ಬೆಳಗಾವಿಯ | ಇಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ಯುವ ಕವಿಗೋಷ್ಠಿ

Date:

Advertisements

ಕರ್ನಾಟಕ ಸಾಹಿತ್ಯ ಅಕಾಡೆಮಿಯ ಪ್ರತಿಷ್ಠಿತ ಯುವ ಕವಿಗೋಷ್ಠಿಗೆ ಒಟ್ಟು 23 ಯುವಕವಿಗಳು ಆಯ್ಕೆಯಾಗಿದ್ದು ಜುಲೈ 21ರಂದು ಅಂದರೆ ಇಂದು ಬೆಳಗಾವಿ ಪಟ್ಟಣದ ಮುನ್ನಡ ಭವನದಲ್ಲಿ ನಡೆಯಲಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಕರ್ನಾಟಕ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಎಲ್.ಎನ್. ಮುಕುಂದರಾಜ್ ಅವರು ನೆರವೇರಿಸಲಿದ್ದಾರೆ. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಳಗಾವಿ ಕನ್ನಡ ಭವನದ ನಿರ್ದೇಶಕರಾದ ಡಾ. ಬಸವರಾಜ ಜಗಜಂಪಿ ಅವರು ವಹಿಸುವರು.

ಕರ್ನಾಟಕ ಸಾಹಿತ್ಯ ಅಕಾಡೆಮಿಯ ಸದಸ್ಯರಾದ ಡಾ. ಮೈತ್ರೇಯಿಣಿ ಗಡಿಗೆಪ್ಪಗೌಡರ ಅವರು ಆಶಯನುಡಿಗಳನ್ನಾಡುವರು. 

Advertisements

ಯುವಕವಿಗೋಷ್ಠಿಯ ಅಧ್ಯಕ್ಷತೆಯನ್ನು ಯುವಕವಿ ದೇವರಾಜ ಹುಣಸಿಕಟ್ಟಿ ಅವರು ವಹಿಸಲಿದ್ದಾರೆ. ಯುವಕವಿಗೋಷ್ಠಿಯ ನಿರ್ವಹಣೆಯನ್ನು ಕರ್ನಾಟಕ ಸಾಹಿತ್ಯ ಅಕಾಡೆಮಿಯ ಸದಸ್ಯರಾದ ಶ್ರೀ ಮಹಾದೇವ ಬಸರಕೋಡ ಅವರು ಮಾಡಲಿದ್ದಾರೆ.

ಈ ಸುದ್ದಿ ಓದಿದ್ದೀರಾ? ಗದಗ | ಜಿಲ್ಲೆಗೆ ನೂತನ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್ ನೇಮಕ

ಇದೆ ಕಾರ್ಯಕ್ರಮದಲ್ಲಿ ಮಧ್ಯಾಹ್ನ ೨ ಗಂಟೆಗೆ ಡಾ. ಹೇಮಾ ಪಟ್ಟಣಶೆಟ್ಟಿ ಅವರು “ಕಾವ್ಯ – ಅನುಸಂಧಾನ” ಎನ್ನುವ ವಿಷಯದ ಬಗ್ಗೆ ವಿಶೇಷ ಉಪನ್ಯಾಸವನ್ನು ನೀಡಲಿದ್ದಾರೆ. 

ಸಾಹಿತ್ಯ ಅಕಾಡೆಮಿಯ ಕಾರ್ಯದರ್ಶಿಗಳಾದ ಕರಿಯಪ್ಪ ಎನ್., ಕರ್ನಾಟಕ ಸಾಹಿತ್ಯ ಅಕಾಡೆಮಿಯ ಸದಸ್ಯರುಗಳಾದ ಡಾ. ಮಲ್ಲಿಕಾರ್ಜುನ ಮಾನ್ಪಡೆ ಮತ್ತು ಬೆಳಗಾವಿ ಕನ್ನಡ ಭವನದ ಕಾರ್ಯದರ್ಶಿಗಳಾದ ಶ್ರೀ ಯ.ರು. ಪಾಟೀಲ ಉಪಸ್ಥಿತರಿರಲಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

Download Eedina App Android / iOS

X