ಬೆಳಗಾವಿ | ತೆಲಂಗಾಣ ಮಾದರಿಯಲ್ಲಿ ಸಾಲಮನ್ನಾಗೆ ರೈತರ ಒತ್ತಾಯ

Date:

Advertisements

ತೆಲಂಗಾಣ ಮಾದರಿಯಲ್ಲಿ ಕರ್ನಾಟಕದಲ್ಲೂ ರೈತರ ಸಾಲ ಮನ್ನಾ ಮಾಡಬೇಕು ಎಂದು ಆಗ್ರಹಿಸಿ ನೇಗಿಲಯೋಗಿ ರೈತ ಸೇವಾ ಸಂಘದ ನೇತೃತ್ವದಲ್ಲಿ ಬೆಳಗಾವಿಯ ರೈತರು ಜಿಲ್ಲಾಧಿಕಾರಿ ಕಚೇರಿಗೆ ಇಂದು (ಫೆ.12) ಮುತ್ತಿಗೆ ಹಾಕಲು ಯತ್ನಿಸಿದರು.

ಜಿಲ್ಲಾಧಿಕಾರಿ ಕಚೇರಿ ಎದುರಿನ ರಸ್ತೆ ತಡೆದ ಪ್ರತಿಭಟಿಸಿದ ರೈತರು, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ರೈತರನ್ನು ತಡೆಯಲು ಮುಂದಾದ ಪೊಲೀಸರ ಜೊತೆ ವಾಗ್ವಾದ ನಡೆಯಿತು. ಪೊಲೀಸ್‌ ಅಧಿಕಾರಿಗಳು ರೈತರ ಮನವೊಲಿಕೆಗೆ ಯತ್ನಿಸಿದರು. ರೈತರು ಪಟ್ಟು ಬಿಡಲಿಲ್ಲ.

ಕೃಷಿ ಸಾಲ ನೀತಿ ಬದಲಾಗಬೇಕು, ಎಲ್ಲ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಬಡ್ಡಿ ರಹಿತ ಸಾಲ ಸೌಕರ್ಯ ಒದಗಿಸಬೇಕು, ಸಕ್ಕರೆ ಕಾರ್ಖಾನೆಗಳು ಸಕ್ಕರೆ ಇಳುವರಿಯಲ್ಲಿ ಮೋಸ ಮಾಡುತ್ತವೆ ಇದನ್ನು ತಪ್ಪಿಸಲು ವೈಜ್ಞಾನಿಕ ಮಾನದಂಡ ಅಳವಡಿಸಬೇಕು. ಕೀಟನಾಶಕ, ರಸಗೊಬ್ಬರ, ಹನಿ ನೀರಾವರಿ ಉಪಕರಣಗಳು ಮತ್ತು ಟ್ರ್ಯಾಕ್ಟರ್‌ಗಳ ಬಿಡಿಭಾಗಗಳಿಗೆ ಜಿಎಸ್‌ಟಿ ವಿಧಿಸುತ್ತಿರುವುದನ್ನು ರದ್ದುಪಡಿಸಬೇಕು ಎಂದು ಪ್ರತಿಭಟನಾನಿರತ ರೈತರು ಆಗ್ರಹಿಸಿದರು.

Advertisements

ಖಾನಾಪುರ ತಾಲೂಕಿನಲ್ಲಿ 210 ಗ್ರಾಮ ಮತ್ತು 51 ಗ್ರಾಮ ಪಂಚಾಯ್ತಿಗಳಿವೆ. ಇಲ್ಲಿ ಕೊರೆಯಲಾಗಿದ್ದ ಕೊಳವೆ ಬಾವಿಗಳು ಬತ್ತಿಹೋಗಿವೆ. ಜನ-ಜಾನುವಾರುಗಳಿಗೆ ತಾಲೂಕಿನಲ್ಲಿ ಕುಡಿಯುವ ನೀರಿಲ್ಲ. ಮಹಾರಾಷ್ಟ್ರ ಮತ್ತು ಗೋವಾ ಗಡಿಗೆ ಹೊಂದಿಕೊಂಡ ಈ ತಾಲೂಕು ಎಲ್ಲ ಸರ್ಕಾರಗಳ ಅವಧಿಯಲ್ಲೂ ಕಡೆಗಣನೆಗೆ ಒಳಗಾಗಿದೆ. ಇಲ್ಲಿ ತಲೆದೋರಿರುವ ಕುಡಿಯುವ ನೀರಿನ ಸಮಸ್ಯೆ ನೀಗಿಸಬೇಕು. ಸಮರ್ಪಕ ಬಸ್‌ ಸೌಕರ್ಯ ಕಲ್ಪಿಸುವುದಕ್ಕಾಗಿ ಹದಗೆಟ್ಟಿರುವ ರಸ್ತೆಗಳನ್ನು ದುರಸ್ತಿಗೊಳಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್‌ ಶಿಂಧೆ ಅವರಿಗೆ ಮನವಿ ಸಲ್ಲಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

Download Eedina App Android / iOS

X