ಡಿಸೆಂಬರ್ 31ರೊಳಗೆ ಬೆಳಗಾವಿಯನ್ನು ವಿಭಜಿಸಿ, ಹೊಸ ಚಿಕ್ಕೋಡಿ ಜಿಲ್ಲೆಯನ್ನು ರಚನೆ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.
ಚಿಕ್ಕೋಡಿ ಜಿಲ್ಲೆ ನಿರ್ಮಾಣಕ್ಕಾಗಿ ಹೋರಾಟ ನಡೆಸುತ್ತಿರುವ ‘ಚಿಕ್ಕೋಡಿ ಜಿಲ್ಲಾ ಹೋರಾಟ ಸಮಿತಿ’ಯ ಸದಸ್ಯರು ಬೆಳಗಾವಿಯಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನು ಭೇಟಿ ಮಾಡಿ, ಹಕ್ಕೊತ್ತಾಯ ಸಲ್ಲಿಸಿದ್ದಾರೆ.
ಹಕ್ಕೊತ್ತಾಯ ಸ್ವೀಕರಿಸಿ ಮಾತನಾಡಿದ ಲಕ್ಷ್ಮಿ ಹೆಬ್ಬಾಳ್ಕರ್, “ಸರ್ಕಾರಿ ಯೋಜನೆಗಳ ಫಲಾನುಭವವನ್ನು ಜನರಿಗೆ ತಲುಪುವಂತೆ ಮಾಡಲು ಬೆಳಗಾವಿ ಜಿಲ್ಲೆಯನ್ನು ವಿಭಜಿಸುವುದು ಅಗತ್ಯವಾಗಿದೆ. ಬೆಳಗಾವಿಯನ್ನು ವಿಭಜಿಸಲು ಸರ್ಕಾರವು ನಿರ್ಧರಿಸಿದ್ದು, ಶೀಘ್ರವೇ ಕ್ರಮ ಕೈಗೊಳ್ಳಲಾಗುತ್ತದೆ” ಎಂದು ಹೇಳಿದ್ದಾರೆ.