ಬೆಳಗಾವಿ | ಹೆಚ್ಚುತ್ತಿರುವ ಸೈಬರ್‌ ವಂಚನೆ; ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕಳವಳ

Date:

ರಾಜ್ಯದಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಸೈಬರ್ ವಂಚನೆಗಳು ಮತ್ತು ಡಿಜಿಟಲ್ ಅಪರಾಧಗಳ ಕುರಿತು ಸೋಲಿಡಾರಿಟಿ ಯೂತ್‌ ಮೂವ್ಮೆಂಟ್‌ ಕಳವಳ ವ್ಯಕ್ತಪಡಿಸಿದೆ.

- Advertisement -

ಈ ಕುರಿತು ಬೆಳಗಾವಿಯಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಘಟನೆಯ ರಾಜ್ಯಾಧ್ಯಕ್ಷ ಡಾ. ನಸೀಮ್‌ ಅಹ್ಮದ್‌, “ಸರ್ಕಾರದ ಅಧಿಕೃತ ಅಂಕಿಅಂಶಗಳನ್ನು ಉಲ್ಲೇಖಿಸಿ, ಕಳೆದ ಮೂರು ವರ್ಷಗಳಲ್ಲಿ ರಾಜ್ಯದ ನಾಗರಿಕರು ಐದು ಸಾವಿರ ಕೋಟಿ ರೂಪಾಯಿಗಿಂತ ಹೆಚ್ಚು ಹಣವನ್ನು ಸೈಬರ್ ವಂಚನೆಗಳ ಮೂಲಕ ಕಳೆದುಕೊಂಡಿದ್ದಾರೆ. ಈ ಪೈಕಿ ರಿಕವರಿ ಆಗಿರುವುದು ಕೇವಲ 10% ಮಾತ್ರ. ಇದು ಅತ್ಯಂತ ಆತಂಕಕಾರಿ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರೆಜಿಲ್‌ನಲ್ಲಿ ಒಂದೇ ಹುದ್ದೆಗೆ ಎರಡು ಬಾರಿ ಚುನಾವಣೆ: ಏನಿದು...

ಭಾರತಕ್ಕೂ ಎರಡನೇ ಸುತ್ತಿನ ಪದ್ಧತಿ ಅಗತ್ಯವಿದೆಯೇ ಎಂಬ ಚರ್ಚೆ ಆಗಿಂದಾಗ್ಗೆ ಮುನ್ನೆಲೆಗೆ ಬರುತ್ತಲೇ ಇರುತ್ತದೆ. ಹಲವು ಅಭ್ಯರ್ಥಿಗಳು ಕಣದಲ್ಲಿರುವಾಗ ಮತಗಳು ಹಂಚಿಹೋಗಿ, ಕೇವಲ ಶೇ 30 ಅಥವಾ 40ರಷ್ಟು ಮತ ಪಡೆದವರೂ ನಮ್ಮಲ್ಲಿ...

ಬೆಂಗಳೂರು ಪೌರಕಾರ್ಮಿಕರ ಶ್ವಾಸಕೋಶ ಹಿಂಡುತ್ತಿದೆ ಮಾಲಿನ್ಯ; BMTC ಸಿಬ್ಬಂದಿ,...

ಬೆಂಗಳೂರಿನಲ್ಲಿ ಮಾಲಿನ್ಯವು ಹೊಸ ತಂಬಾಕಾಗಿ ಪರಿಣಮಿಸಿದೆ. ಜನರ ಶ್ವಾಸಕೋಶವನ್ನು ಹಿಂಡುತ್ತಿದೆ. ಮಾಸ್ಕ್, ಕೈಗವಸು, ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಸೌಲಭ್ಯಗಳ ಕೊರತೆಗಳಿಂದಾಗಿ ಪೌರಕಾರ್ಮಿಕರು, ಬಿಎಂಟಿಸಿ ನೌಕರರು, ಸಂಚಾರ ಪೊಲೀಸರು ಹಾಗೂ ಕಟ್ಟಡ ಕಾರ್ಮಿಕರು...

ಗ್ರಾಮೀಣ ಮೀಸಲಾತಿಯಲ್ಲಿ ಸಾಮಾಜಿಕ ಅನ್ಯಾಯ; ಬರಿದಾಗುತ್ತಿರುವ ಬಡ ಮಕ್ಕಳ...

