ರಾಮದುರ್ಗ ತಾಲೂಕಿನ ಓಬಳಾಪೂರ ಗ್ರಾಮದ ಗ್ರಾಮ ಪಂಚಾಯತಿ ಎದುರು ಅಕ್ರಮವಾಗಿ ನಿರ್ಮಿಸಲಾಗಿದ್ದ ಅಂಗಡಿಯೊಂದರ ಕಟ್ಟಡವನ್ನು ತಾಲೂಕು ಪಂಚಾಯತ್ ಅಧಿಕಾರಿಗಳು ನೆಲಸಮಗೊಳಿಸಿದ್ದಾರೆ.
ಓಬಳಪೂರ ಗ್ರಾಮ ಪಂಚಾಯತಿ ಧ್ವಜ ಸ್ತಂಭದ ಎದುರು ಅಕ್ರಮವಾಗಿ ಕಟ್ಟಡ ನಿರ್ಮಾಣ ಮಾಡಲಾಗಿದೆ. ಅದನ್ನು ತೆರವುಗೊಳಿಸಬೇಕು ಎಂದು ಸಾಮಾಜಿಕ ಹೋರಾಟಗಾರ ಶ್ರೀನಿವಾಸಗೌಡ ಪಾಟೀಲ್ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರು. ಅಲ್ಲದೆ, ನಾಲ್ಕು ವರ್ಷಗಳಿಂದ ಹಲವು ಬಾರಿ ಪ್ರತಿಭಟನೆಯನ್ನೂ ಮಾಡಿದ್ದರು. ಇದೀಗ ಅಧಿಕಾರಿಗಳು ಕಟ್ಟಡವನ್ನು ತೆರವುಗೊಳಿಸಿದ್ದಾರೆ.
ಗ್ರಾಮ ಪಂಚಾಯತಿ ಕಚೇರಿಯ ಎದುರಿರುವ ಕಟ್ಟಡ ಕುರಿತು ದಾಖಲೆಗಳನ್ನು ಪರಿಶಿಲಿಸಿದಾಗ ಅಕ್ರಮವಾಗಿ ಕಟ್ಟಡವನ್ನು ನಿರ್ಮಾಣ ಮಾಡಿರುವುದು ಕಂಡುಬಂದಿದೆ. ಬಳಿಕ, ಅಧಿಕಾರಿಗಳು ಕಟ್ಟಡವನ್ನು ನೆಲಸಮ ಮಾಡಿದ್ದಾರೆ.
ಈ ಕುರಿತು ಮಾತಾನಾಡಿದ ಸಾಮಾಜಿಕ ಹೋರಾಟಗಾರ ಶ್ರೀನಿವಾಸಗೌಡ ಪಾಟಿಲ ಓಬಳಾಪೂರ, “ಗ್ರಾಮ ಪಂಚಾಯತಿ ಕಚೇರಿಯ ಧ್ವಜಸ್ಥಂಭದ ಜಾಗದಲ್ಲಿ 37 ವರ್ಷಗಳಿಂದ ಇದ್ದ ಅಕ್ರಮ ಅಂಗಡಿ ಕಟ್ಟಡವನ್ನು ಅಧಿಕಾರಿಗಳು ನೆಲಸಮಗೊಳಿಸಿದ್ದಾರೆ” ಎಂದು ತಿಳಿಸಿದ್ದಾರೆ.