ಬೆಳಗಾವಿ | ಟಿಪ್ಪರ್ ಮತ್ತು ಕಾರಿನ ನಡುವೆ ಭೀಕರ ರಸ್ತೆ ಅಪಘಾತ: ಇಬ್ಬರ ಸಜೀವ ದಹನ

Date:

ಕುಂದಾನಗರಿ ಬೆಳಗಾವಿಯಲ್ಲಿ ಟಿಪ್ಪರ್ ಮತ್ತು ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 12 ವರ್ಷದ ಬಾಲಕಿ ಸೇರಿ ಇಬ್ಬರು ಸಜೀವ ದಹನವಾಗಿರುವ ಘಟನೆ ನಡೆದಿದೆ.

- Advertisement -

ಬೆಳಗಾವಿ ತಾಲೂಕಿನ ದೇವಗಿರಿ ಬಂಬರಗಾ ಕ್ರಾಸ್ ಬಳಿ ಈ ದುರ್ಘಟನೆ ಸಂಭವಿಸಿದ್ದು, ಬಂಬರಗಾ ಗ್ರಾಮದ ಮೋಹನ್ ಮಾರುತಿ ಬೆಳಗಾಂವಕರ್ (24) ಹಾಗೂ ಮಚ್ಚೆ ಗ್ರಾಮದ ಬಾಲಕಿ ಸಮಿಕ್ಷಾ ಡಿಯೇಕರ್(12) ಮೃತಪಟ್ಟವರು ಎಂದು ಗುರುತಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

‘ಹಾಸ್ಟೆಲ್‌’ ಇಲ್ಲದ ಶಿಕ್ಷಣದ ಸ್ವರೂಪ ಹೇಗಿರಲಿದೆ?

ಸಾಮಾನ್ಯವಾಗಿ ʼಶಿಕ್ಷಣʼ ಎಂದರೆ ʼತರಗತಿ, ಪಠ್ಯಪುಸ್ತಕ ಮತ್ತು ಪರೀಕ್ಷೆಗಳʼ ಸುತ್ತ ಹೆಣೆದುಕೊಂಡಿರುವ ಕಲ್ಪನೆ. ಆದರೆ ಒಬ್ಬ ವಿದ್ಯಾರ್ಥಿ ದಿನದ ಬಹುಪಾಲು ಕಳೆಯುವ ಜಾಗ ʼಹಾಸ್ಟೆಲ್‌ʼ. ಹೆಚ್ಚಾಗಿ ಚರ್ಚೆಗೆ ಬಾರದ ಈ ʼಹಾಸ್ಟೆಲ್‌ʼ ಎಂಬ...

ಬರದ ಬೇಗೆಯಲ್ಲಿ ರಾಜ್ಯ ಬೆಂದರೂ ಅನುದಾನಕ್ಕ ದನಿ ಎತ್ತದ...

ಸದಾ ಕಾಲ 'ಮೋದಿ ಜಪ' ಮಾಡುತ್ತಾ, ಕೇವಲ ರಾಜಕೀಯಕ್ಕಾಗಿ ಮತ್ತು ಪಕ್ಷದ ಅಜೆಂಡಾಗಳಿಗಾಗಿ ರಾಜ್ಯಾದ್ಯಂತ ಸುತ್ತುವ ಈ ಸಂಸದರಿಗೆ, ನಾಡಿನ ಜನತೆ ಬರಗಾಲದ ತೀವ್ರ ಸಂಕಷ್ಟದಲ್ಲಿ ಬೆಂದು ಹೋಗುತ್ತಿರುವಾಗ ಅದೇ ಪ್ರಧಾನಿ ನರೇಂದ್ರ...

SIR ಅಕ್ರಮ | ಗ್ಯಾನೇಶ್‌ ಕುಮಾರ್ ‘ಅಪರಾಧಿ’ಯಾದ್ರೆ, ಮೋದಿ-ಅಮಿತ್...

ಭಾರತೀಯ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ಅತ್ಯಂತ ಕರಾಳ ಅಧ್ಯಾಯವೊಂದು ಈಗ ಜಗಜ್ಜಾಹೀರಾಗಿದೆ. ಪ್ರತಿಯೊಬ್ಬ ನಾಗರಿಕನ ಅತಿ ದೊಡ್ಡ ರಾಜಕೀಯ ಶಕ್ತಿಯಾಗಿರುವ 'ಮತದಾನದ ಹಕ್ಕು' ಮತ್ತು ಅದನ್ನು ಕಾಯಬೇಕಾದ ಸಾಂವಿಧಾನಿಕ ಸಂಸ್ಥೆಯನ್ನೇ ಆಡಳಿತಾರೂಢ ಮೋದಿ-ಅಮಿತ್ ಶಾ...

