ಬೆಳಗಾವಿ | ಹಿಡಕಲ್ ಜಲಾಶಯದಲ್ಲಿ ನೀರಿನ ಸಂಗ್ರಹ ಸಾಮರ್ಥ್ಯ ಕುಸಿತ

Date:

ಉತ್ತರ ಕರ್ನಾಟಕ ಭಾಗದ ಬೆಳಗಾವಿ, ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಗಳಿಗೆ ನೀರೊದಗಿಸುವ ಪ್ರಮುಖ ನೀರಿನ ಮೂಲವಾದ ಬೆಳಗಾವಿ ಜಿಲ್ಲೆಯ ಹಿಡಕಲ್ ಜಲಾಶಯದಲ್ಲಿ ಅಪಾರ ಪ್ರಮಾಣದ ಹೂಳು ತುಂಬಿದ್ದು, ಅಣೆಕಟ್ಟೆಯ ನೀರಿನ ಸಂಗ್ರಹ ಸಾಮರ್ಥ್ಯ ಕಡಿಮೆಯಾಗಿದೆ. ಹೂಳು ತೆಗೆಯುವಂತೆ ಈ ಜಿಲ್ಲೆಗಳ ಜನರು ಒತ್ತಾಯಿಸುತ್ತಿದ್ದರೂ, ಇದೂವರೆಗೂ ಹೂಳು ತೆಗೆಯಲಾಗಿಲ್ಲ. ಹೀಗಾಗಿ, ಹೆಚ್ಚಿ ಪ್ರಮಾಣದ ನೀರು ಸಂಗ್ರಹವಾಗದೇ, ಮೂರು ಜಿಲ್ಲೆಗಳ ನರಲ್ಲಿ ಆತಂಕ ಮೂಡಿಸಿದೆ.

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹಿಡಕಲ್ ಗ್ರಾಮ ಹಿಡಕಲ್ ಅಣೆಕಟ್ಟನ್ನು 1977ರಲ್ಲಿ ಘಟಪ್ರಭಾ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿದೆ. ಅಣೆಕಟ್ಟು 62.5 ಮೀಟರ್ ಎತ್ತರವಿದ್ದು, 10 ಲಂಬ ಕ್ರೆಸ್ಟ್ ಗೇಟ್‌ಗಳನ್ನು ಹೊಂದಿದೆ. ಜಲಾಶಯವು 51.1 ಟಿಎಂಸಿ ಅಡಿಗಳಷ್ಟು ಸಂಗ್ರಹ ಸಾಮರ್ಥ್ಯ ಹೊಂದಿದ್ದು, 8,20,000 ಎಕರೆಗೂ ಹೆಚ್ಚು ಕೃಷಿ ಭೂಮಿಗೆ ನೀರನ್ನು ಒದಗಿಸುತ್ತದೆ. ಅಲ್ಲದೆ, ಎರಡು ವಿದ್ಯುತ್ ಘಟಕಗಳನ್ನೂ ಹೊಂದಿದ್ದು, ಸುಮಾರು 32 ಮೆಗಾ ವ್ಯಾಟ್‌ ಜಲವಿದ್ಯುತ್ ಉತ್ಪಾದಿಸುತ್ತವೆ. ಹಿಡಕಲ್ ಅಣೆಕಟ್ಟು ಯೋಜನೆಯಿಂದ ಬೆಳಗಾವಿ, ಹುಕ್ಕೇರಿ, ಸಂಕೇಶ್ವರ, ಬಾಗಲಕೋಟೆ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳು ಮತ್ತು ಪಟ್ಟಣಗಳಿಗೆ ಕುಡಿಯುವ ನೀರು ಸರಬರಾಜು ಮಾಡಲಾಗುತ್ತದೆ.

