ಬೆಳಗಾವಿ | ʼಮಾರುಕಟ್ಟೆ ದರ ಆಧರಿಸಿ ಲೋಕಸಭಾ ಚುನಾವಣಾ ಪ್ರಚಾರ ವೆಚ್ಚ ನಿಗದಿʼ

Date:

Advertisements

ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಚುನಾವಣೆ ಪ್ರಚಾರ ವೆಚ್ಚದ ದರ ನಿಗದಿಪಡಿಸುವ ಕುರಿತು ಗುರುವಾರ (ಡಿ.21) ಬೆಳಗಾವಿ ಜಿಲ್ಲಾಧಿಕಾರಿ ನಿತೀಶ ಪಾಟಿಲ್ ಸಭೆ ನಡೆಸಿದ್ದಾರೆ.

ಬರಲಿರುವ ಲೋಕಸಭೆ ಚುನಾವಣೆ ಸಂದರ್ಭ ಚುನಾವಣೆ ಪ್ರಚಾರಕ್ಕಾಗಿ ಅಭ್ಯರ್ಥಿಗಳು ಬಳಸುವ ಸಾಮಗ್ರಿಗಳು ಮತ್ತು ಸೇವೆಗಳ ವೆಚ್ಚದ ದರವನ್ನು ಮಾರುಕಟ್ಟೆಯ ನಿರ್ದಿಷ್ಟ ದರ ಆಧರಿಸಿಯೇ ನಿಗದಿಗೊಳಿಸಲಾಗುವುದು ಎಂದು ಜಿಲ್ಲಾ  ಚುನಾವಣಾಧಿಕಾರಿ ಆಗಿರುವ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಹೇಳಿದರು.

ಆರು ತಿಂಗಳ ಹಿಂದೆ ನಡೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲೇ ವಿವಿಧ ಸಾಮಗ್ರಿ ಮತ್ತು ಸೇವೆಗಳ ದರ ನಿಗದಿಪಡಿಸಲಾಗಿತ್ತು. ಆದರೆ‌, ಪ್ರಸ್ತುತ ಮಾರುಕಟ್ಟೆ ಮತ್ತು ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಲಹೆಯನ್ನು ಆಧರಿಸಿ, ದರಗಳಲ್ಲಿ ಅಗತ್ಯ ಪರಿಷ್ಕರಣೆ ಮಾಡಲಾಗುವುದು ಎಂದರು. ಈ ವೇಳೆ ಚುನಾವಣಾ ಪ್ರಚಾರ ಸಂದರ್ಭ ಬಳಸಲಾಗುವ ಹೂವುಗಳ ದರ ಕಡಿಮೆಗೊಳಿಸಬೇಕು ಎಂದು ಪ್ರತಿನಿಧಿಗಳು ಸಲಹೆ ನೀಡಿದರು.

Advertisements

2024 ಜನವರಿ 1ರಂದು ಮತದಾರರ ಅಂತಿಮ ಪಟ್ಟಿ ಪ್ರಕಟಿಸಲಾಗುವುದು ಅಲ್ಲಿಯವರೆಗೂ ಚುನಾವಣಾ ಆಯೋಗದ ಮಾರ್ಗಸೂಚಿ ಮತ್ತು ನಿರ್ದೇಶನದ ಪ್ರಕಾರ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ ನಡೆಯಲಿದೆ. ಚುನಾವಣೆಗೆ ಸಾಕಷ್ಟು ಕಾಲಾವಕಾಶವಿದ್ದು ನಗರದಲ್ಲಿನ ಪುಷ್ಪ ಹರಾಜು ಕೇಂದ್ರದಿಂದ ಸಗಟು ಮಾರುಕಟ್ಟೆಯ ದರ ಪಡೆದುಕೊಂಡು ಪರಿಷ್ಕರಿಸಲಾಗುವುದು. ಹೊಸ ಸಾಮಗ್ರಿ‌ ಅಥವಾ ಸೇವೆಗಳನ್ನು ಸೇರ್ಪಡೆಗೊಳಿಸಲಾಗುವುದು ಎಂದ ಜಿಲ್ಲಾಧಿಕಾರಿ ಅ.27ರಿಂದ ಡಿ.9ರ ಅವಧಿಯಲ್ಲಿ ಮಾಡಿರುವ ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ಮಾಹಿತಿ ನೀಡಿದರು.

ಹೆಚ್ಚುವರಿ ಜಿಲ್ಲಾಧಿಕಾರಿಯಾದ ವಿಜಯಕುಮಾರ ಹೊನಕೇರಿ ಮತ್ತು ಜಿಲ್ಲಾ ಪಂಚಾಯಿತಿ ಮುಖ್ಯ ಲೆಕ್ಕಾಧಿಕಾರಿ ಪರಶುರಾಮ ದುಡಗುಂಟಿ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಶ್ರೀಶೈಲ ಕಂಕಣವಾಡಿ, ಮಹಾನಗರ ಪಾಲಿಕೆ ಉಪ ಆಯುಕ್ತೆ ರೇಷ್ಮಾ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ತಾಳಿಕೋಟೆ ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

Download Eedina App Android / iOS

X