ಬೆಳಗಾವಿ | ಕಿತ್ತೂರು ಉತ್ಸವದಲ್ಲಿ ಸ್ಥಳೀಯ ಕಲಾವಿದರಿಗೆ ಅವಕಾಶ ನೀಡಿ: ಬಾಬಾಸಾಹೇಬ ಪಾಟೀಲ್

Date:

ಕಿತ್ತೂರು ಉತ್ಸವದಲ್ಲಿ ರಾಷ್ಟ್ರೀಯ ಮತ್ತು ರಾಜ್ಯಮಟ್ಟದ ಕಲಾವಿದರ ಜತೆಗೆ ಸ್ಥಳೀಯ ಕಲಾವಿದರಿಗೆ ಅವಕಾಶ ನೀಡಬೇಕು ಎಂದು ಶಾಸಕ ಬಾಬಾಸಾಹೇಬ ಪಾಟೀಲ್ ತಿಳಿಸಿದರು.

- Advertisement -

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಉಪವಿಭಾಗಾಧಿಕಾರಿಗಳ ಕಚೇರಿಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿ ಕಿತ್ತೂರಿನ ರಾಣಿ ಚೆನ್ನಮ್ಮಳ 200ನೇ ವಿಜಯೋತ್ಸವ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಆಯೋಜಿಸುವ ಮೂಲಕ ಯಶಸ್ವಿಗೊಳಿಸಲು ಸಮಿತಿಗಳ ಸದಸ್ಯರು ಮತ್ತು ಅಧಿಕಾರಿಗಳು ಶ್ರಮಿಸಬೇಕು ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಮೂರು ದಿನಗಳ ಕಾಲ ಜರುಗಲಿರುವ ಉತ್ಸವದ ದಿನಗಳಂದು ಆಗಮಿಸುವ ಸಾರ್ವಜನಿಕರಿಗೆ ಊಟೋಪಚಾರ ಹಾಗೂ ಸಾರಿಗೆ ವ್ಯವಸ್ಥೆಯಲ್ಲಿ ಯಾವುದೆ ಕೊರತೆ ಆಗಬಾರದು. ಉತ್ಸವದ ಮೊದಲನೇ ದಿನ ಜರುಗಲಿರುವ ಮೆರವಣಿಗೆಯಲ್ಲಿ ಸಾಗುವ ಕಲಾವಿದರು, ಸಾರ್ವಜನಿಕರಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. ಕಾರ್ಯಕ್ರಮಗಳ ದಿನದಂದು ಜರುಗಲಿರುವ ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆಯಲ್ಲಿ ಯಾವುದೇ ಗೊಂದಲಗಳು ಆಗಬಾರದು. ರಾಷ್ಟ್ರೀಯ ಮತ್ತು ರಾಜ್ಯಮಟ್ಟದ ಕಲಾವಿದರ ಜತೆಗೆ ಸ್ಥಳೀಯ ಕಲಾವಿದರಿಗೆ ಅವಕಾಶ ನೀಡಬೇಕು ಎಂದರು.

ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಮಾತನಾಡಿ, ಕಿತ್ತೂರು ಉತ್ಸವ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರ್ವಹಿಸಲು ರಚಿಸಲಾದ ವಿವಿಧ ಸಮಿತಿಗಳು ತಮ್ಮ ಜವಾಬ್ದಾರಿಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು. ಗಣ್ಯವ್ಯಕ್ತಿ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗಾಗಿ ಆಗಮಿಸುವ ಕಲಾತಂಡಗಳಿಗೆ ಪ್ರತ್ಯೇಕವಾಗಿ ನೋಡಲ್‌ ಅಧಿಕಾರಿಗಳನ್ನು ನೇಮಿಸಬೇಕು ಎಂದು ಅಧಿಕಾರಿಗಳಿಗೆ ಆದೇಶಿಸಿದ್ದಾರೆ.

ಇದನ್ನು ಓದಿದ್ದೀರಾ? ಬೆಳಗಾವಿ | ನಷ್ಟದ ಆತಂಕ ಎದುರಿಸುತ್ತಿರುವ ಸೋಯಾಬೀನ್ ಬೆಳೆದ ಬೆಳೆಗಾರರು!

ಪೋಲೀಸ್‌ ವರಿಷ್ಠಾಧಿಕಾರಿ ಭೀಮಾಶಂಕರ ಗಳೇದ, ಉಪವಿಭಾಗಾಧಿಕಾರಿ ಪ್ರಭಾವತಿ ಫಕೀರಪೂರ, ಜಂಟಿ ನಿರ್ದೇಶಕ ಪ್ರವಾಸೋದ್ಯಮ ಇಲಾಖೆ ಹಾಗೂ ಇತರೆ ಉಪ ಸಮಿತಿ ಅಧ್ಯಕ್ಷರು ಸಭೆಯಲ್ಲಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...