ಬೆಳಗಾವಿ | ಗೋವಾದಿಂದ ರಾಜ್ಯಕ್ಕೆ ಅಕ್ರಮ ಮದ್ಯ ಸಾಗಣೆ; ಲಾರಿ ವಶಕ್ಕೆ ಪಡೆದ ಅಧಿಕಾರಿಗಳು

Date:

ಗೋವಾದಿಂದ ಕರ್ನಾಟಕಕ್ಕೆ ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ಲಾರಿಯೊಂದನ್ನು ಬೆಳಗಾವಿಯ ಸುವರ್ಣಸೌಧದ ಬಳಿ ಶನಿವಾರ ಬೆಳಗ್ಗೆ ಅಬಕಾರಿ ಇಲಾಖೆಯ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಲಾರಿಗಳಲ್ಲಿ ಮದ್ಯ ತುಂಬಿಸಿ, ಅದರ ಮೇಲೆ ಫ್ಲೈವುಡ್ ಹಲಗೆಗಳನ್ನು ಜೋಡಿಸಿಕೊಂಡು, ಹಲಗೆಗಳನ್ನು ಸಾಗಿಸುವ ಹೆಸರಿನಲ್ಲಿ ಮದ್ಯವನ್ನು ಸಾಗಿಸಲಾಗುತ್ತಿತ್ತು. ಈ ಬಗ್ಗೆ ಖಚಿತ ಮಾಹಿತಿ ಪಡೆದ ಅಬಕಾರಿ ಅಧಿಕಾರಿಗಳು ದಾಳಿ ನಡೆದಿದ್ದಾರೆ. ಅಧಿಕ ಬೆಲೆಯ ಮದ್ಯದ ಬಾಟಲಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

“ಗೋವಾದಿಂದ ರಾಜ್ಯಕ್ಕೆ ಅಕ್ರಮವಾಗಿ ಮದ್ಯ ಸಾಗಾಟವಾಗುತ್ತಿದೆ ಎಂಬ ಸುಳಿವು ಸಿಕ್ಕಿತ್ತು. ಹಾಗಾಗಿ, ವಾಹನಗಳ ತಪಾಸಣೆ ನಡೆಸುತ್ತಿದ್ದೆವು. ಲಾರಿಯ ಚಾಲಕನನ್ನು ವಶಕ್ಕೆ ಪಡೆದಿದ್ದೇವೆ. ಆತ ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದುದ್ದಾಗಿ ತಪ್ಪೊಪ್ಪಿಕೊಂಡಿದ್ದಾನೆ. ಚಾಲಕ ವೀರೇಂದರ್ ಉತ್ತರ ಪ್ರದೇಶದ ವಾರಾಣಸಿ ಮೂಲದವನಾಗಿದ್ದಾನೆ” ಎಂದು ಹೆಚ್ಚುವರಿ ಅಬಕಾರಿ ಆಯುಕ್ತ ವೈ. ಮಂಜುನಾಥ ತಿಳಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಬಾಲಬ್ರೂಯಿ ಅತಿಥಿ ಗೃಹ ಕಾನ್ಸ್‌ಟಿಟ್ಯೂಷನಲ್‌ ಕ್ಲಬ್‌ : ಸರ್ಕಾರದ ನಿರ್ಧಾರಕ್ಕೆ ಬ್ರಿಜೇಶ್ ಕಾಳಪ್ಪ ಕಿಡಿ

“ಲಾರಿಯಲ್ಲಿ ಮೇಲ್ಭಾಗದ ಎರಡು ಸಾಲುಗಳಲ್ಲಿ ಫ್ಲೈವುಡ್ ಹಲಗೆಗಳಿದ್ದವು. ಅವುಗಳ ಕೆಳಗೆ ಮದ್ಯವನ್ನು ಇರಿಸಲಾಗಿತ್ತು. ನಾನಾ ಬ್ರ್ಯಾಂಡ್‌ಗಳ ಮದ್ಯದ ಬಾಟಲಿಗಳಿದ್ದು, ಅವುಗಳ ಮೌಲ್ಯವನ್ನು ಲೆಕ್ಕ ಹಾಕುತ್ತಿದ್ದೇವೆ” ಎಂದು ಅವರು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ವಿದ್ಯಾರ್ಥಿ ಸಂಘಟನೆಗಳ ಒಕ್ಕೂಟದಿಂದ ವಿದ್ಯಾರ್ಥಿ ಯುವಜನರ ಪ್ರಣಾಳಿಕೆ ಬಿಡುಗಡೆ 

ರಾಜ್ಯದಲ್ಲಿ ಒಟ್ಟು ಎಂಟು ವಿದ್ಯಾರ್ಥಿ ಸಂಘಟನೆಗಳ ಒಕ್ಕೂಟದಿಂದ 2024ರ ಈ ಬಾರಿಯ...

ವಿಜಯಪುರ | ಗ್ಯಾರಂಟಿ ಯೋಜನೆಯ ಅನುಷ್ಠಾನ ಪ್ರಾಧಿಕಾರದ ಸಭೆ

ರಾಜ್ಯದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ‌ ಕೆ ಶಿವಕುಮಾರ್,...

ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗೆಲುವು ಗ್ಯಾರಂಟಿ: ಸದಾಶಿವ ಉಳ್ಳಾಲ್ ವಿಶ್ವಾಸ

ಉಳುವವನೇ ಭೂಮಿಯೊಡೆಯ, ಲೋನ್ ಮೇಳ, ಬ್ಯಾಂಕ್ ರಾಷ್ಟ್ರೀಕರಣ, ಮಂಗಳೂರಿಗೆ ಎನ್‌ಎಂಪಿಟಿ, ವಿಮಾನ...

ವಿಜಯಪುರ ಲೋಕಸಭಾ ಕ್ಷೇತ್ರ; 21 ಅಭ್ಯರ್ಥಿಗಳಿಂದ 35 ನಾಮಪತ್ರ ಸಲ್ಲಿಕೆ

ಲೋಕಸಭಾ ಚುನಾವಣೆ-2024ಕ್ಕೆ ಸಂಬಂಧಿಸಿದಂತೆ ವಿಜಯಪುರ ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರಕ್ಕೆ ಏಪ್ರಿಲ್‌...