ಬೆಳಗಾವಿ | ಪೊಲೀಸ್‌ ಠಾಣೆ ಎದುರು ತಂದೆಯ ಮೃತದೇಹವಿಟ್ಟು ಇನ್ಸ್‌ಪೆಕ್ಟರ್ ಪ್ರತಿಭಟನೆ

Date:

Advertisements

ಪೊಲೀಸ್​ ಠಾಣೆ ಎದರು ತಮ್ಮ ತಂದೆಯ ಮೃತದೇಹ ಇಟ್ಟು ಪೊಲೀಸ್‌ ಇನ್ಸ್‌ಪೆಕ್ಟರ್‌ ಒಬ್ಬರು ಪ್ರತಿಭಟನೆ ನಡೆಸಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗದ ಹಾರೂಗೇರಿಯಲ್ಲಿ ನಡೆದಿದೆ. ಇನ್​ಸ್ಪೆಕ್ಟರ್​​ ಅಶೋಕ ಸದಲಗಿ ಅವರು ತಮ್ಮ ತಂದೆಯ ಮೃತದೇಹವಿಟ್ಟು ಪ್ರತಿಭಟನೆ ನಡೆಸಿದ್ದಾರೆ.

ಅಶೋಕ್ ಸದಲಗಿ ಅವರು ವಿಜಯಪುರ ಜಿಲ್ಲೆಯ ದೇವದುರ್ಗ ಪೊಲೀಸ್​ ಠಾಣೆಯಲ್ಲಿ ಇನ್​ಸ್ಪೆಕ್ಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಅವರು ತಮ್ಮ ತಂದೆ ಅಣ್ಣಪ್ಪ ಅವರ ಸಾವಿಗೆ ಹಾರೂಗೇರಿ ಪೊಲೀಸ್​ ಠಾಣೆ ಪಿಎಸ್​ಐ ಮಾಳಪ್ಪ ಪೂಜಾರಿಯೇ ಕಾರಣ, ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಇತ್ತೀಚೆಗೆ, ಜಮೀನು ವಿಚಾರವಾಗಿ ಅಣ್ಣಪ್ಪ ಮತ್ತು ಕೆಲವರು ನಡುವೆ ಗಲಾಟೆ ನಡೆದಿತ್ತು. ಬಾಬು ನಡೋಣಿ, ಪ್ರತಾಪ್ ಹರೋಲಿ, ವಸಂತ ಚೌಗಲಾ ಎಂಬವರು ತಮ್ಮ ಜಮೀನಿಗೆ ಅಕ್ರಮವಾಗಿ ಪ್ರವೇಶಿಸಿದ್ದನ್ನು ಅಣ್ಣಪ್ಪ ಪ್ರಶ್ನಿಸಿದ್ದರು. ಇದು ಜಗಳಕ್ಕೆ ಕಾರಣವಾಗಿತ್ತು. ಮಾತ್ರವಲ್ಲದೆ, ಬಾಬು ನಡೋಣಿ, ಪ್ರತಾಪ್ ಹರೋಲಿ ಅವರು ತಮ್ಮ ಸಂಗಡಿಗರೊಂದಿಗೆ ಸೇರಿ ಅಣ್ಣಪ್ಪ ಮೇಲೆ ಹಲ್ಲೆ ನಡಸಿದ್ದರು ಎಂದು ಆರೋಪಿಸಲಾಗಿದೆ.

Advertisements

ತಮ್ಮ ಮೇಲಿನ ಹಲ್ಲೆ ಕುರಿತು ಅಣ್ಣಪ್ಪ ಪೊಲೀಸರಿಗೆ ದೂರು ನೀಡಿದ್ದರು. ಆದಾಗ್ಯೂ, ಎಲ್ಲರನ್ನೂ ಪೊಲೀಸ್‌ ಠಾಣೆಗೆ ಕರೆದೊಯ್ಯಲಾಗಿತ್ತು. ಆದರೆ, ಆರೋಪಿಗಳ ವಿರುದ್ಧ ದೂರು ದಾಖಲಿಸಿಕೊಳ್ಳದ ಪೊಲೀಸರು, ದೂರುದಾರ ಅಣ್ಣಪ್ಪ ಅವರನ್ನೇ ಇಡೀ ದಿನ ಪೊಲೀಸ್‌ ಠಾಣೆಯಲ್ಲಿ ಇರಿಸಿಕೊಂಡು, ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.

