ಬೆಳಗಾವಿ | ಸಂಕಷ್ಟದಲ್ಲಿ ಚರ್ಮ ಕುಶಲಕರ್ಮಿಗಳು; ಅಧಿವೇಶನದಲ್ಲಿ ಚರ್ಚೆಗೆ ಒತ್ತಾಯ

Date:

Advertisements

ಚರ್ಮ ಕುಶಲಕರ್ಮಿಗಳ ಬಗ್ಗೆ ಬೆಳಗಾವಿ ಅಧಿವೇಶನದಲ್ಲಿ ಚರ್ಚಿಸಿ, ನೆರವಿಗೆ ಬರುವಂತೆ ಕುಶಲಕರ್ಮಿಗಳು ಆಗ್ರಹಿಸುತ್ತಿದ್ದಾರೆ.

ಕೊಲ್ಹಾಪುರಿ ಚಪ್ಪಲಿಗೆ ಮಹಾರಾಷ್ಟ್ರದ ಕೊಲ್ಹಾಪುರದ ಹೆಸರು ಬಂದಿದ್ದರೂ ತಯಾರಾಗುವುದು ಮಾತ್ರ ಕರ್ನಾಟಕದಲ್ಲಿ. ಆದರೆ, ಸರಿಯಾದ ಮಾರುಕಟ್ಟೆ ಸೌಲಭ್ಯವಿಲ್ಲದೇ ಚರ್ಮ ಉದ್ಯೋಗವನ್ನೇ ನಂಬಿ ಜೀವನ ಸಾಗಿಸುತ್ತಿರುವ ಬೆಳಗಾವಿ ಜಿಲ್ಲೆಯ ಒಂದೂವರೆ ಲಕ್ಷಕ್ಕೂ ಹೆಚ್ಚು ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿವೆ.

ಜಿಲ್ಲೆಯ ಚಿಕ್ಕೋಡಿ ಉಪವಿಭಾಗದ ಅಥಣಿ, ನಿಪ್ಪಾಣಿ, ರಾಯಬಾಗ ಸೇರಿದಂತೆ ಒಂದೂವರೆ ಲಕ್ಷಕ್ಕೂ ಹೆಚ್ಚು ಚರ್ಮ ಕುಶಲಕರ್ಮಿಗಳಿದ್ದಾರೆ. ಹಲವು ವರ್ಷಗಳಿಂದ ಈ ಕುಟುಂಬಗಳು ಚರ್ಮದ ಚಪ್ಪಲಿ ತಯಾರಿಸುತ್ತಿವೆ. ಅಥಣಿ ಸೇರಿ ವಿವಿಧೆಡೆ ತಯಾರಾಗುವ ವಿಶಿಷ್ಟ ಶೈಲಿಯ ಚಪ್ಪಲಿಗೆ ಹೆಸರು ಬಂದಿದ್ದು ಮಾತ್ರ ಮಹಾರಾಷ್ಟ್ರದ ಕೊಲ್ಹಾಪುರದ್ದು.

Advertisements

ಮಾರುಕಟ್ಟೆಯಲ್ಲಿ ಬಂದಿರುವ ದೊಡ್ಡ ದೊಡ್ಡ ಬ್ರ್ಯಾಂಡ್​ಗಳ ಮಧ್ಯೆ ಅಥಣಿಯ ಚಪ್ಪಲಿ ತಯಾರಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅದರಲ್ಲೂ ಚರ್ಮ ಕುಶಲಕರ್ಮಿಗಳ ಬಳಿಯೂ ಶೇಕಡ 12ರಷ್ಟು ಜಿಎಸ್​ಟಿ ವಸೂಲಾತಿ ಮಾಡಲಾಗುತ್ತಿದ್ದು, ನಮಗೆ ತೊಂದರೆಯಾಗಿದೆ ಎಂದು ಅಖಿಲ ಕರ್ನಾಟಕ ಚರ್ಮಕಾರ ಸಮಾಜ ಮಹಾಒಕ್ಕೂಟ ಅಧ್ಯಕ್ಷ ಅನಿಲ್ ಕುಮಾರ್ ಸೌದಾಗರ್ ಆರೋಪಿಸಿದ್ದಾರೆ.