ಸರಕಾರಿ ಶಾಲೆ ಸೇರುವವರು ಕೇವಲ ಬಡತನ-ಕೆಳಮಟ್ಟದ ಕುಟುಂಬದವರು ಎಂಬಂತಾಗಿದೆ. ಈ ಋಣಾತ್ಮಕ ಭಾವನೆ ಹೋಗಲಾಡಿಸಲು ಕನ್ನಡದಲ್ಲಿ ಕಲಿತರೆ ಉನ್ನತ ಶಿಕ್ಷಣ, ಉದ್ಯೋಗ ಸ್ಪರ್ಧೆಯಲ್ಲಿ ಜಯಿಸಬಹುದೆಂಬ ವಿಶ್ವಾಸ ಮೂಡಿಸಬೇಕಾಗಿದೆ. ಈಗಿನ ಎಡಬಿಡಂಗಿ ಗ್ರಾಮೀಣ ಮೀಸಲಾತಿ...
WhatsApp Image 2025 12 11 at 11.45.51 AM
  1. ಬೆಳಗಾವಿ ಅಧಿವೇಶನದಲ್ಲಿ ಸೈಬರ್ ವಂಚನೆ ವಿಷಯವನ್ನು ಪ್ರಮುಖ ಚರ್ಚಾ ಅಂಶವನ್ನಾಗಿ ಮಾಡಿ, ಕಠಿಣ, ಸ್ಪಷ್ಟ ಹಾಗೂ ಪರಿಣಾಮಕಾರಿ ನೀತಿಗಳನ್ನು ರೂಪಿಸಬೇಕು.
  2. ವಂಚನೆಗೆ ಒಳಗಾದ ನಾಗರಿಕರ ನಷ್ಟವನ್ನು ಮರಳಿ ಪಡೆಯುವಂತೆ ರಾಜ್ಯ ಸರ್ಕಾರವು State Guarantee Mechanism ಅನ್ನು ರಚಿಸಬೇಕು.
  3. ರಾಜ್ಯ ಮಟ್ಟದಲ್ಲಿ ಸ್ವತಂತ್ರವಾಗಿ ಹಾಗೂ 24×7 ಕಾರ್ಯನಿರ್ವಹಿಸುವ ‘ಸೈಬರ್ ಸಹಾಯವಾಣಿ’ ಸ್ಥಾಪಿಸಬೇಕು.
  4. ಯುವಕರು ಹಾಗೂ ಸಾರ್ವಜನಿಕರಿಗಾಗಿ ಸೈಬರ್ ಸುರಕ್ಷತೆ, ಹ್ಯಾಕಿಂಗ್ ತಡೆ ಮತ್ತು ಡಿಜಿಟಲ್ ಜಾಗೃತಿ ಕುರಿತು ವ್ಯಾಪಕ ಅಭಿಯಾನಗಳನ್ನು ಜಾರಿಗೆ ತರಬೇಕು. ಎಂಬ ಪ್ರಮುಖ ಬೇಡಿಕೆಗಳನ್ನು ರಾಜ್ಯ ಸರ್ಕಾರದ ಮುಂದಿಟ್ಟರು.

ರಾಜ್ಯ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಇಸ್ಮಾಯಿಲ್ ತೀರ್ಥಹಳ್ಳಿ ಮಾತನಾಡಿ, “ಅಧಿವೇಶನಗಳು ಜನರ ಹಣದಿಂದ ನಡೆಯುತ್ತವೆ. ಆದ್ದರಿಂದ ಜನಪ್ರತಿನಿಧಿಗಳು ರಾಜಕೀಯ ಕಚ್ಚಾಟಗಳನ್ನು ಬಿಟ್ಟು ಜನರ ನಿಜವಾದ ಸಮಸ್ಯೆಗಳ ಕಡೆ ಗಮನ ಹರಿಸಬೇಕು. ಜನರು ಬೆವರಿಳಿಸಿ ಸಂಪಾದಿಸಿದ ಹಣವನ್ನು ರಕ್ಷಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ. ನಮ್ಮ ಧ್ವನಿ ಸುವರ್ಣಸೌಧದವರೆಗೆ ತಲುಪಬೇಕು” ಎಂದರು.

