ಬೆಳಗಾವಿ | ಬಿಸಿಸಿ ಸಭೆಯಲ್ಲಿ ಮತ್ತೆ ಭುಗಿಲೆದ್ದ ಕನ್ನಡ-ಮರಾಠಿ ವಿವಾದ

Date:

ಬುಧವಾರ ನಡೆದ ಬೆಳಗಾವಿ ಮಹಾನಗರ ಪಾಲಿಕೆಯ (ಬಿಸಿಸಿ) ಸಾಮಾನ್ಯ ಸಭೆಯಲ್ಲಿ ಮತ್ತೆ ಕನ್ನಡ-ಮರಾಠಿ ವಿವಾದ ಎದ್ದಿದೆ. ಸಭೆಯ ಆರಂಭದಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿಯ (ಎಂಇಎಸ್) ಮೂವರು ಸದಸ್ಯರು ಬಿಸಿಸಿಯ ಅಜೆಂಡಾ ಪ್ರತಿ ಮತ್ತು ಇತರ ದಾಖಲೆಗಳನ್ನು ಮರಾಠಿಯಲ್ಲಿ ನೀಡಬೇಕು ಎಂದು ಒತ್ತಾಯಿಸಿ ಸಭೆಯಲ್ಲಿಯೇ ಧರಣಿ ನಡೆಸಿದ್ದಾರೆ.

ಕಳೆದ ಸಭೆಯಲ್ಲಿ ಮೇಯರ್ ಅವರು ಮರಾಠಿಯಲ್ಲಿ ದಾಖಲೆಗಳನ್ನು ನೀಡುವ ಬಗ್ಗೆ ಭರವಸೆ ನೀಡಿದ್ದರು. ಆದರೆ, ಈಗ ಮರಾಠಿ ಭಾಷೆಯಲ್ಲಿ ಅಜೆಂಡಾ ಪ್ರತಿ ನೀಡಿಲ್ಲವೆಂದು ಎಂಇಎಸ್‌ ಸದಸ್ಯರು ಆರೋಪಿಸಿದ್ದಾರೆ.

ಬೆಳಗಾವಿ (ದಕ್ಷಿಣ) ಶಾಸಕ ಅಭಯ ಪಾಟೀಲ ಸೇರಿದಂತೆ ಆಡಳಿತಾರೂಢ ಬಿಜೆಪಿ ಸದಸ್ಯರು ಎಂಇಎಸ್ ಸದಸ್ಯರ ವರ್ತನೆಯನ್ನು ಖಂಡಿಸಿದ್ದಾರೆ. ”ಸಭೆಯಲ್ಲಿ ಧರಣಿ ನಡೆಸುವ ಮೂಲಕ ಎಂಇಎಸ್‌ ಸದಸ್ಯರು ಮೇಯರ್‌ಗೆ ಅವಮಾನ ಮಾಡಿದ್ದಾರೆ. ಸಭೆಯು ತರಕಾರಿ ಮಾರುಕಟ್ಟೆ ಅಲ್ಲ. ಧರಣಿ ಕುಳಿತಿರುವ ಸದಸ್ಯರು ಕೇವಲ ರಾಜಕೀಯ ಮಾಡಲು ಬಯಸುತ್ತಿದ್ದಾರೆ. ಅವರಿಗೂ ನಗರದ ಅಭಿವೃದ್ಧಿ ವಿಷಯಗಳಿಗೂ ಸಂಬಂಧವಿಲ್ಲ” ಎಂದು ಕಿಡಿಕಾರಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಆಡಳಿತ ಭಾಷೆ ಹೊರತುಪಡಿಸಿ ಇತರ ಭಾಷೆಗಳಲ್ಲಿ ದಾಖಲೆಗಳನ್ನು ನೀಡಲು ಸಾಧ್ಯವೇ ಎಂಬುದನ್ನು ಸ್ಪಷ್ಟಪಡಿಸಬೇಕು. ಕರ್ನಾಟಕ ಮುನ್ಸಿಪಲ್ ಕಾಯ್ದೆಯಲ್ಲಿ ಅವಕಾಶವಿದ್ದರೆ ಮರಾಠಿಯಲ್ಲಿ ದಾಖಲೆಗಳನ್ನು ನೀಡಬೆಕು” ಎಂದು ಅಧಿಕಾರಿಗಳಿಗೆ ಶಾಸಕ ಪಾಟೀಲ್ ಸೂಚಿಸಿದ್ದಾರೆ.

