ಸ್ಮಾರ್ಟ್‌ ಸಿಟಿಯಾಗುವತ್ತ ಬೆಳಗಾವಿ; ನೂತನ ಬಸ್ ನಿಲ್ದಾಣ ಉದ್ಘಾಟನೆ, 700 ಹೊಸ ಬಸ್‌ಗಳ ಸೇರ್ಪಡೆ

Date:

ಬೆಳಗಾವಿ ನಗರ ಸಾರಿಗೆ ವ್ಯವಸ್ಥೆಯ ಹೊಸ ಅಧ್ಯಾಯ ಆರಂಭವಾಗಿದ್ದು, ಬೆಳಗಾವಿ ಸ್ಮಾರ್ಟ್ ಸಿಟಿ ಯೋಜನೆಯಡಿ ನಿರ್ಮಿಸಲಾದ ನೂತನ ನಗರ ಸಾರಿಗೆ ಬಸ್ ನಿಲ್ದಾಣವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಅವರು ವಾಯವ್ಯ ರಸ್ತೆ ಸಾರಿಗೆ ಸಂಸ್ಥೆಗೆ 700 ಹೊಸ ಬಸ್ಸುಗಳ ಜೊತೆಗೆ ಬೆಳಗಾವಿ ನಗರ ಬಳಕೆಗೆ ಹೊಸದಾಗಿ 100 ಎಲೆಕ್ಟ್ರಿಕ್ ಬಸ್ಸುಗಳ ಸೇರ್ಪಡೆಗೊಳಿಸಿರುವುದಾಗಿ ಅವರು ಘೋಷಿಸಿದರು.

- Advertisement -

ಸ್ಮಾರ್ಟ್ ಸಿಟಿ ಯೋಜನೆಯಡಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ತಲಾ 50% ಅನುದಾನದೊಂದಿಗೆ ಒಟ್ಟು 49.20 ಕೋಟಿ ವೆಚ್ಚದಲ್ಲಿ ಸುಮಾರು 2 ಎಕರೆ 19 ಗುಂಟೆ ವಿಸ್ತೀರ್ಣದಲ್ಲಿ ಈ ಬಸ್‌ ನಿಲ್ದಾಣವನ್ನು ನಿರ್ಮಿಸಲಾಗಿದೆ. ಅದೇ ರೀತಿ 5 ಎಕರೆ 5 ಗುಂಟೆ ವಿಸ್ತೀರ್ಣದಲ್ಲಿ, ರೂ.24 ಕೋಟಿ ವೆಚ್ಚದಲ್ಲಿ ಎಲೆಕ್ಟ್ರಿಕ್ ಬಸ್ ಘಟಕ ಸ್ಥಾಪನೆ ಮಾಡಲಾಗಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...
WhatsApp Image 2025 10 05 at 3.11.34 PM

“ಸಾರಿಗೆ ಸಂಸ್ಥೆಗಳಲ್ಲಿ ಕಳೆದ ಎರಡುವರೆ ವರ್ಷಗಳಲ್ಲಿ 10000 ಹೊಸ‌ ನೇಮಕಾತಿ‌ ಮಾಡಲಾಗಿದೆ. 215 ಕ್ಕೂ ಹೆಚ್ಚು ಪ್ರಶಸ್ತಿ‌ ಪುರಸ್ಕಾರಗಳು ದೊರೆತಿವೆ. ಶಕ್ತಿ‌ ಯೋಜನೆಯು ಯಶಸ್ವಿಯಾಗಿ ನಡೆಯುತ್ತಿದ್ದು, ಒಟ್ಟು 565.48 ಕೋಟಿ ಮಹಿಳಾ ಟಿಕೇಟ್ ವಿತರಣೆಯಾಗಿದೆ. ಇದಕ್ಕಾಗಿ ರೂ.14456 ಕೋಟಿ ವೆಚ್ಚವಾಗಿದೆ. ಶಕ್ತಿ ಯೋಜನೆಯು ಗೋಲ್ಡನ್‌ ‌ಬುಕ್‌ ಆಪ್ ವರ್ಲ್ಡ್ ರೆಕಾರ್ಡ್ಸ್ ( Golden Book of World Records) ಮತ್ತು ಇಂಟರ್ ನ್ಯಾಶನಲ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ( International Book of World Records ) ಗಳಲ್ಲಿ ಸೇರ್ಪಡೆಯಾಗಿರುವುದು ಶಕ್ತಿ‌‌ ಯೋಜನೆಯ ಯಶಸ್ಸು” ಎಂದು ತಿಳಿಸಿದರು.

