ಡೀಸೆಲ್ ದರ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಬಸ್ ದರ ಏರಿಕೆ ಅನಿವಾರ್ಯ ಎಂದು ವಾಯವ್ಯ ಕರ್ನಾಟಕ ಸಾರಿಗೆ ಅಧ್ಯಕ್ಷ ಮತ್ತು ಕಾಗವಾಡ ಶಾಸಕರಾದ ರಾಜು ಕಾಗೆ ತಿಳಿಸಿದ್ದಾರೆ.
ಈ ಸಂಬಂಧ ಹೇಳಿಕೆ ನೀಡಿರುವ ಅವರು, ಡಿಸೇಲ್ ಮತ್ತು ಬಸ್ ವಾಹನಗಳ ಬಿಡಿ ಭಾಗಗಳ ದರ ಹೆಚ್ಚಳವಾಗಿರುವುದು ಟಿಕೆಟ್ ದರ ಹೆಚ್ಚಳ ಮಾಡಬೇಕಾಗಿದೆ. ಸುಮಾರು ನಾಲ್ಕು ವರ್ಷಗಳಿಂದ ಬಸ್ ಟಿಕೆಟ್ ದರ ಹೆಚ್ಚಳ ಮಾಡಿಲ್ಲ. ಅಷ್ಟೇ ಅಲ್ಲದೆ, ಬಸ್ ವಾಹನ ಬಿಡಿಭಾಗಗಳು ಸೇರಿದಂತೆ ಡಿಸೆಲ್ ಏರಿಕೆಯ ಕಾರಣ ಬಸ್ ಟಿಕೆಟ್ ದರ ಹೆಚ್ಚಳ ಮಾಡುವ ಕುರಿತು ಚಿಂತನೆ ನಡೆದಿದೆ ಆದರೆ ಇನ್ನು ಸಂಪೂರ್ಣವಾಗಿ ನಿರ್ಣಯ ಕೈಗೊಂಡಿಲ್ಲ ಎಂದು ತಿಳಿಸಿದ್ದಾರೆ.
ಸರ್ಕಾರದ ಶಕ್ತಿ ಯೋಜನೆಯಿಂದ ಸಾರಿಗೆ ಇಲಾಖೆಗೆ ಹೆಚ್ಚಿನ ಆದಾಯ ಬರುತ್ತಿದೆ. 400 ಬಸ್ಸುಗಳನ್ನು ಸಹ ಹೆಚ್ಚಿಗೆ ಖರೀದಿಸಲಾಗಿದೆ. ಹಾಗೆಯೇ ಹಳೆಯ ಬಸ್‌ಗಳನ್ನು ಮಾರಾಟ ಮಾಡಲಾಗುತ್ತಿದೆ. ಈಗ ಹೊಸದಾಗಿ 10 ಬಸ್‌ಗಳು ಬಂದಿವೆ ಮತ್ತು ಆ ಬಸ್ ಗಳ ಪ್ರಾಯೋಗಿಕ ಚಾಲನೆಯು ನಡೆದಿದೆ ಎಂದು ತಿಳಿಸಿದರು.
ಇದನ್ನು ಓದಿದ್ದೀರಾ? ಹೃದಯ ವಿದ್ರಾವಕ ಘಟನೆ | ಸಿಗದ ಆ್ಯಂಬುಲೆನ್ಸ್: ಮೃತಪಟ್ಟ ಮಕ್ಕಳನ್ನು ಹೆಗಲ ಮೇಲೆ ಹೊತ್ತೊಯ್ದ ಪೋಷಕರು!
ಒಂದು ವಾರದೊಳಗೆ 400 ಬಸ್‌ಗಳು ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆಗೆ ಬರಲಿವೆ. ನಂತರ ಅಥಣಿ, ಕಾಗವಾಡ, ಚಿಕ್ಕೋಡಿ, ಬೆಳಗಾವಿ, ಬಾಗಲಕೋಟ ವಿವಿಧ ಭಾಗಗಳಲ್ಲಿ ಅವಶ್ಯಕತೆಗೆ ಅನುಗುಣವಾಗಿ ಹಂಚಿಕೆ ಮಾಡಿ ಪ್ರಯಾಣಿಕರಿಗೆ ಅನುಕೂಲ ಮಾಡಿ ಕೊಡಲಾಗುವುದು ಎಂದು ಶಾಸಕ ರಾಜು ಕಾಗೆ ತಿಳಿಸಿದ್ದಾರೆ.
