ಬೆಳಗಾವಿ | ಚೆನ್ನಮ್ಮನ ಕಿತ್ತೂರಿನಲ್ಲಿ 30 ಕೋಟಿ ವೆಚ್ಚದ ಥೀಮ್ ಪಾರ್ಕ್ ಸ್ಥಾಪನೆಗೆ ನಿರ್ಧಾರ

Date:

Advertisements

ಬೆಳಗಾವಿ ಜಿಲ್ಲೆಯ ರಾಣಿ ಚೆನ್ನಮ್ಮನ ಕಿತ್ತೂರನ್ನು ಪ್ರವಾಸಿ ತಾಣವಾಗಿಸಲು 38 ಕೋಟಿ ವೆಚ್ಚದಲ್ಲಿ ವಿದ್ಯುನ್ಮಾನ ಥೀಮ್ ಪಾರ್ಕ್ ಸ್ಥಾಪನೆ ಮಾಡಲಾಗುವುದು ಎಂದು ಸಚಿವ ಕೃಷ್ಣ ಭೈರೇಗೌಡ ಹೇಳಿದರು.

ಕಿತ್ತೂರು ಅಭಿವೃದ್ಧಿ ಪ್ರಾಧಿಕಾರ ಹಾಗೂ ಪುರಾತತ್ತ್ವ ಸಂಗ್ರಹಾಲಯಗಳ ಮತ್ತು ಪರಂಪರೆ ಇಲಾಖೆಯ ಆಶ್ರಯದಲ್ಲಿ ಕಿತ್ತೂರು ಕೋಟೆ ಆವರಣದಲ್ಲಿ ಮಂಗಳವಾರ, ಚನ್ನಮ್ಮನ ಕಿತ್ತೂರಿನ ಕೋಟೆ, ಅರಮನೆ ಸಂರಕ್ಷಣಾ ಕಾಮಗಾರಿಗಳ ಭೂಮಿಪೂಜೆ ಹಾಗೂ ಶಂಕುಸ್ಥಾಪನೆ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದರು.

ಕೋಟೆಯ ಮಹಾದ್ವಾರ, ಗೋಡೆಗಳು ಸೇರಿಂತೆ ವಿವಿಧ ಅವಶೇಷಗಳನ್ನು ಸಂರಕ್ಷಿಸಲು ₹12.11 ಕೋಟಿ, ಇತರ ಕಾಮಗಾರಿಗಳಿಗೆ ₹2.4 ಕೋಟಿ ಅನುದಾನ ಬಳಕೆಯಾಗಲಿದೆ. ಕಳೆದ ಒಂದು ವರ್ಷದಿಂದ ಈ ಭಾಗದ ಶಾಸಕರ ಬೇಡಿಕೆಯಿತ್ತು. ಅದರಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೋಟೆ ಅಭಿವೃದ್ಧಿಗೆ ಕೂಡಲೇ ಅನುದಾನ ಮಂಜೂರು ಮಾಡಿದರು’ ಎಂದರು.

Advertisements

‘ಕೋಟೆಯ ಕೆಲವು ಭಾಗ ಶೀಥಿಲಗೊಂಡಿದ್ದು, ದುರಸ್ತಿ ಅವಶ್ಯಕತೆ ಇದೆ. ಕೋಟೆಯ ಕುಸಿದ ಗೋಡೆಗಳನ್ನು ನವೀಕರಿಸಿ ಕೋಟೆ ಅವಶೇಷಗಳ ಸಂರಕ್ಷಣೆಯ ಮೂಲಕ ಇತಿಹಾಸ ಉಳಿಸುವ ಕಾರ್ಯ ಕೈಗೆತ್ತಿಕೊಳ್ಳಲಾಗಿದೆ. ಈಗಾಗಲೇ ಟೆಂಡ‌ರ್ ಕರೆಯಲಾಗಿದೆ. ಮೂಲ ಪದ್ಧತಿ ಅನ್ವಯ ದುರಸ್ತಿ ಕಾರ್ಯ ಕೈಗೊಳ್ಳಲಾಗುವುದು’ ಎಂದರು.

ಕೋಟೆ ಮರು ನಿರ್ಮಾಣಕ್ಕೆ ಈಗಾಗಲೇ ಸಾಕಷ್ಟು ಬಾರಿ ಯೋಚಿಸಲಾಗಿದೆ. ಆದರೆ ಅರಮನೆಯ ಮೂಲ ವಿನ್ಯಾಸದ ಮಾಹಿತಿಯಿಲ್ಲದ ಕಾರಣ ಮರು ನಿರ್ಮಾಣ ವಿಳಂಬವಾಗುತ್ತಿದೆ. ಸದ್ಯಕ್ಕೆ ಉಳಿದ ಅವಶೇಷಗಳನ್ನು ಸಂರಕ್ಷಣೆ ಮಾಡುವ ಉದ್ದೇಶದಿಂದ ತ್ವರಿತವಾಗಿ ಈ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ₹3 ಕೋಟಿ ವೆಚ್ಚದ ರಾಣಿ ಚನ್ನಮ್ಮನ ಭವನ ನಿರ್ಮಾಣದ ಹಂತದಲ್ಲಿದೆ. ಒಟ್ಟು ₹18 ಕೋಟಿ ಅನುದಾನದಲ್ಲಿ ವಿವಿಧ ಕಾಮಗಾರಿಗಳು ಪ್ರಗತಿಯಲ್ಲಿವೆ’ ಎಂದು ಮಾಹಿತಿ ನೀಡಿದರು.

ಇದನ್ನು ಓದಿದ್ದೀರಾ? ಬೆಳಗಾವಿ | ಅ. 24, 25ಕ್ಕೆ ಮೂಡಲಗಿಯಲ್ಲಿ 16ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ

ಈ ಸಂದರ್ಭದಲ್ಲಿ ಕಿತ್ತೂರಿನ ಶಾಸಕ ಬಾಬಾಸಾಹೇಬ ಪಾಟಿಲ್, ಕಿತ್ತೂರು ಸಂಸ್ಥಾನ ಮಠದ ರಾಜಗುರು ಮಡಿವಾಳ ರಾಜಯೋಗೀಂದ್ರ ಸ್ವಾಮೀಜಿ, ನಿಚ್ಚಣಕಿ ಮಡಿವಾಳೆಶ್ವರ ಸ್ವಾಮಿಜಿ, ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಪೋಲಿಸ್ ವರಿಷ್ಠಾಧಿಕಾರಿ ಭೀಮಾಶಂಕರ ಗುಳೇದ, ಕಿತ್ತೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತೆ ಪ್ರಭಾವತಿ, ತಹಸಿಲ್ದಾರ್ ಹಾಗೂ ಇತರ ಅಧಿಕಾರಿಗಳು ಸಾರ್ವಜನಿಕರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

Download Eedina App Android / iOS

X