ಅಷ್ಟೇ ಅಲ್ಲದೇ ಅಥಣಿಯಲ್ಲಿ ತಯಾರಾಗಿ ವಿದೇಶಕ್ಕೆ ಚಪ್ಪಲಿಗಳು ರಫ್ತಾಗುತ್ತಿತ್ತು. ಅದನ್ನೂ ಸಹ ಈಗ ಸ್ಥಗಿತಗೊಳಿಸಿದ್ದಾರೆ. ಮೊದಲು ರಾಜ್ಯ ಸರ್ಕಾರ 60:40 ಅನುಪಾತದಲ್ಲಿ ಸಬ್ಸಿಡಿ ಸೌಲಭ್ಯ ನೀಡುತ್ತಿತ್ತು. ಇದನ್ನು ಕಡಿತ ಮಾಡಿದ್ದು ಚರ್ಮ ಕುಶಲಕರ್ಮಿಗಳು ಸಂಕಷ್ಟದಲ್ಲಿದ್ದಾರೆ.

ಹೀಗಾಗಿ ಬೆಳಗಾವಿಯಲ್ಲಿ ಡಿಸೆಂಬರ್ 4ರಿಂದ ನಡೆಯುವ ಅಧಿವೇಶನದಲ್ಲಿ ಚರ್ಮಕುಶಲಕರ್ಮಿಗಳ ಸಂಕಷ್ಟದ ಬಗ್ಗೆ ಚರ್ಚೆ ಮಾಡಬೇಕು. ಚರ್ಮ ಕುಶಲಕರ್ಮಿಗಳ ಅನುಕೂಲಕ್ಕಾಗಿ ಪ್ರತ್ಯೇಕ ನಿಗಮ ಮಂಡಳಿ ಸ್ಥಾಪನೆ ಮಾಡಿ 200ಕೋಟಿ ರೂ. ಹಣ ಮೀಸಲಿಡಬೇಕು ಎಂದು ಆಗ್ರಹಿಸಿದ್ದಾರೆ.

ಅಷ್ಟೇ ಅಲ್ಲದೇ ಹೊರದೇಶದಿಂದ ಚರ್ಮವನ್ನು ಆಮದು ಮಾಡಿಕೊಳ್ಳುವುದನ್ನು ಸ್ಥಗಿತಗೊಳಿಸಿದ್ದಾರೆ. ಇತ್ತ ವಿದೇಶಕ್ಕೆ ಚಪ್ಪಲಿಗಳ ರಫ್ತು ಸ್ಥಗಿತಗೊಳಿಸಿದ್ದರಿಂದ ಚರ್ಮ ಕುಶಲಕರ್ಮಿಗಳ ಮೇಲೆ ಪರಿಣಾಮ ಬೀರಿದೆ ಎಂದು ಆರೋಪಿಸಿದ್ದಾರೆ.

