ಆಘಾತಕಾರಿ ಪ್ರಕರಣವೊಂದರಲ್ಲಿ, ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಬಸ್ಸಾಪುರ ಗ್ರಾಮ ಪಂಚಾಯತಿ ಅಧ್ಯಕ್ಷ ಭೀಮಶಿ ಕಾಳಿಮಣಿ ವಿರುದ್ಧ ಗಂಭೀರ ಆರೋಪವೊಂದು ಹೇಳಿಬಂದಿದೆ. ಅವರು 2023ರ ನವೆಂಬರ್ನಲ್ಲಿ 15 ವರ್ಷದ ಬಾಲಕಿಯನ್ನು ಬಾಲ್ಯವಿವಾಹವಾಗಿದ್ದಾರೆ ಎಂದು ಆರೋಪಲಾಗಿದೆ. ಪ್ರಕರಣ ಇದೀಗ ಬೆಳಕಿಗೆ ಬಂದಿದೆ.
ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ಅವರು ವಿರುದ್ಧ ದೂರು ದಾಖಲಾಗಿದೆ. ಕಾಣಿಮಣಿ ಅವರು 2023ರ ನವೆಂಬರ್ 5ರಂದು ಅಪ್ತಾಪ್ತ ವಯಸ್ಸಿನ ಬಾಲಕಿಯನ್ನು ವಿವಾಹವಾಗಿದ್ದರು. ಬಾಲಕಿ ಐದು ತಿಂಗಳ ಹಿಂದೆ ಮಗುವಿಗೆ ಜನ್ಮ ನೀಡಿದ್ದಾರೆ. ಆರೋಪ ದೃಢಪಟ್ಟ ಬೆನ್ನಲ್ಲೇ, ಕಾಣಿಮಣಿ ವಿರುದ್ಧ ಪೊಲೀಸರು ಪೋಕ್ಸೊ ಕಾಯ್ದೆಯಡಿಯೂ ಪ್ರಕರಣ ದಾಖಲಿಸಿದ್ದಾರೆ.
ಬಂಧನದಿಂದ ತಪ್ಪಿಸಿಕೊಳ್ಳಲು ಆರೋಪಿಯು ಇಬ್ಬರು ಸಚಿವರ ಹೆಸರುಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾನೆ ಎಂಬ ಆರೋಪಗಳು ಕೇಳಿಬಂದಿವೆ. ಆರೋಪಿ ತಲೆಮರೆಸಿಕೊಂಡಿದ್ದು, ಮಕ್ಕಳ ರಕ್ಷಣಾ ತಂಡಗಳು ಬಸ್ಸಾಪುರ ಗ್ರಾಮಕ್ಕೆ ನಾಲ್ಕು ಬಾರಿ ಭೇಟಿ ನೀಡಿದ್ದರೂ ಆತನನ್ನು ಬಂಧಿಸುವಲ್ಲಿ ವಿಫಲವಾಗಿವೆ ಎಂದು ವರದಿಯಾಗಿದೆ.