ಬೆಳಗಾವಿ | ಕಿತ್ತೂರು ಉತ್ಸವ: ಚನ್ನಮ್ಮನ ವಂಶಸ್ಥರ ಬಹಿಷ್ಕಾರ ಘೋಷಣೆ: ಕಾರಣವೇನು?

Date:

ಬೆಳಗಾವಿ ಜಿಲ್ಲೆ ಚೆನ್ನಮ್ಮನ ಕಿತ್ತೂರು ವಿಜಯೋತ್ಸವದ 200ನೇ ವರ್ಷಾಚರಣೆಯ ಆಹ್ವಾನ ಪತ್ರಿಕೆಯಲ್ಲಿ ರಾಣಿ ಚೆನ್ನಮ್ಮನ ವಂಶಸ್ಥರ ಹೆಸರು ಕೈಬಿಟ್ಟು, ಸಂಬಂಧವೇ ಇಲ್ಲದ ಮಹಾರಾಷ್ಟ್ರ ಮೂಲದ ಉದ್ಯಮಿ, ಸ್ಟಾರ್ ಏರ್‌ಲೈನ್ಸ್ ಸಂಸ್ಥಾಪಕ ಸಂಜಯ ಘೋಡಾವತ್ ಹೆಸರು ಸೇರಿಸಿದ್ದು ವಿವಾದಕ್ಕೆ ಕಾರಣವಾಗಿದೆ.

- Advertisement -

ಅಕ್ಟೋಬರ 25ರಂದು ರಾತ್ರಿ 8ಕ್ಕೆ ನಡೆಯುವ ಉತ್ಸವದ ಸಮಾರೋಪ ಸಮಾರಂಭದಲ್ಲಿ ಸಂಜಯ ಘೋಡಾವತ್ ವಿಶೇಷ ಆಹ್ವಾನಿತರಾಗಿದ್ದು, ಅದೇ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾ‌ರ್ ಕೂಡ ಪಾಲ್ಗೊಳ್ಳುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

‘ಉತ್ಸವದ ಆಹ್ವಾನ ಪತ್ರಿಕೆಯಲ್ಲಿ ನಮ್ಮ ಹೆಸರಿಲ್ಲ. ಸಂಬಂಧವೇ ಇಲ್ಲದವರ ಹೆಸರು ಸೇರಿಸಿದ್ದಾರೆ. ನಮಗೆ ಸೌಜನ್ಯಕ್ಕಾದರೂ ಆಹ್ವಾನ ಪತ್ರಿಕೆಯನ್ನು ನೀಡಿಲ್ಲ. ಚನ್ನಮ್ಮನ ಪರಿವಾರದವರಾದ ನಾವು ಈ ಉತ್ಸವ ಬಹಿಷ್ಕರಿಸುತ್ತೇವೆ’ ಎಂದು ಉದಯ ದೇಸಾಯಿ ಮಾದ್ಯಮ ಪ್ರತಿನಿಧಿಯೊಂದಿಗೆ ಮಾತನಾಡಿ ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಬೆಳಗಾವಿ | ಕಿತ್ತೂರು ರಾಣಿ ಚೆನ್ನಮ್ಮ ವೀರಜ್ಯೋತಿಗೆ ವಿದ್ಯಾರ್ಥಿಗಳಿಂದ ಸ್ವಾಗತ

ಹೀಗೆ ಉತ್ಸವಕ್ಕೆ ಉದ್ಯಮಿಗಳಿಂದ ದೊಡ್ಡ ಮೊತ್ತದ ದೇಣಿಗೆ ಪಡೆದು ಹೆಸರು ಹಾಕಿದ್ದಾರೆ ಎಂಬ ಆರೋಪವು ಕೇಳಿ ಬರುತ್ತಿದ್ದು, ಉತ್ಸವದ ಆಹ್ವಾನ ಪತ್ರಿಕೆಯಲ್ಲಿ ‘ವಿವಿಧ ಸಾಧಕರಿಗೆ ಹಾಗೂ ಕಿತ್ತೂರು ಚನ್ನಮ್ಮನ ವಂಶಸ್ಥರಿಗೆ ಸನ್ಮಾನ’ ಎಂಬ ಸಾಲು ಬರೆಯಲಾಗಿದೆ. ಆದರೆ, ಚನ್ನಮ್ಮನ ವಂಶಸ್ಥರು ಅಥವಾ ಪರಿವಾರದವರ ಯಾರೊಬ್ಬರ ಹೆಸರನ್ನೂ ಪ್ರಕಟಿಸಿಲ್ಲ ಎಂದು ತಿಳಿದುಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...