ಬೆಳಗಾವಿ | ನಾನಾ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಮನರೇಗಾ ಕಾರ್ಮಿಕರ ಪ್ರತಿಭಟನೆ

Date:

  • ಮಜದೂರ್ ನವನಿರ್ಮಾಣ ಸಂಘ ವತಿಯಿಂದ ಹೋರಾಟ
  • ತಾಲೂಕು ಪಂಚಾಯತಿ ಕಾರ್ಯನಿರ್ವಹಣಾಧಿಕಾರಿಗೆ ಮನವಿ

ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಕೆಲಸ ಮಾಡುತ್ತಿರುವ ಮಹಿಳೆಯರು ತಮ್ಮ ಹಲವು ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಬೆಳಗಾವಿಯ ತಾಲೂಕು ಪಂಚಾಯತಿ ಎದುರು ‘ಮಜದೂರ್ ನವನಿರ್ಮಾಣ ಸಂಘ’ ನೇತೃತ್ವದಲ್ಲಿ ಬಹಾದ್ದರವಾಡಿ, ಕರ್ಲೆ, ಜಾನೇವಾಡಿ, ಬಾಮನವಾಡಿ ಗ್ರಾಮದ ಮನರೇಗಾ ಕಾರ್ಮಿಕ ಮಹಿಳೆಯರು ಪ್ರತಿಭಟನೆ ನಡೆಸಿದ್ದಾರೆ. ತಾಲೂಕು ಪಂಚಾಯತಿ ಕಾರ್ಯನಿರ್ವಹಣಾಧಿಕಾರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.

“ಕಿನಯೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಹಾದ್ದರವಾಡಿ, ಕರ್ಲೆ, ಜಾನೇವಾಡಿ, ಬಾಮನವಾಡಿ ಗ್ರಾಮಗಳ ಮನರೇಗಾ ಕಾರ್ಮಿಕರಿಗೆ ಕಳೆದ ಹಲವು ವರ್ಷಗಳಿಂದ ವರ್ಷಕ್ಕೆ 100 ದಿನ ಉದ್ಯೋಗ ಸಿಕ್ಕಿಲ್ಲ” ಎಂದು ಆರೋಪಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? : ಕೊಪ್ಪಳ | ಪ್ರಜಾಪ್ರಭುತ್ವ ಉಳಿವಿಗಾಗಿ ಜೈಲಿಗೆ ಹೋಗಲೂ ಹೆದರಬಾರದು; ಕುಂ ವೀರಭದ್ರಪ್ಪ ಕರೆ

“ಉದ್ಯೋಗ ಕೊಡಿಸುವಂತೆ ಹಲವಾರು ಬಾರಿ ಕಿನಯೇ ಗ್ರಾಮ ಪಂಚಾಯಿತಿಗೆ ಮನವಿ ಸಲ್ಲಿಸಲು ಹೋಗಿದ್ದೆವು. ಆದರೆ, ಬಡ ಕೂಲಿ ಕಾರ್ಮಿಕರ ಸಮಸ್ಯೆಗಳನ್ನು ಆಲಿಸಲು ಪಂಚಾಯಿತಿಯಲ್ಲಿ ಯಾರೂ ಇರುವುದಿಲ್ಲ, ನಮ್ಮ ಸಮಸ್ಯೆ ಕೇಳಲು ಇವರಿಗೆ ಸಮಯವಿಲ್ಲ” ಎಂದು ದೂರಿದ್ದಾರೆ.

