ಅಪಾರ್ಟ್ಮೆಂಟ್ ಒಂದನ್ನು ಬಾಡಿಗೆಗೆ ಪಡೆದು ವೇಶ್ಯಾವಾಟಿಕೆ ನಡೆಸುತ್ತಿದ್ದ ಇಬ್ಬರು ಮಹಿಳೆಯರು ಸೇರಿದಂತೆ ಮೂವರನ್ನು ಬೆಳಗಾವಿಯ ತಿಳಕವಾಡಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತರು ಜಿಲ್ಲೆಯ ಹಿಂದವಾಡಿ ಹನುಮಾನ್ ನಗರದಲ್ಲಿ ರಾಹುಲ್ ಸುಳೇಭಾವಿ ಎಂಬುವವರ ಅಪಾರ್ಟ್ಮೆಂಟ್‌ನ್ನು ಬಾಡಿಗೆಗೆ ಪಡೆದು ಮಹಿಳೆಯರನ್ನ ಬಳಸಿಕೊಂಡು ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದರು ಎನ್ನಲಾಗಿದೆ.
ಅಪಾರ್ಟ್ಮೆಂಟ್‌ನಲ್ಲಿದ್ದ ಸಂತ್ರಸ್ತ ಮಹಿಳೆಯರನ್ನು ರಕ್ಷಿಸಲಾಗಿದ್ದು, ತಿಳಕವಾಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಬೆಳಗಾವಿ | ಜಮೀನು ವಿವಾದ: ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ಆರೋಪ