ಒಂದೇ ಕುಟುಂಬದ ನಾಲ್ವರು ರಾತ್ರಿ ಮದುವೆ ಕಾರ್ಯಕ್ರಮ ಮುಗಿಸಿಕೊಂಡು ಬಂಬರಗಾ ಗ್ರಾಮಕ್ಕೆ ಕಾರಿನಲ್ಲಿ ವಾಪಸಾಗುತ್ತಿದ್ದರು. ರಾತ್ರಿ 10:30ಕ್ಕೆ ಬಂಬರಗಾ ಕ್ರಾಸ್ ಬಳಿ ಅಡ್ಡ ಬಂದ ಟಿಪ್ಪರ್‌ಗೆ ಕಾರು ಡಿಕ್ಕಿಯಾಗಿದ್ದು, ಅಪಘಾತದ ರಭಸಕ್ಕೆ ಟಿಪ್ಪರ್​ನ ಡಿಸೇಲ್ ಟ್ಯಾಂಕ್ ಒಡೆದು ಬೆಂಕಿ ಹೊತ್ತಿದೆ. ಈ ವೇಳೆ ಕಾರಿನಲ್ಲಿದ್ದ ನಾಲ್ವರ ಪೈಕಿ ಇಬ್ಬರು ಸಜೀವ ದಹನವಾಗಿದ್ದಾರೆ.

ಕಾರಿನಲ್ಲಿದ್ದ ಇನ್ನಿಬ್ಬರು ಮಹೇಶ್ ಬೆಳಗಾಂವಕರ್ ಮತ್ತು ಸ್ನೇಹಾ ಬೆಳಗಾಂವಕರ್ ಎನ್ನುವರನ್ನು ಸ್ಥಳೀಯರು ರಕ್ಷಣೆ ಮಾಡಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಅಪಘಾತಕ್ಕೆ ಎರಡೂ ವಾಹನಗಳು ಹೊತ್ತಿ ಉರಿದಿದ್ದು, ಸಂಪೂರ್ಣ ಸುಟ್ಟು ಕರಕಲಾಗಿವೆ.

ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಅಗ್ನಿಶಾಮಕ ದಳ ಹಾಗೂ ಪೊಲೀಸರು ದೌಡಾಯಿಸಿದ್ದು, ಬೆಂಕಿ ನಂದಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಸೈಟ್​ ಕೊಡಿಸುವುದಾಗಿ ಎನ್​ಆರ್​ಐಗೆ ₹30 ಲಕ್ಷ ವಂಚನೆ: ಟ್ವೀಟ್ ಮೂಲಕ ನಗರ ಪೊಲೀಸ್ ಕಮೀಷನರ್​ಗೆ ದೂರು

ಸ್ಥಳಕ್ಕೆ ಡಿಸಿಪಿ ಸ್ನೇಹಾ, ಎಸಿಪಿ ಮತ್ತು ಕಾಕತಿ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದು, ಇಬ್ಬರ ಶವವನ್ನು ಮರಣೋತ್ತರ ಪರೀಕ್ಷೆಗೆ ಬಿಮ್ಸ್ ಆಸ್ಪತ್ರೆ ಶವಾಗಾರಕ್ಕೆ ರವಾನಿಸಿದ್ದಾರೆ.

ಅಪಘಾತವಾಗುತ್ತಿದ್ದಂತೆಯೇ ಟಿಪ್ಪರ್​ ಚಾಲಕ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ. ಕಾಕತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ |‘ನಾಸ್ತಿಕತೆ ಎಂದರೆ ಧರ್ಮವಿರೋಧವಲ್ಲ’; ಸಿಪಿಐಎಂ ಧರ್ಮೇಶ್ 

ಹಾಸನ ಜಿಲ್ಲೆಯ ಪತ್ರಿಕಾಗೋಷ್ಠಿಯಲ್ಲಿ ಪತ್ರಕರ್ತರೊಬ್ಬರು ‘ಆಸ್ತಿಕತೆ ಮತ್ತು ನಾಸ್ತಿಕತೆ ವೈಯಕ್ತಿಕ ವಿಚಾರವೇ...

ವಿಜಯಪುರ | ಕಬ್ಬಿಗೆ ರೂ. 5,500 ಘೋಷಣೆ ಆಗುವವರೆಗೂ ಸಕ್ಕರೆ ಕಾರ್ಖಾನೆ ಆರಂಭಿಸಬೇಡಿ: ರೈತ ಸಂಘ ಕರೆ

ಪ್ರಸಕ್ತ ಸಾಲಿನ ಕಬ್ಬಿಗೆ ಪ್ರತಿ ಟನ್‌ಗೆ ರೂ.5,500 ದರ ಘೋಷಿಸುವವರೆಗೆ ಹಾಗೂ...

ಚಿಂತಾಮಣಿ | ಪಿಎಲ್‌ಡಿ ಮತ್ತು ಡಿಸಿಸಿ ಬ್ಯಾಂಕ್‌ಗಳ ಪುನಶ್ಚೇತನದಿಂದ ರೈತರಿಗೆ ಹೆಚ್ಚಿನ ಅನುಕೂಲ

ಚಿಂತಾಮಣಿ ತಾಲ್ಲೂಕಿನ ನಂದಿಗಾನಹಳ್ಳಿ ವ್ಯವಸಾಯ ಸೇವಾ ಸಹಕಾರ ಸಂಘದ 2025-26 ನೇ...