ನೂತನ ನಗರ ಸಾರಿಗೆ ಬಸ್‌ ನಿಲ್ದಾಣದಲ್ಲಿ ಒದಗಿಸಿದ ಸೌಕರ್ಯಗಳು: ಬಸ್ ನಿಲ್ದಾಣದಲ್ಲಿ 28 ಅಂಕಣಗಳು,1365 ಸಾರಿಗೆ ಸರತಿಗಳು ನಿರ್ಗಮನ, 56 ಬಡಾವಣೆಗಳು ಒಳಗೊಂಡಂತೆ ಉಪನಗರದ 87 ಸ್ಥಳಗಳಿಗೆ ಒಟ್ಟು 143 ಸ್ಥಳಗಳಿಗೆ 21 ಕಿಮೀ ವ್ಯಾಪ್ತಿಯಲ್ಲಿ ಬಸ್ ಸೌಲಭ್ಯ, ಪ್ರತಿ ದಿನ ಸುಮಾರು 96 ಸಾವಿರ ಜನ ಪ್ರಯಾಣಿಕರು ಪ್ರಯಾಣಿಸಲಿದ್ದಾರೆ. ನೂತನ ನಗರ ಸಾರಿಗೆ ಬಸ್ ನಿಲ್ದಾಣದಲ್ಲಿ ತಳಮಹಡಿ ಮತ್ತು ಐದು(5) ಮಹಡಿ, ಪಾರ್ಕಿಂಗ್ ವ್ಯವಸ್ಥೆ, ವಾಣಿಜ್ಯ ಮಳಿಗೆಗಳು, ಕುಡಿಯುವ ನೀರು, ಶೌಚಾಲಯಗಳು, ಶಿಶುಗಳಿಗೆ ಹಾಲುಣಿಸುವ ಪ್ರತ್ಯೇಕ ಕೊಠಡಿ, ವಿಕಲಚೇತನರ ಪ್ರತ್ಯೇಕ ರಾಂಪ್ ವ್ಯವಸ್ಥೆ, ಪೊಲೀಸ್ ಚೌಕಿ, ವಿಭಾಗೀಯ ಕಚೇರಿ, , ಸಬ್-ವೇ ಸಂಪರ್ಕ, ಲಿಫ್ಟ್, ಎಸ್ಕಲೇಟರ್ ಸೌಲಭ್ಯ ಕೂಡ ಇದೆ.

ಇದನ್ನೂ ಓದಿ: ಬೆಳಗಾವಿ | ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ಚುನಾವಣೆ; ರಮೇಶ್ ಕತ್ತಿ ಪೆನಲ್ ಗೆಲುವಿಗೆ ಕಾರಣವಾದ ಅಂಶಗಳಿವು…

ಕಾರ್ಯಕ್ರಮದಲ್ಲಿ ‌ಮಾನ್ಯ ಸಾರಿಗೆ ಹಾಗೂ ಮುಜರಾಯಿ ಸಚಿವರು, ಮಾನ್ಯ ಲೋಕೋಪಯೋಗಿ ಸಚಿವರು, ಮಾನ್ಯ ವೈದ್ಯಕೀಯ ಶಿಕ್ಷಣ ಸಚಿವರು, ಮಾನ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರು, ಮಾನ್ಯ ಅಧ್ಯಕ್ಷರು ವಾಯವ್ಯ ರಸ್ತೆ ಸಾರಿಗೆ ಸಂಸ್ಥೆ ಹಾಗೂ ಇತರೆ ಗಣ್ಯರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಕೇಂದ್ರ ಸಚಿವ ಪ್ರಲ್ಹಾದ ಜೋಶಿಗೆ ಮನವಿ ಸಲ್ಲಿಸುವ ಮುನ್ನವೇ ಕಬ್ಬು ಬೆಳೆಗಾರರು ಪೋಲಿಸರ ವಶ

ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳ ಈಡೇರಿಕೆ ಕುರಿತಂತೆ ಕೇಂದ್ರ ಸಚಿವ ಪ್ರಹ್ಲಾದ...

ಉಡುಪಿ | ಹಿರಿಯ ಸಾಹಿತಿ ಎ.ಎಸ್.ಎನ್. ಹೆಬ್ಬಾರ್ ಅವರಿಗೆ ಸೂಕ್ತ ರಕ್ಷಣೆ ನೀಡಲು ಜಿಲ್ಲಾಧಿಕಾರಿಗೆ ಮನವಿ

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪಕ ಅಧ್ಯಕ್ಷರು, ಹಿರಿಯ ವಕೀಲರು...

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...