ಬೆಳಗಾವಿ | ‘ಗಾಂಧಿ ಭಾರತ’ ಸಮಾವೇಶ: ಯಶಸ್ವಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ವಿನಯ ಕುಲಕರ್ಣಿ ಕರೆ

Date:

Advertisements

ಮುಂಬರುವ ಜ. 21 ರಂದು ಬೆಳಗಾವಿಯಲ್ಲಿ ನಡೆಯಲಿರುವ ಜೈಬಾಪು, ಜೈಭೀಮ, ಜೈ ಸಂವಿಧಾನ ಘೋಷಣೆಯಡಿ ‘ಗಾಂಧಿ ಭಾರತ’ ಕಾರ್ಯಕ್ರಮ ಯಶಸ್ವಿ ಮಾಡುವ ಸಲುವಾಗಿ ಧಾರವಾಡ‌ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಶಾಸಕ ಮತ್ತು ಕೆಪಿಸಿಸಿ ಕಾರ್ಯಾಧ್ಯಕ್ಷ ವಿನಯ ಕುಲಕರ್ಣಿ ಅಧ್ಯಕ್ಷತೆಯಲ್ಲಿ ಕಿತ್ತೂರಿನ ನಿರೀಕ್ಷಣ ಮಂದಿರದಲ್ಲಿ (ಐಬಿ) ಪೂರ್ವಭಾವಿ ಸಭೆ ಹಮ್ಮಿಕೊಂಡಿದ್ದರು.

ಸಭೆಯನ್ನು ಉದ್ದೇಸಿಸಿ ಶಾಸಕ ವಿನಯ ಕುಲಕರ್ಣಿ ಮಾತನಾಡಿ, ಮಹಾತ್ಮಾ ಗಾಂಧೀಜಿಯವರು 1924 ರಲ್ಲಿ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರಾಗಿ ಪ್ರಥಮ ಕಾಂಗ್ರೆಸ್ ಅಧಿವೇಶನವನ್ನು ಬೆಳಗಾವಿಯಲ್ಲಿ ನಡೆಸಿ 100 ವರ್ಷ ತುಂಬಿದ ಹಿನ್ನೆಲೆಯಲ್ಲಿ ಐತಿಹಾಸಿಕ ಕಾರ್ಯಕ್ರಮದಲ್ಲಿ ಭಾಗವಹಿಸುವದು ನಮ್ಮೆಲ್ಲರ ಪುಣ್ಯವಾಗಿದ್ದು, ಅಧಿವೇಶನ ನಮ್ಮ ಗಡಿಭಾಗದಲ್ಲಿ ಇರುವದರಿಂದ ನಮ್ಮ ಜವಾಬ್ದಾರಿ ಹೆಚ್ಚಿದೆ. ಎಲ್ಲರೂ ಮುತವರ್ಜಿ ವಹಿಸಿ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು, ಹಾಗೂ ಸಾರ್ವಜನಿಕರು ಭಾಗವಯಿಸುವಂತೆ ಪ್ರಯತ್ನಿಸಬೇಕು. ಎಲ್ಲಾ ರಾಷ್ಟ್ರೀಯ ನಾಯಕರು ಆ ಕಾರ್ಯಕ್ರಮಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದರು.

ಈ ವರದಿ ಓದಿದ್ದೀರಾ? ಹುಬ್ಬಳ್ಳಿ | ಮೋದಿ ಸರ್ಕಾರಕ್ಕೆ ಬೆಳಗಾವಿ ಸಮಾವೇಶದ ಬಗ್ಗೆ ಭಯ ಶುರುವಾಗಿದೆ: ಸುರ್ಜೇವಾಲ
 
ಈ ಸಂಧರ್ಭದಲ್ಲಿ ಶಿವಲೀಲಾ ಕುಲಕರ್ಣಿ, ಹಾಗೂ ವೈಶಾಲಿ ಕುಲಕರ್ಣಿ ಭಾಗವಹಿಸಿದ್ದರು. ಅರವಿಂದ ಏಗನಗೌಡರ ಪ್ರಸ್ತಾವಿಕ ಮಾತನಾಡಿದರು. ಈ ಸಂಧರ್ಭದಲ್ಲಿ, ಈಶ್ವರ ಶಿವಳ್ಳಿ, ಚನಬಸಪ್ಪ ಮಟ್ಟಿ, ಪಾರಿಸ್ ಪತ್ರಾವಳಿ, ಮಂಜು ಮಸೂತಿ, ಮೈನುದ್ದೆನ ಚೌದರಿ, ಶಿವು ಮೆಣಸಿನಕಾಯಿ, ದೀಪಾ ನೀರಳಕಟ್ಟಿ, ಪರಮೇಶ್ವರ್ ಕಟ್ಟಿಮನಿ, ಮಹಾನಗರ ಪಾಲಿಕೆ ಸದಸ್ಯರು, ಗ್ರಾಮ ಪಂಚಾಯತಿ ಸದಸ್ಯರು, ಮಾಜಿ ಜಿಲ್ಲಾ ಪಂಚಾಯತಿ ಸದಸ್ಯರು, ತಾಲೂಕು ಪಂಚಾಯತಿ ಸದಸ್ಯರು, ಕಾರ್ಯಕರ್ತರು ಭಾಗವಹಿಸಿದ್ದರು.

Advertisements
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

Download Eedina App Android / iOS

X