ಕಾನೂನು ಅಧಿಕಾರಿ ಯು.ಡಿ.ಮಾಧುಸ್ವಾಮಿ ಮಾತನಾಡಿ, “ಕರ್ನಾಟಕ ಮುನ್ಸಿಪಲ್ ಕಾಯ್ದೆಯಲ್ಲಿ ಅಂತಹ ಯಾವುದೇ ನಿಯಮಗಳಿಲ್ಲ. ಕನ್ನಡ ಅಥವಾ ಇಂಗ್ಲಿಷ್‌ನಲ್ಲಿ ಮಾತ್ರ ದಾಖಲೆಗಳನ್ನು ಒದಗಿಸಲು ಕಾಯ್ದೆಯಲ್ಲಿ ಅವಕಾಶವಿದೆ” ಎಂದು ಹೇಳಿದ್ದಾರೆ.

“ಬಿಸಿಸಿಯಲ್ಲಿ ಭಾಷಾಂತರಕಾರರೊಬ್ಬರು ನಿವೃತ್ತಿಯಾಗಿರುವುದರಿಂದ ಕನ್ನಡದಲ್ಲಿಯೇ ಸಭೆಯ ನೋಟಿಸ್ ನೀಡಿದ್ದೇವೆ” ಎಂದು ಮೇಯರ್ ಶೋಭಾ ಸೋಮನಾಚೆ ಅವರು ಮನವರಿಕೆ ಮಾಡಿದ ನಂತರ ಎಂಇಎಸ್ ಸದಸ್ಯರು ಧರಣಿ ಹಿಂಪಡೆದರು. ಮುಂದಿನ ಸಭೆಯಿಂದ ಅವರು ಮರಾಠಿಯಲ್ಲಿ ನೋಟಿಸ್ ಮತ್ತು ಅಜೆಂಡಾ ಪ್ರತಿಯನ್ನು ನೀಡುವಂತೆ ಒತ್ತಾಯಿಸಿದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ಹಾಳಾಗಿದೆ ಆರೋಗ್ಯ ಉಪಕೇಂದ್ರ; ಗ್ರಾಮಸ್ಥರಿಗೆ ಆರೋಗ್ಯ ಸೇವೆಯೂ ದೂರ

ಚಿಕ್ಕಂದವಾಡಿಯಲ್ಲಿ ಒಂದು ಪ್ರಾಥಮಿಕ ಆರೋಗ್ಯ ಉಪ ಕೇಂದ್ರವಿದೆ. ಆದರೆ, ಅದು ನಿಜಕ್ಕೂ...

ಗದಗ | ಬಡವರ, ಸಣ್ಣ ರೈತರ ಪ್ರಕರಣಗಳ ಪರಿಹಾರಕ್ಕಾಗಿ ಹೊಸ ಕಾನೂನು ಜಾರಿ: ಸಚಿವ ಎಚ್‌.ಕೆ ಪಾಟೀಲ್

ಬಡವರ, ಸಣ್ಣ ರೈತರ ಪ್ರಕರಣಗಳ ಪರಿಹಾರಕ್ಕಾಗಿ ಮಾರ್ಚ್ 4ರಂದು ರಾಜ್ಯಾದ್ಯಂತ ನೂತನ...

ವಿಜಯಪುರ | ಭಾರತೀಯರು ಸಹಬಾಳ್ವೆಯಿಂದ ಜೀವನ ಸಾಗಿಸಬೇಕು: ಡಾ. ಅಸಂಗ ವಾಂಖೇಡೆ

ಭಾರತೀಯರಾದ ಎಲ್ಲರೂ ಸಮಭಾವ ಸಹಬಾಳ್ವೆಯಿಂದ ಜೀವನವನ್ನು ಸಾಗಿಸಬೇಕು ಎಂದು ಅಮೇರಿಕದ ಆಕ್ಸ್‌ಫರ್ಡ್...

ಗದಗ | ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ

ಪ್ರತೀ ತಿಂಗಳು ಪಂಚ ಗ್ಯಾರಂಟಿಗಳಾದ ಅನ್ನಭಾಗ್ಯ ಯೋಜನೆಯಡಿ 12ಕೋಟಿ, ಗೃಹಲಕ್ಷ್ಮಿ ಯೋಜನೆಗೆ...