ಅಂದಿನಿಂದ ಇಂದಿನವರೆಗೂ (45 ವರ್ಷ) ಈ ಜಲಾಶಯದಲ್ಲಿ ಒಮ್ಮೆಯೂ ಹೂಳು ತೆಗೆಯಲಾಗಿಲ್ಲ. ಪರಿಣಾಮ, ನೀರಿನ ಸಂಗ್ರಹಣಾ ಮಟ್ಟ ಕುಸಿದಿದೆ. ಇದು ಮೂರು ಜಿಲ್ಲೆಗಳ ಜನರನ್ನು ಆತಂಕಕ್ಕೆ ದೂಡಿದೆ. ಇತ್ತೀಚೆಗೆ ಹುಕ್ಕೇರಿಯಲ್ಲಿ ಶಾಸಕ ನಿಖಿಲ್ ಕತ್ತಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲೂ ಹಿಡಕಲ್ ಜಲಾಶಯದ ಹೂಳು ಕುರಿತು ಚರ್ಚೆ ನಡೆದಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಜಲಸಂಪನ್ಮೂಲ ಅಭಿವೃದ್ಧಿ ಸಂಸ್ಥೆಯ ಜಲವಿಜ್ಞಾನದ ಸಮೀಕ್ಷೆಯ ಪ್ರಕಾರ, ರಾಜ್ಯದ ಹಲವಾರು ಅಣೆಕಟ್ಟುಗಳ ಸಂಗ್ರಹಣಾ ಸಾಮರ್ಥ್ಯವು ಹೂಳಿನಿಂದ ಕಡಿಮೆಯಾಗಿದೆ. ತುಂಗಭದ್ರಾ, ನಾರಾಯಣಪುರ, ಆಲಮಟ್ಟಿ, ಹಿಡಕಲ್ ಜಲಾಶಯವೂ ಸೇರಿದಂತೆ ಹೆಚ್ಚಿನ ಜಲಾಶಯಗಳಲ್ಲಿ ಹೂಳು ಸಂಗ್ರಹವಾಗಿದ್ದು, ಸಂಗ್ರಹ ಸಾಮರ್ಥ್ಯ ಕಳೆದುಕೊಂಡಿದೆ.

ಈ ಸುದ್ದಿ ಓದಿದ್ದೀರಾ?: ದಕ್ಷಿಣ ಕನ್ನಡ | ನೀರಿಗೆ ಹಾಹಾಕಾರ; ಮುಚ್ಚಿದ ಕಾಲೇಜುಗಳು, ಶುರುವಾದ ಆನ್‌ಲೈನ್ ತರಗತಿಗಳು

ಇತ್ತೀಚಿನ ವರ್ಷಗಳಲ್ಲಿ ರಾಜ್ಯದ ಅಣೆಕಟ್ಟುಗಳಲ್ಲಿ ಹೆಚ್ಚಿನ ಪ್ರಮಾಣದ ಹೂಳು ತುಂಬಿರುವುದು ಆತಂಕಕಾರಿಯಾಗಿದೆ.
2019ರಲ್ಲಿ ಕರ್ನಾಟಕ ನೀರಾವರಿ ನಿಗಮದ ಕೇಂದ್ರ ಕಚೇರಿಗೆ ಸಮೀಕ್ಷೆಯ ವರದಿಯನ್ನು ಸಲ್ಲಿಸಲಾಗಿದೆ ಎಂದು ಕರ್ನಾಟಕ ನೀರವಾರಿ ನಿಗಮ ಲಿಮಿಟೆಡ್ (ಕೆಎನ್‌ಎನ್‌ಎಲ್) ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. ಆದರೆ ಈ ವರದಿಯ ಬಗ್ಗೆ ಸರ್ಕಾರದಿಂದ ಇದುವರೆಗೆ ಯಾವುದೇ ಮಾಹಿತಿ ಹೊರಬಿದ್ದಿಲ್ಲ.

