ಬೆಳಗಾವಿ | ಅಪ್ರಾಪ್ತೆಯ ಮೇಲೆ ಅತ್ಯಾಚಾರ: ಆರೋಪಿಗೆ 20 ವರ್ಷ ಜೈಲು ಶಿಕ್ಷೆ

Date:

ಬೆಳಗಾವಿ ಜಿಲ್ಲೆಯ ಚನ್ನಮ್ಮನ ಕಿತ್ತೂರು ತಾಲೂಕಿನ ಅಪ್ರಾಪ್ತ ಬಾಲಕಿಯನ್ನು ಪ್ರೀತಿಸುತ್ತೇನೆ ಎಂದು ನಂಬಿಸಿ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದ ಅಪರಾಧಿಗೆ ವಿಶೇಷ ಶೀಘ್ರಗತಿ ಪೋಕ್ಸೊ ನ್ಯಾಯಾಲಯವು 20 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ 10 ಸಾವಿರ ದಂಡ ವಿಧಿಸಿ ಆದೇಶಿಸಿದೆ.

- Advertisement -

ಗಂಗಪ್ಪ ಕಲ್ಲಪ್ಪ ಕೋಲಕಾರ ತಿಗಡೊಳ್ಳಿ ಗ್ರಾಮದ ಆರೋಪಿಯಾಗಿದ್ದು, ಬಾಲಕಿಯನ್ನು ಪುಸಲಾಯಿಸಿ, ಪ್ರೀತಿಸುತ್ತೆನೆ ಎಂದು ನಂಬಿಸಿದ್ದನಲ್ಲದೆ, 2017ರ ಸೆಪ್ಟೆಂಬರ್‌ನಲ್ಲಿ ಬೈಕ್‌ ಮೇಲೆ ಅಪಹರಿಸಿಕೊಂಡು ಮಹಾರಾಷ್ಟ್ರದ ತಾಸಗಾಂವ ಎಂಬಲ್ಲಿ ಕಟ್ಟಡವೊಂದರಲ್ಲಿ ಇರಿಸಿದ್ದ. ಅಲ್ಲಿಯೇ ಪದೇಪದೇ ಅತ್ಯಾಚಾರ ಎಸಗಿದ್ದನು ಎಂದು ಹೇಳಲಾಗಿದೆ. ವಿಷಯ ತಿಳಿದ ನಂತರ ಬಾಲಕಿಯ ತಂದೆ ನೀಡಿದ ದೂರಿನ ಮೇರೆಗೆ ತನಿಖಾಧಿಕಾರಿ ರಾಘವೇಂದ್ರ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...

AI ಕ್ರಾಂತಿಯ ಕರಾಳ ಮುಖ: ಯುವಜನರ ಆಲೋಚನಾ, ಚಿಂತನಾ...

ಕೃತಕ ಬುದ್ಧಿಮತ್ತೆಯ (ಎಐ) ಸಿದ್ಧ ಉತ್ತರವೇ ಇಂದಿನ ಯುವಜನರಿಗೆ ತೃಪ್ತ. ಇದರಿಂದಾಗಿ ಆಳವಾದ ಅಧ್ಯಯನಕ್ಕೆ ಬಿದ್ದಿದೆ ಕತ್ತರಿ. ತಂತ್ರಜ್ಞಾನದಿಂದ ನಮಗೆ ಹಲವು ಅನುಕೂಲವಿದೆ ಎಂಬುದು ಸ್ಫುಟ. ಆದರೆ ಅನುಕೂಲವನ್ನು ಸ್ವೀಕರಿಸುವ ಜತೆಗೆ, ಅದರಿಂದಾಗುವ...

ಇದನ್ನು ಓದಿದ್ದೀರಾ? ಬೆಳಗಾವಿ | ಮುಂದಿನ ಮುಖ್ಯಮಂತ್ರಿ ಸತೀಶ್ ಜಾರಕಿಹೊಳಿ: ವಾಲ್ಮೀಕಿ ಸಮ್ಮೇಳನದಲ್ಲಿ ನಿರ್ಣಯ

ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ವಿಚಾರಣೆ ನಡೆಸಿದ ನಂತರ ವಿಶೇಷ ಶೀಘ್ರಗತಿ ಪೋಕ್ಸೊ ನ್ಯಾಯಾಲಯದ ನ್ಯಾಯಾಧೀಶೆ ಸಿ.ಎಂ. ಪುಷ್ಪಲತಾ ತೀರ್ಪು ನೀಡಿದ್ದು ಅಪರಾಧಿಗೆ 20 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ 10 ಸಾವಿರ ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಬಾಲಕಿಗೆ ಕಾನೂನು ಸೇವಾ ಪ್ರಾಧಿಕಾರದಿಂದ ₹1 ಲಕ್ಷ ಪರಿಹಾರ ನೀಡುವಂತೆಯೂ ಆದೇಶಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಸಮಾಜದ ಅಭಿವೃದ್ಧಿಯಲ್ಲಿ ಎಂಜಿನಿಯರ್‌ ಪಾತ್ರ ಮಹತ್ವದ್ದು: ರಾಕೇಶ್ ಗೋಪಾಲ್ ಜೋಶಿ

ಸಮಾಜದ ಅಭಿವೃದ್ಧಿ, ದೇಶದ ಪ್ರಗತಿಯಲ್ಲಿ ಎಂಜಿನಿಯರ್‌ಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು...

ಉಳ್ಳಾಲ | ಅಪಘಾತ: ಮಗನ ಸಾವಿನ ದುಃಖದಲ್ಲೂ ಅಂಗಾಂಗ ದಾನ ಮಾಡಿ ಮಾನವೀಯತೆ ಮೆರೆದ ವರ್ಷಿತ್ ಕುಟುಂಬ

ಉಳ್ಳಾಲ ತಾಲೂಕಿನ ಕುತ್ತಾರು ಕೊರಗಜ್ಜ ಕಟ್ಟೆಯ ಬಳಿ ಸೋಮವಾರ ರಾತ್ರಿ ದ್ವಿಚಕ್ರ...

ಕಲಬುರಗಿ | ಪಿಎಸ್‌ಐ ಕಾರಿಗೆ ಬೆಂಕಿ ಹಚ್ಚಿ ಪರಾರಿಯಾದ ಪೊಲೀಸ್ ಪೇದೆ

ಖಾಕಿ ಧರಿಸಿ ರಕ್ಷಣೆ ಮಾಡಬೇಕಾದವರೇ ಅಪರಾಧ ಕೃತ್ಯಕ್ಕೆ ಇಳಿದಿರುವ ಘಟನೆ...

ಉಡುಪಿ | ಮಲ್ಪೆ ಬಂದರಿನ ಸರ್ವಾಂಗೀಣ ಅಭಿವೃದ್ಧಿಗೆ ಮೊದಲ ಆದ್ಯತೆ : ಸಚಿವ ಬಸವಂತಪ್ಪ

ಸರ್ವಋತು ಮಲ್ಪೆ ಮೀನುಗಾರಿಕಾ ಬಂದರಿನ ಸರ್ವಾಂಗೀಣ ಅಭಿವೃದ್ಧಿ ಹಾಗೂ ಆಧುನೀಕರಣಕ್ಕೆ ಮೊದಲ...