“ಪಂಚಾಯತಿ ವ್ಯಾಪ್ತಿಯ ಕೆಲ ಗ್ರಾಮಗಳ ಮಹಿಳೆಯರು ಪಂಚಾಯಿತಿಯಿಂದ ಜಾಬ್ ಕಾರ್ಡ್ ಪಡೆಯಲು 2 ವರ್ಷ ಕಾಯಬೇಕಾಗಿದ್ದು, ಈ ಗ್ರಾಮಗಳಲ್ಲಿ ವರ್ಷದಲ್ಲಿ ಕೆಲವೇ ದಿನ ಮಾತ್ರ ಕೆಲಸ ಸಿಗುತ್ತಿದೆ. ಸಮಗ್ರ ಮನರೇಗಾ ಕಾಯಿದೆಯಂತೆ ಇಡೀ ಗ್ರಾಮಸ್ಥರಿಗೆ ಇದುವರೆಗೂ ಸರಿಯಾಗಿ ಉದ್ಯೋಗ ಸಿಕ್ಕಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಹೀಗಾಗಿ ಇಲ್ಲಿಯೇ ಉದ್ಯೋಗ ಪಡೆಯಬೇಕು ಎಂದುಕೊಂಡಿರುವ ಬಡ ಕಾರ್ಮಿಕ ಮಹಿಳೆಯರು ಪಂಚಾಯಿತಿಯ ಸಮಯಸಾಧಕ ಕ್ರಮದಿಂದ ಬೇಸತ್ತು ‘ಮಜದೂರ್ ನವನಿರ್ಮಾಣ ಸಂಘ’ದ ರಾಹುಲ್ ಪಾಟೀಲ್ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಆದಷ್ಟು ಬೇಗ ನಮ್ಮ ಹಲವು ಸಮಸ್ಯೆಗಳನ್ನು ಪೂರೈಸಬೇಕು” ಎಂದು ಮನವಿ ಮಾಡಿಕೊಂಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಎಂ ಕಚೇರಿಯ ಗಮನ ಸೆಳೆದ ಉಳ್ಳಾಲ ನಗರಸಭೆಯ ಕಸದ ವಾಹನ: ವಿಡಿಯೋ ವೈರಲ್

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇತ್ತೀಚೆಗೆ(ನ.27) ನಡೆಸಿದ ಜನಸ್ಪಂದನಕ್ಕೆ ಅಭೂತಪೂರ್ವವಾದ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಸತತ...

ಬೆಳಗಾವಿ | ಇಂಗ್ಲಿಷ್‌ ಬ್ಯಾನರ್ ಹರಿದು ಕರವೇ ಕಾರ್ಯಕರ್ತರ ಆಕ್ರೋಶ; ವಶಕ್ಕೆ ಪಡೆದ ಪೊಲೀಸರು

ಬೆಳಗಾವಿಯ ಸುವರ್ಣಸೌಧದಲ್ಲಿ ಡಿಸೆಂಬರ್ 4ರಿಂದ ಚಳಿಗಾಲದ ಅಧಿವೇಶನ ಆರಂಭವಾಗಲಿದೆ. ಅದಕ್ಕೂ ಮುನ್ನ...

ಬೆಂಗಳೂರು | ಬ್ರ್ಯಾಂಡ್‌ ಹೆಸರು ಬಳಸಿ ನಕಲಿ ಬಟ್ಟೆ ತಯಾರು: ಸಿಸಿಬಿ ದಾಳಿ

ಅರ್ಮಾನಿ, ಲಿವೈಸ್, ಅಲ್ಲೆನ್ ಸೊಲ್ಲಿ, ಬುರ್ಬೆರಿ ಲೆದರ್ ಟ್ಯಾಗ್ಸ್, ಪೋಲೊ, ಎಲ್​ಪಿ...

ಮಂಡ್ಯ | ರಸ್ತೆಯಲ್ಲಿ ಸಂಚರಿಸುವ ಒಂಟಿ ಮಹಿಳೆಯರಿಗೆ ಲೈಂಗಿಕ ಕಿರುಕುಳ; ಆರೋಪಿ ಬಂಧನ

ಬೈಕ್​​ನಲ್ಲಿ ಬಂದು ರಸ್ತೆಯಲ್ಲಿ ಓಡಾಡುವ ಒಂಟಿ ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ...