ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಬೆಂಡವಾಡ ಗ್ರಾಮದಲ್ಲಿ 5 ತಿಂಗಳ ಗರ್ಭಿಣಿ ಮಹಿಳೆಯೊಬ್ಬಳು
ಅನುಮಾನಸ್ಪದವಾಗಿ ಮೃತಪಟ್ಟಿರುವ ಘಟನೆ ನಡೆದಿದ್ದು, ಮಗಳನ್ನು ಗಂಡನ ಮನೆಯವರು ಕೊಲೆ ಮಾಡಿದ್ದಾರೆ ಎಂದು ಮೃತ ಮಹಿಳೆಯ ತವರು ಕುಟುಂಬಸ್ಥರು ಆರೋಪಿಸಿದ್ದಾರೆ.
ಬೆಂಡವಾಡ ಗ್ರಾಮದ ಲಲಿತಾ ಸದಾನಂದ ಕರಜಗಿ ಮೃತ ಗರ್ಭಿಣಿ ಮಹಿಳೆಯಾಗಿದ್ದು, ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿದ್ದರು. ಘಟನಾನಂತರ ಲಲಿತಾಳ ಪತಿ ಹಾಗೂ ಕುಟುಂಬಸ್ಥರು ಪರಾರಿಯಾಗಿದ್ದು ಅನುಮಾನಕ್ಕೆ ಕಾರಣವಾಗಿದೆ.
ಘಟನಾ ಸ್ಥಳಕ್ಕೆ ರಾಯಬಾಗ ಪೋಲಿಸರು ಭೇಟಿ ಪರಿಶೀಲನೆ ನಡೆಸಿದ್ದು, ಈ ಕುರಿತು ರಾಯಬಾಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.