ಪರಿಣಾಮ, ಅಣ್ಣಪ್ಪ ಅವರ ದೇಹದಲ್ಲಿ ಸಕ್ಕರೆ ಪ್ರಮಾಣ ಕಡಿಮೆಯಾಗಿದೆ. ಜೊತೆಗೆ, ಬಿಪಿ ಕೂಡ ಹೆಚ್ಚಾಗಿದೆ. ಹೀಗಾಗಿ, ಅಣ್ಣಪ್ಪ ಅಸ್ವಸ್ಥರಾಗಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆ ಫಲಿಸದೆ ಅಣ್ಣಪ್ಪ ಸಾವನ್ನಪ್ಪಿದ್ದಾರೆ.

ಹಾರೂಗೇರಿ ಪೊಲೀಸ್‌ ಇನ್ಸ್‌ಪೆಕ್ಟರ್ ಮಾಳಪ್ಪ ಪೂಜಾರಿ ಅವರು ನೀಡಿರುವ ಕಿರುಕುಳ ಮತ್ತು ನಿರ್ಲಕ್ಷ್ಯ ಧೋರಣೆಯಿಂದಲೇ ತಮ್ಮ ತಂದೆ ಅಣ್ಣಪ್ಪ ಸಾವನ್ನಪ್ಪಿದ್ದಾರೆ. ಮಾಳಪ್ಪ ಪೂಜಾರಿ ವಿರುದ್ಧ ಕ್ರಮ ಕೈಗೊಳ್ಳಬೇಕು. ತಮ್ಮ ಕುಟುಂಬಕ್ಕೆ ನ್ಯಾಯ ಕೊಡಿಸಬೇಕು ಎಂದು ಆಗ್ರಹಿಸಿದ್ದಾರೆ ಇನ್​ಸ್ಪೆಕ್ಟರ್ ಅಶೋಕ್ ಪ್ರತಿಭಟನೆ ನಡೆಸಿದ್ದಾರೆ. ಸ್ಥಳಕ್ಕೆ ಬಂದ ಚಿಕ್ಕೋಡಿ ಡಿವೈಎಸ್‌ಪಿ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | NWKRTC ವತಿಯಿಂದ ಅಪ್ರೆಂಟಿಸ್ ಹುದ್ದೆಗಳಿಗೆ WALK-IN-INTERVIEW

ಕರ್ನಾಟಕ ರಾಜ್ಯ ವಾಯುವ್ಯ ಸಾರಿಗೆ ಸಂಸ್ಥೆ, ಶಿರಸಿ ವಿಭಾಗದಲ್ಲಿ ವಿವಿಧ ಅಪ್ರೆಂಟಿಸ್...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ವಿಜಯನಗರ | ಅಲೆಮಾರಿ ಸಮುದಾಯಗಳ ಅಭಿವೃದ್ಧಿಯೇ ನಿಗಮದ ಮುಖ್ಯ ಧ್ಯೇಯ: ಪಲ್ಲವಿ

ಅಲೆಮಾರಿ ಬುಡಕಟ್ಟು ಸಮುದಾಯಗಳನ್ನು ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ರಾಜಕೀಯವಾಗಿ ಮತ್ತು ಔದ್ಯೋಗಿಕವಾಗಿ ಮುಂಚೂಣಿಗೆ...

ಬೆಳಗಾವಿ : ವೇದಗಂಗಾ–ಘಟಪ್ರಭಾ ನದಿಗಳ ಅಬ್ಬರನಿಪ್ಪಾಣಿ – ಗೋಕಾಕ್ ಪ್ರದೇಶದಲ್ಲಿ ಪ್ರವಾಹದಿಂದ ಹಾನಿ

ಮಹಾರಾಷ್ಟ್ರದ ಘಟ್ಟ ಪ್ರದೇಶಗಳಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ವೇದಗಂಗಾ ನದಿ ಉಕ್ಕಿ...

Download Eedina App Android / iOS

X