ಇದನ್ನೂ ಓದಿ: ಬೆಳಗಾವಿ | ಕಬ್ಬು ಬೆಳೆಗಾರರಿಗೆ ತೂಕದಲ್ಲಿ ಮೋಸ; ಆದೇಶ ಗಾಳಿಗೆ ತೂರಿದವೇ ಕಾರ್ಖಾನೆಗಳು?

ನಗರಾಧ್ಯಕ್ಷ ಮಸೂದ್ ಅಹ್ಮದ್ ಮಾತನಾಡಿ, “ಸೈಬರ್ ವಂಚನೆ ವಿರುದ್ಧ ರಾಜ್ಯಾದ್ಯಂತ ಸಾರ್ವಜನಿಕ ಸಭೆಗಳು, ಸ್ತಬ್ಧಚಿತ್ರ ಪ್ರದರ್ಶನಗಳು, ವಿದ್ಯಾರ್ಥಿಗಳಿಗೆ ಜಾಗೃತಿ ಕಾರ್ಯಕ್ರಮಗಳು, ಯುವ ಸಮಾವೇಶಗಳು, ಸೈಬರ್ ಅಪರಾಧ ವಿಭಾಗದ ಸಹಭಾಗಿತ್ವದಲ್ಲಿ ಕಾರ್ಯಾಗಾರ ಸೇರಿದಂತೆ ಹಲವು ಚಟುವಟಿಕೆಗಳನ್ನು ನಡೆಸಲಾಗಿದೆ. ರಾಜ್ಯದ ವಿವಿಧ ಭಾಗಗಳಲ್ಲಿ ಜನಪ್ರತಿನಿಧಿಗಳಿಗೆ ಮನವಿ ಪತ್ರಗಳ ಮೂಲಕ ಬೆಳಗಾವಿ ಅಧಿವೇಶನದಲ್ಲಿ ಚರ್ಚಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಲು ತಿಳಿಸಲಾಯಿತು” ಎಂದರು.

ಈ ಸಂದರ್ಭದಲ್ಲಿ ಬೆಳಗಾವಿ ನಗರ ಘಟಕದ ಕಾರ್ಯದರ್ಶಿ ಏಜಾಝ್ ಸಯೀದ್ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಅ. 29ರ ಸಭೆಯತ್ತ ಕಬ್ಬುಬೆಳೆಗಾರರ ಚಿತ್ತ

ಕಬ್ಬು ಬೆಳೆಗಾರರ ಬೇಡಿಕೆಗಳ ಕುರಿತು ಸೋಮವಾರ ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ನಡೆದ...

ಕಲಬುರಗಿ | ಸನ್ನತ್ತಿ ಬ್ಯಾರೇಜ್ ಸಂತ್ರಸ್ತ ರೈತರಿಗೆ 13 ವರ್ಷವಾದರೂ ಪರಿಹಾರವಿಲ್ಲ!

ಸನ್ನತ್ತಿ ಬ್ರಿಡ್ಜ್ ಕಂ ಬ್ಯಾರೇಜ್ ಹಿನ್ನೀರಿನಿಂದ ಭೂಮಿ ಕಳೆದುಕೊಂಡ ಚಿತ್ತಾಪುರ ಹಾಗೂ...

ಬೆಳಗಾವಿ | ಕಬ್ಬು ಬೆಳೆಗಾರರ ​​ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಿ: ದರ್ಶನ್ ಪುಟ್ಟಣ್ಣಯ್ಯ

ಬೆಳಗಾವಿ ಕಬ್ಬು ಬೆಳೆಯುವ ಸಂಪೂರ್ಣ ಅಪಾಯವನ್ನು ರೈತರು ಎದುರಿಸುತ್ತಿದ್ದರೂ, ಕಬ್ಬಿನ ಬೆಲೆ...

ಬೆಳಗಾವಿ | ಕಬ್ಬು ಬಿಲ್ 15 ದಿನಗಳಲ್ಲಿ ಪಾವತಿಸಿ; ವಿಳಂಬವಾದರೆ ಬಡ್ಡಿ ನೀಡಿ

ಬೆಳಗಾವಿ ಕಬ್ಬು ಪೂರೈಸಿದ 15 ದಿನಗಳೊಳಗೆರೈತರಿಗೆ ಬಿಲ್‌ ಪಾವತಿಸಬೇಕು. ವಿಳಂಬವಾದರೆ ಬಡ್ಡಿ...