ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ನಗರ ಪೊಲೀಸ್ ಕಮಿಷನರ್ ಭೂಷಣ್ ಗುಲಾಬರಾವ್ ಬೊರಸೆ ತಿಳಿಸಿದರು
ಭಾನುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾನೂನು ಸಂಘರ್ಷಕ್ಕೆ ಒಳಪಟ್ಟ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ. ಪರಾರಿಯಾದ ಮತ್ತೊಬ್ಬ ಆರೋಪಿ ಬಂಧನಕ್ಕೆ ಜಾಲ ಬೀಸಿದ್ದೇವೆ ಎಂದು ಮಾಹಿತಿ ನೀಡಿದರು.
‘ಪ್ರಾರಂಭದಲ್ಲಿ ಒಬ್ಬನು ಬಾಲಕಿ ಪರಿಚಯಿಸಿಕೊಂಡು, ಸ್ನೇಹ ಬೆಳೆಸಿಕೊಂಡು ಆತ ಮತ್ತು ಸ್ನೇಹಿತರು 2024ರ ಡಿಸೆಂಬರ್‌ನಲ್ಲಿ ಪುಸಲಾಯಿಸಿಕೊಂಡು ಹೋಗಿ ಅತ್ಯಾಚಾರ ಮಾಡಿದ್ದಾರೆ. ಅತ್ಯಾಚಾರದ ದೃಶ್ಯವನ್ನು ಆರೋಪಿಗಳು ವಿಡಿಯೊ ರೆಕಾರ್ಡ್ ಮಾಡಿಕೊಂಡು, ಅದನ್ನೇ ತೋರಿಸಿ ಬ್ಲ್ಯಾಕ್‌ಮೇಲ್ ಮಾಡಿ, 2025ರ ಜನವರಿಯಲ್ಲಿ ಮತ್ತೆ ಮೂವರು ಅತ್ಯಾಚಾರ ಮಾಡಿದ್ದಾರೆ. ಬೇರೆ ಬೇರೆ ಸ್ಥಳಗಳಲ್ಲಿ ಅತ್ಯಾಚಾರ ಮಾಡಿದ್ದಾರೆ. ‘ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ಎಪಿಎಂಸಿ ಠಾಣೆಯಲ್ಲಿ 6 ಮಂದಿ ವಿರುದ್ಧ ಶನಿವಾರ ಎಫ್‌ಐಆರ್ ದಾಖಲಾಗಿತ್ತು. ಅದಾದ 24 ಗಂಟೆಯೊಳಗೆ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸಂತ್ರಸ್ತೆ ಮತ್ತು ಆರೋಪಿಗಳು ಬೆಳಗಾವಿ ಜಿಲ್ಲೆಯವರೇ ಆಗಿದ್ದಾರೆ’ ಎಂದು ಹೇಳಿದರು.