ಬೆಳಗಾವಿ ತಾಲೂಕಿನ ಸಾಂಬ್ರಾ ವಿಮಾನ ನಿಲ್ದಾಣ ಹತ್ತಿರದ ಹೊಲದಲ್ಲಿ ಕಲ್ಲಿನಿಂದ ಜಜ್ಜಿದ ಸ್ಥಿತಿಯಲ್ಲಿ ಅಪರಿಚಿತ ಯುವಕನ ಮೃತದೇಹ ಪತ್ತೆಯಾಗಿದ್ದು, ಕೊಲೆ ಆಗಿರಬಹುದೆಂಬ ಸಂಶಯ ವ್ಯಕ್ತವಾಗುತ್ತಿದೆ.
ಮೃತದೇಹ ನೋಡಿದ ಸ್ಥಳೀಯ ರೈತರು ಪೋಲಿಸರಿಗೆ ಮಾಹಿತಿ ಕೊಟ್ಟಿದ್ದು, ಮಾರಿಹಾಳ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ಭೆಟ್ಟಿ ನೀಡಿದ್ದಾರೆ. ಈ ಕುರಿತು ಕೊಲೆಗೆ ಇನ್ನೂ ಕಾರಣ ಗೊತ್ತಾಗಿಲ್ಲ. ಎಲ್ಲ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದೇವೆ ಹಾಗೂ ಕೊಲೆಯಾದ ಯುವಕನ ಗುರುತು ಪತ್ತೆ ಹಾಗೂ ಆರೋಪಿಗಳಿಗಾಗಿ ಹುಡುಕಾಟ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.