಲಾಗುತ್ತಿದೆ ಎಂದು ಹೇಳಲಾಗಿದೆ. ಸದಸ್ಯರನ್ನು ಕಾವಲು ಕಾಯಲು ಪುಂಡರು ಮಾರಕಾಸ್ತ್ರಗಳನ್ನು ಹಿಡಿದು, ಅಡ್ಡಾಡುತ್ತಿದ್ದಾರೆ ಎಂದು ಆರೋಪಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಕೇಂದ್ರ ಸಚಿವ ಪ್ರಲ್ಹಾದ ಜೋಶಿಗೆ ಮನವಿ ಸಲ್ಲಿಸುವ ಮುನ್ನವೇ ಕಬ್ಬು ಬೆಳೆಗಾರರು ಪೋಲಿಸರ ವಶ

ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳ ಈಡೇರಿಕೆ ಕುರಿತಂತೆ ಕೇಂದ್ರ ಸಚಿವ ಪ್ರಹ್ಲಾದ...

ಉಡುಪಿ | ಹಿರಿಯ ಸಾಹಿತಿ ಎ.ಎಸ್.ಎನ್. ಹೆಬ್ಬಾರ್ ಅವರಿಗೆ ಸೂಕ್ತ ರಕ್ಷಣೆ ನೀಡಲು ಜಿಲ್ಲಾಧಿಕಾರಿಗೆ ಮನವಿ

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪಕ ಅಧ್ಯಕ್ಷರು, ಹಿರಿಯ ವಕೀಲರು...

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...