ಬೆಳಗಾವಿ | ಸರ್ಕಾರಿ ಶಾಲೆಯಲ್ಲಿ ಕನ್ನಡ ಮಾಧ್ಯಮ ಮಕ್ಕಳ ಮೇಲೆ ಮಲತಾಯಿ ಧೋರಣೆ ಆರೋಪ

Date:

Advertisements

ಬೆಳಗಾವಿ ಕನ್ನಡ ಹೋರಾಟಗಳಿಗೆ ಹೆಸರಾದ ಜಿಲ್ಲೆ. ಇಲ್ಲಿ ಅದೆಷ್ಟೋ ಕನ್ನಡ ಪರ ಹೋರಾಟಗಳು ನಡೆದಿವೆ, ನಡೆಯುತ್ತಲೇ ಇವೆ. ಆದರೂ ಸಹ ಕನ್ನಡ ಮಾಧ್ಯಮದ ಮಕ್ಕಳಿಗೆ ಇಲ್ಲಿ ತೋರುತ್ತಿರುವ ಮಲತಾಯಿ ಧೋರಣೆಗೆ ಮಾತ್ರ ಇನ್ನೂ ಮುಕ್ತಿ ಸಿಕ್ಕಿಲ್ಲ.

ಬೆಳಗಾವಿ ತಾಲೂಕಿನ ನಂದಿಹಳ್ಳಿಯ ಗ್ರಾಮದಲ್ಲಿ ಒಂದೇ ಆವರಣದಲ್ಲಿ ಕನ್ನಡ ಮತ್ತು ಮರಾಠಿ ಮಾಧ್ಯಮ ಶಾಲೆಗಳಿವೆ. ಈ ಎರಡು ಶಾಲೆಗಳು ಸರ್ಕಾರಿ ಶಾಲೆಗಳು. ಇಲ್ಲಿ ಕನ್ನಡ ಮಾಧ್ಯಮದ ಮಕ್ಕಳು ಮಾತ್ರ ಮೂಲಭೂತ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಮೂಲಭೂತ ಸೌಕರ್ಯ ನೀಡದೇ ಈ ಮಕ್ಕಳಿಗೆ ಶಾಲಾ ಆವರಣದಲ್ಲೇ ಕೂರಿಸಿ ಪಾಠ ಮಾಡಲಾಗುತ್ತಿದೆ.

ಕನ್ನಡ ಶಾಲೆಯಲ್ಲಿ, ಮರಾಠಿ ಭಾಷೆಯಲ್ಲಿ ಮ್ಯಾಪ್​ಗಳನ್ನು ಬಿಡಿಸಲಾಗಿದೆ. ನಾಮಫಲಕಗಳನ್ನೂ ಕೂಡ ಮರಾಠಿ ಭಾಷೆಯಲ್ಲಿ ಹಾಕಲಾಗಿದೆ. ಕನ್ನಡ ಮಾಧ್ಯಮ ಮಕ್ಕಳಿಗೆ ಕುಡಿಯಲು ನೀರಿಲ್ಲ, ಸೂಕ್ತ ಮೈದಾನವಿಲ್ಲ. ಒಂದೇ ಕೊಠಡಿಯಲ್ಲಿ ಐದು ತರಗತಿಯನ್ನು ನಡೆಸಲಾಗುತ್ತಿದೆ. ಮತ್ತೊಂದು ವರ್ಗದ ಮಕ್ಕಳಿಗೆ ಕಟ್ಟೆ ಮೇಲೆ ಕೂರಿಸಿ ಶಿಕ್ಷಕರು ಪಾಠ ಮಾಡುತ್ತಿದ್ದಾರೆ.

Advertisements

ಆದರೆ, ಮರಾಠಿ ಮಾಧ್ಯಮದ ಮಕ್ಕಳಿಗೆ ಎಲ್ಲ ಸೌಲಭ್ಯಗಳನ್ನು ನೀಡಿ, ಕೊಠಡಿಯೊಳಗೆ ಕೂರಿಸಿ ಪಾಠ ಮಾಡಲಾಗುತ್ತಿದೆ.

ಇದನ್ನು ತಿಳಿದ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಶಾಲೆಗೆ ದೌಡಾಯಿಸಿ ಮುಖ್ಯ ಶಿಕ್ಷಕಿಯನ್ನು ತರಾಟೆಗೆ ತೆಗೆದುಕೊಂಡಿದ್ದರು. ಕನ್ನಡ ಶಾಲಾ ಮಕ್ಕಳಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ಕರವೇ ಕಾರ್ಯಕರ್ತರು ಖಂಡನೆ ವ್ಯಕ್ತಪಡಿಸಿದರು. ಇನ್ನು ಕರವೇ ಕಾರ್ಯಕರ್ತರು ಆಗಮಿಸುವ ವಿಚಾರ ತಿಳಿದು ಶಿಕ್ಷಕರು ಕನ್ನಡ ಮಾಧ್ಯಮ ಮಕ್ಕಳನ್ನು ಕೊಠಡಿಯೊಳಗೆ ಕೂರಿಸಿದರು. ವಿಷಯ ತಿಳಿದು ಬೆಳಗಾವಿ ಗ್ರಾಮೀಣ ಪೊಲೀಸರು ಶಾಲೆಗೆ ಆಗಮಿಸಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ.

ಈ ಬಗ್ಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಮಾಧ್ಯಮದವರು ಪ್ರಶ್ನಿಸಿದಾಗ ಈ ಆರೋಪವನ್ನು ತಳ್ಳಿಹಾಕಿದ್ದಾರೆ. ನಂದಿ ಹಳ್ಳಿಯ ಶೇ.90 ರಷ್ಟು ಜನ ನನಗೆ ಗೊತ್ತು. ಈ ಬಗ್ಗೆ ಗ್ರಾಮಸ್ಥರು ನನ್ನ ಗಮನಕ್ಕೆ ತಂದಿಲ್ಲ. ಆ ರೀತಿ ತಾರತಮ್ಯ ಎಲ್ಲಿಯೂ ಆಗುತ್ತಿಲ್ಲ. ನನ್ನ ಕ್ಷೇತ್ರದಲ್ಲಿ ಮರಾಠಿ ಶಾಲೆಗಳಲ್ಲಿ ಮರಾಠಿ ಕಲೆಯುವ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗಿದೆ. ಪಾಲಕರು ಕನ್ನಡ ಮಾಧ್ಯಮಗಳಿಗೆ ಮಕ್ಕಳನ್ನು ಕಳುಹಿಸುತ್ತಿದ್ದಾರೆ ಎಂದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

Download Eedina App Android / iOS

X