ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ಅವರ ಸಹೋದರ ಚನ್ನರಾಜ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನಲ್ಲಿ ನಡೆದಿದೆ. ರಸ್ತೆಯಲ್ಲಿ ಅಡ್ಡ ಬಂದ ನಾಯಿಗೆ ಡಿಕ್ಕಿ ಹೊಡೆಯುವುದನ್ನ ತಪ್ಪಿಸಲು ಹೋಗಿ, ಕಾರು ಮರಕ್ಕೆ ಡಿಕ್ಕಿಯಾಗಿದೆ. ಕಾರಿನ ಮುಂಭಾಗ ನಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಕಿತ್ತೂರು ತಾಲೂಕಿನ ಅಂಬಡಗಟ್ಟಿ ಬಳಿ ಘಟನೆ ಸಂಭವಿಸಿದೆ. ಲಕ್ಷ್ಮೀ ಹೆಬ್ಬಾಳ್ಕರ್, ಅವರ ಸಹೋದರ ಹಾಗೂ ಚಾಲಕನಿಗೆ ಸಣ್ಣ-ಪುಟ್ಟ ಗಾಯಗಳಾಗಿವೆ. ಎಲ್ಲರನ್ನೂ ಬೆಳಗಾವಿಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಲಕ್ಷ್ಮಿ ಹೆಬ್ಬಾಳ್ಕರ್ ತಮ್ಮ ಕಾರಿನಲ್ಲಿ ಬೆಂಗಳೂರಿನಿಂದ ಬೆಳಗಾವಿಗೆ ತೆರಳುತ್ತಿದ್ದರು. ಈ ವೇಳೆ, ಅಂಬಡಗಟ್ಟಿ ಬಳಿ ಕಾರಿಗೆ ನಾಯಿ ಅಡ್ಡ ಬಂದಿದ್ದರಿಂದ ಕಾರು ಅಪಘಾತಕ್ಕೀಡಾಗಿದೆ ಎಂದು ತಿಳಿದುಬಂದಿದೆ.