ಬೆಳಗಾವಿ | ಅಕ್ರಮ ಲ್ಯಾಟರೈಟ್ ಗಣಿಗಾರಿಕೆ; ಅಧಿಕಾರಿಗಳೂ ಶಾಮೀಲಾಗಿರುವ ಆರೋಪ

Date:

ಕಳೆದ ಮೂರು ತಿಂಗಳಿನಿಂದ ಬೆಳಗಾವಿ ಗ್ರಾಮೀಣ ಭಾಗದಲ್ಲಿ ಅಕ್ರಮ ಲ್ಯಾಟರೈಟ್ (ಕೆಂಪು ಮಣ್ಣು) ಗಣಿಗಾರಿಕೆ ಕರಿತು ಗಂಭೀರ ಆರೋಪಗಳು ಕೇಳಿಬರುತ್ತಿವೆ. ಪೊಲೀಸರು, ಗಣಿ ಮತ್ತು ಭೂವಿಜ್ಞಾನ ಇಲಾಖೆಗೆ ಗೊತ್ತಿದ್ದೇ ಈ ಅಕ್ರಮ ನಡೆಯುತ್ತಿದೆ ಎಂದು ಆರೋಪಿಸಲಾಗಿದೆ. ಅಕ್ರಮ ಗಣಿಗಾರಿಕೆಯಿಂದಾಗಿ ಸರ್ಕಾರದ ಆದಾಯಕ್ಕೆ ಭಾರೀ ನಷ್ಟವಾಗಿದೆ ಎಂದು ವರದಿಯಾಗಿದೆ.

- Advertisement -

ಸಿಮೆಂಟ್ ಉತ್ಪಾದನೆಯಲ್ಲಿ ಬಳಸಲಾಗುವ ಪ್ರಮುಖ ಕಚ್ಚಾ ವಸ್ತುವಾದ ಲ್ಯಾಟರೈಟ್ಅನ್ನು ಗಣಿಗಾರಿಕೆ ಕಾನೂನುಗಳನ್ನು ಉಲ್ಲಂಘಿಸಿ ಹೊರತೆಗೆಯಲಾಗುತ್ತಿದೆ. ಈ ಅಕ್ರಮಗಳ ಕುರಿತು ಮುಚಂಡಿ ಗ್ರಾಮದ ಸಾಮಾಜಿಕ ಕಾರ್ಯಕರ್ತ ರಾಹುಲ್ ಸಿದ್ದಪ್ಪ ಅವನಾಚೆ ಅವರು ಉಪ ಆಯುಕ್ತ ಮೊಹಮ್ಮದ್ ರೋಷನ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ದೂರು ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಈ ನಡುವೆ, ರಾಹುಲ್‌ ಅವರು ದೂರು ನೀಡಿದ ಬಳಿಕ, ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಆದಾಗ್ಯೂ, ಗಣಿಗಾರಿಕೆಯನ್ನು ಕೆಲವೇ ಗಂಟೆಗಳ ಕಾಲ ಮಾತ್ರವೇ ಸ್ಥಗಿತಗೊಳಿಸಲಾಯಿತು. ಆದರೆ, ಅದೇ ರಾತ್ರಿ ಮತ್ತೆ ಗಣಿಗಾರಿಕೆ ಆರಂಭಗೊಂಡಿದೆ ಎಂದು ಆರೋಪಿಸಲಾಗಿದೆ.

ಅಕ್ರಮ ಗಣಿಗಾರಿಕೆಯ ಕೆಲವು ಗಂಟೆಗಳ ಸ್ಥಗಿತ ಮತ್ತು ಮರು ಕಾರ್ಯಾಚರಣೆಯು ಇಲಾಖೆಯ ಅಧಿಕಾರಿಗಳು ತೆಗೆದುಕೊಂಡ ಕ್ರಮದ ಉದ್ದೇಶ ಮತ್ತು ಪರಿಣಾಮಕಾರಿತ್ವದ ಬಗ್ಗೆ ಗಂಭೀರ ಅನುಮಾನಗಳನ್ನು ಹುಟ್ಟುಹಾಕಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಕ್ರಮ ಕೈಗೊಂಡಿದ್ದ ಅಧಿಕಾರಿಗಳು ಗುತ್ತಿಗೆದಾರರಿಗೆ ಕೇವಲ ‘ಎಚ್ಚರಿಕೆ’ ನೀಡಿದ್ದಾರೆ ಎಂದು ವರದಿಯಾಗಿದೆ.

ಇನಾಮ್ ಬಡಾಸ್ ಗ್ರಾಮದಲ್ಲಿ 12 ಎಕರೆ ಭೂಮಿಯಿಂದ 2.58 ಲಕ್ಷ ಮೆಟ್ರಿಕ್ ಟನ್ ಲ್ಯಾಟರೈಟ್ ಹೊರತೆಗೆಯಲು ಗುತ್ತಿಗೆದಾರರಿಗೆ 2025ರ ಮಾರ್ಚ್‌ನಲ್ಲಿ ಅನುಮತಿ ನೀಡಲಾಗಿತ್ತು. ಆದಾಗ್ಯೂ, ಅದೇ ಗ್ರಾಮದಲ್ಲಿ ಮೂರು ಹೆಚ್ಚುವರಿ ಅನಧಿಕೃತ ಸ್ಥಳಗಳಲ್ಲಿ ಅಕ್ರಮವಾಗಿ ಗಣಿಗಾರಿಕೆ ನಡೆಸಲಾಗುತ್ತಿದೆ ಎಂಬುದು ತನಿಖೆಗಳು ಬಹಿರಂಗಪಡಿಸಿವೆ ಎಂದು ಮೂಲಗಳು ತಿಳಿಸಿವೆ.