“ನೀರು ತುಂಬಿದ ಅಣೆಕಟ್ಟಿನ ಹೂಳು ತೆಗೆಯುವುದು ಕಷ್ಟಕರ.’1 ಟಿಎಂಸಿ ಅಡಿ ಹೂಳು ತೆಗೆಯಲು ಅಂದಾಜು 5,000 ಕೋಟಿ ರೂ. ವೆಚ್ಚವಾಗುತ್ತದೆ. ಆ ವೆಚ್ಚದಲ್ಲಿ ಹೊಸ ಅಣೆಕಟ್ಟು ನಿರ್ಮಿಸಬಹುದು,” ಎಂದು ನೀರಾವರಿ ಇಲಾಖೆಯ ನಿವೃತ್ತ ಅಧಿಕಾರಿ ಜಿ.ಎಂ ಶರಭಯ್ಯ ಹೇಳಿದ್ದಾರೆ.

“ಹಿಡಕಲ್ ಜಲಾಶಯದ ಹೂಳು ಶೇಖರಣೆಯಿಂದ ಸುಮಾರು 4-5 ಟಿಎಂಸಿ ಅಡಿ ನೀರು ಸಂಗ್ರಹಣಾ ಸಾಮರ್ಥ್ಯ ಕುಸಿದಿರುವುದು ನಿಜ. ಹೂಳು ಮಾತ್ರ ಈ ಜಲಾಶಯದ ಸಮಸ್ಯೆಯಲ್ಲ. ಅಣೆಕಟ್ಟು 45 ವರ್ಷಗಳಷ್ಟು ಹಳೆಯದು. ಇಲಾಖೆಯ ಹಿರಿಯ ಅಧಿಕಾರಿಗಳು ಹೂಳಿನ ಸಮಸ್ಯೆಗೆ ಲಾಭದಾಯಕ ಪರಿಹಾರ ಹುಡುಕುತ್ತಿದ್ದಾರೆ” ಎಂದು ಹಿಡಕಲ್ ಅಣೆಕಟ್ಟೆಯ ಸಹಾಯಕ ಕಾರ್ಯಪಾಲಕ ಅಭಿಯಂತರ ಎಸ್.ಎಂ ಮಡಿವಾಳೆ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯನಗರ | ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ವಿರುದ್ಧ ಅಕ್ರಮ ಮರಳು ದಂಧೆ ಆರೋಪ

ರಾಜ್ಯದಲ್ಲಿ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಿರುವಾಗಲೇ ದಾವಣಗೆರೆ ಜಿಲ್ಲೆಯಲ್ಲಿ ಜಿಲ್ಲಾ...

ಬಿಸಿಲ ಧಗೆಗೆ ಬೆಂದ ಜನರಿಗೆ ತಂಪೆರೆದ ಮಳೆ: ಶನಿವಾರ ಬೆಳಿಗ್ಗೆ ರಾಜ್ಯದ ಹಲವೆಡೆ ಮಳೆ

ತಾಪಮಾನ ಹೆಚ್ಚಳದಿಂದ ಬಸವಳಿದ್ದಿದ್ದ ರಾಜ್ಯದ ಜನತೆಗೆ ತಡವಾಗಿ ಆರಂಭವಾದ ಪೂರ್ವ ಮುಂಗಾರು...

ಬೆಂಗಳೂರಿಗೆ ಪ್ರಧಾನಿ ಮೋದಿ; ಸಂಚಾರ ಮಾರ್ಗ ಬದಲಾವಣೆ

ಲೋಕಸಭಾ ಚುನಾವಣೆ ಇನ್ನೇನು ಕೆಲವೇ ದಿನಗಳಲ್ಲಿ ನಡೆಯಲಿದ್ದು, ರಾಜಕೀಯ ಪಕ್ಷಗಳ ಪ್ರಚಾರ...

ಉಡುಪಿ | ಸಮವಸ್ತ್ರಕ್ಕೆ ಗೌರವ ತರುವ ಕೆಲಸ ಆಗಬೇಕು: ಎಸ್‌ಪಿ ಅರುಣ ಕೆ

ದೇಶದ ಕಾನೂನು ಹಾಗೂ ಸಾಮಾಜಿಕ ಭದ್ರತೆಗಾಗಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್, ಗೃಹ...