ಇನ್ನು ಕೊಲ್ಹಾಪುರ ಬ್ರ್ಯಾಂಡ್​ಗೆ ಪರ್ಯಾಯವಾಗಿ ರಾಜ್ಯದಲ್ಲಿ ಅಥಣಿ ಬ್ರ್ಯಾಂಡ್ ಚರ್ಮದ ಚಪ್ಪಲಿ ಹೆಸರಿನಡಿ ಮಾರಾಟ ಮಾಡಬೇಕೆಂದು ಹಿಂದಿನ ಸರ್ಕಾರ ಘೋಷಣೆ ಮಾಡಿತ್ತು. ಆದರೆ, ಮಾರ್ಕೆಟಿಂಗ್ ವ್ಯವಸ್ಥೆ ಸರಿ ಇಲ್ಲ ಎಂದು ಚರ್ಮ ಕುಶಲಕರ್ಮಿಗಳು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ನೆರೆಯ ಮಹಾರಾಷ್ಟ್ರ ಬ್ರ್ಯಾಂಡ್​ಗೆ ನಮ್ಮ ರಾಜ್ಯದ ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಇದರ ಬದಲಿಗೆ ಕರ್ನಾಟಕ ಬ್ರ್ಯಾಂಡ್​ನ್ನೇ ಬೆಳೆಸಬೇಕೆಂಬ ಉದ್ದೇಶದಿಂದ ಅಥಣಿ ಬ್ರ್ಯಾಂಡ್ ಆರಂಭಿಸಲಾಗಿದ್ದು, ಇದರ ಮಾರ್ಕೆಟಿಂಗ್​ಗೆ ಕ್ರಮ ವಹಿಸಬೇಕು.

ಈಗ ಚರ್ಮದ ಚಪ್ಪಲಿಗಳ ತಯಾರಿಕೆಗೆ ಅತ್ಯಾಧುನಿಕ ಯಂತ್ರೋಪಕರಣಗಳು ಬಂದಿದ್ದು, ಯಂತ್ರೋಪಕರಣಗಳ ಖರೀದಿಗೆ ಸರ್ಕಾರ ನೆರವು ನೀಡಬೇಕು. ಮೊದಲಿನಂತೆಯೇ 60:40 ಅನುಪಾತದಡಿ ಸಬ್ಸಿಡಿ ನೀಡುವ ಯೋಜನೆ ರೂಪಿಸಬೇಕು.

ಈಗಾಗಲೇ ಡಾ.ಬಾಬು ಜಗಜೀವನರಾಂ ಚರ್ಮ ಕೈಗಾರಿಕೆಗಳ ಅಭಿವೃದ್ಧಿ ನಿಗಮಕ್ಕೂ ಹೆಚ್ಚಿನ ಅನುದಾನ ಬಿಡುಗಡೆ ಮಾಡಿ ಅತ್ಯುತ್ತಮ ಗುಣಮಟ್ಟದ ಅಥಣಿ ಬ್ರ್ಯಾಂಡ್ ಚಪ್ಪಲಿಗಳ ಮಾರಾಟಕ್ಕೆ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸುತ್ತಿದ್ದಾರೆ.

ಒಟ್ಟಾರೆಯಾಗಿ ರಾಜ್ಯಾದ್ಯಂತ 18 ಲಕ್ಷಕ್ಕೂ ಹೆಚ್ಚು ಚರ್ಮ ಕುಶಲಕರ್ಮಿಗಳು ಇದ್ದು ಸಂಕಷ್ಟಕ್ಕೆ ಸಿಲುಕಿದ್ದಾರೆ. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಡಿಸೆಂಬರ್ 4ರಿಂದ ನಡೆಯುವ ಚಳಿಗಾಲದ ಅಧಿವೇಶನದಲ್ಲಿ ಈ ಬಗ್ಗೆ ಚರ್ಚಿಸಬೇಕು. ಈಗಾಗಲೇ ಡಾ.ಬಾಬು ಜಗಜೀವನರಾಂ ಚರ್ಮ ಕೈಗಾರಿಕೆಗಳ ಅಭಿವೃದ್ಧಿ ನಿಗಮವಿದ್ದರೂ ಚರ್ಮ ಕುಶಲಕರ್ಮಿಗಳಿಗೆ ಪ್ರತ್ಯೇಕ ನಿಗಮ ಸ್ಥಾಪನೆ ಮಾಡಬೇಕೆಂಬುದು ಚರ್ಮ ಕುಶಲಕರ್ಮಿಗಳ ಹಕ್ಕೊತ್ತಾಯ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

Download Eedina App Android / iOS

X