ಈ ಲೇಖನ ಓದಿದ್ದೀರಾ?: ಬಂಗಾಳ ಚುನಾವಣೆ | ಅಧಿಕಾರಕ್ಕಾಗಿ ಬಿಜೆಪಿ ತಂತ್ರ – ಮಮತಾ ಪ್ರತಿತಂತ್ರ

ಅಧಿಕಾರಿಗಳು ಕೇವಲ ಎಚ್ಚರಿಕೆ ಮಾತ್ರವೇ ನೀಡಿರುವುದನ್ನು ಆಕ್ರೋಶಿತ ಗ್ರಾಮಸ್ಥರು, ‘ಕಣ್ಣೊರೆಸುವಿಕೆ’ ಎಂದಿದ್ದಾರೆ. ಅಧಿಕಾರಿಗಳು ಒಂದೇ ಒಂದು ಟ್ರಕ್ಅನ್ನು ವಶಪಡಿಸಿಕೊಂಡಿಲ್ಲ. ಯಾವುದೇ ಜೆಸಿಬಿ ಯಂತ್ರಗಳನ್ನು ಮುಟ್ಟುಗೋಲು ಹಾಕಿಕೊಂಡಿಲ್ಲ. ಅಕ್ರಮ ಗಣಿಗಾರಿಕೆ ಮಾಡಿದ ಲ್ಯಾಟರೈಟ್ಅನ್ನು ವಶಪಡಿಸಿಕೊಳ್ಳಲಾಗಿಲ್ಲ. ಗಮನಾರ್ಹವಾಗಿ, ಗುತ್ತಿಗೆದಾರರಿಗೆ ಯಾವುದೇ ನೋಟಿಸ್‌ಅನ್ನೂ ನೀಡಲಾಗಿಲ್ಲ ಆರೋಪಿಸಿದ್ದಾರೆ.

ದಾಳಿಯ ನೇತೃತ್ವ ವಹಿಸಿದ್ದ ಹಿರಿಯ ಭೂವಿಜ್ಞಾನಿ ಬಿಂದನ್ ಪಾಟೀಲ್, “ಗುತ್ತಿಗೆದಾರರಿಗೆ ಕೇವಲ ಎಚ್ಚರಿಕೆ ನೀಡಲಾಗಿದೆ. ಅಕ್ರಮ ಗಣಿಗಾರಕೆ ತಡೆ ಕಾನೂನುಗಳ ಪ್ರಕಾರ; ವಾಹನಗಳು, ಯಂತ್ರೋಪಕರಣಗಳು ಹಾಗೂ ಖನಿಜಗಳನ್ನು ವಶಪಡಿಸಿಕೊಳ್ಳುವುದು ಕಡ್ಡಾಯ. ಆದರೆ, ಕೇವಲ ಎಚ್ಚರಿಕೆ ನೀಡಿರುವುದು ನಿರ್ಣಾಯಕ ಪ್ರಶ್ನೆಯನ್ನು ಹುಟ್ಟುಹಾಕುತ್ತದೆ. ಕೇವಲ ಎಚ್ಚರಿಕೆ ಕಾರ್ಯಾಚರಣೆಗೆ ಸಮವೇ” ಎಂದು ಪ್ರಶ್ನಿಸಿದ್ದಾರೆ.

ಅಕ್ರಮವಾಗಿ ಗಣಿಗಾರಿಕೆ ಮಾಡಿದ ಲ್ಯಾಟರೈಟ್ಅನ್ನು 15 ರಿಂದ 20 ಪೊಲೀಸ್ ಠಾಣೆಗಳ ವ್ಯಾಪ್ತಿ ದಾಟಿ ಕಲಬುರಗಿ ಮತ್ತು ಆಂಧ್ರಪ್ರದೇಶದ ಸಿಮೆಂಟ್ ಕಾರ್ಖಾನೆಗಳಿಗೆ ತಪಾಸಣೆ ಇಲ್ಲದೆ ಸಾಗಿಸಲಾಗುತ್ತಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಈ ಕಾರ್ಯಾಚರಣೆಗಳು ಅಧಿಕಾರಿಗಳು ಮತ್ತು ಪೊಲೀಸರ ಸಹಕಾರವಿಲ್ಲದೆ ಮುಂದುವರೆಯಲು ಸಾಧ್ಯವೇ ಎಂದು ಗ್ರಾಮದ ಜನರು ಪ್ರಶ್ನಿಸಿದ್ದಾರೆ ಎಂದು ‘ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌’ ವರದಿ ಮಾಡಿದೆ.

ಈ ಅಕ್ರಮ ಗಣಿಗಾರಿಕೆಯನ್ನು ಕೇವಲ ಗುತ್ತಿಗೆದಾರರ ಅಪರಾಧವೆಂದು ನೋಡಲಾಗುವುದಿಲ್ಲ. ಇದು ವ್ಯವಸ್ಥಿತ ವೈಫಲ್ಯವನ್ನು ಪ್ರತಿಬಿಂಬಿಸುತ್ತದೆ. ಇದು ಇಲಾಖೆಯ ಮೌನ ಮತ್ತು ರಾಜಕೀಯ ಪ್ರೋತ್ಸಾಹವಿದೆ ಎಂದು ಆರೋಪಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಬೆಳೆ ನಷ್ಟ: ಇಬ್ಬರ ರೈತರ ಸಾವು 

ಸಕಾಲಕ್ಕೆ ಮಳೆಯಾಗದೆ ಬೆಳೆ ನಷ್ಟ ಉಂಟಾಗಿದ್ದು, ಸಾಲ ತೀರಿಸಲಾಗದೆ ಮನನೊಂದ ಇಬ್ಬರು...

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...