ಬೆಳಗಾವಿ | ಕರ್ನಲ್ ಸೋಫಿಯಾ ಕುಟುಂಬದ ಮನೆ ಮೇಲೆ ಆರ್‌ಎಸ್‌ಎಸ್‌ ದಾಳಿ ವದಂತಿ; ಎಸ್‌ಪಿ ಸ್ಪಷ್ಟನೆ

Date:

ಪಹಲ್ಗಾಮ್ ಭಯೋತ್ಪಾದನಾ ದಾಳಿಗೆ ಪ್ರತಿಕಾರವಾಗಿ ಭಾರತೀಯ ಸೇನೆ ನಡೆಸಿದ ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆ ಬಗ್ಗೆ ದೇಶದ ಜನರಿಗೆ ಮಾಹಿತಿ ನೀಡಿದವರಲ್ಲಿ ಕರ್ನಲ್ ಸೋಫಿಯಾ ಖುರೇಶಿ ಕೂಡ ಒಬ್ಬರು. ಅವರನ್ನು ಮಧ್ಯಪ್ರದೇಶ ಬಿಜೆಪಿ ಸರ್ಕಾರದ ಸಚಿವ ವಿಜಯ್ ಶಾ ಅವರು ಉಗ್ರರ ಸಹೋದರಿ ಎಂದು ಹೇಳಿ, ಆಕ್ರೋಶಕ್ಕೆ ಗುರಿಯಾಗಿದ್ದಾರೆ. ಈ ನಡುವೆ, ಸೋಫಿಯಾ ಅವರ ಪತಿಯ ತವರೂರು ಬೆಳಗಾವಿ ಜಿಲ್ಲೆಯ ಕೊಣ್ಣೂರು ಗ್ರಾಮದಲ್ಲಿರುವ ಅವರ ಮನೆ ಮನೆಯ ಮೇಲೆ ಆರ್‌ಎಸ್‌ಎಸ್‌ ಮುಖಂಡರು, ಕಾರ್ಯಕರ್ತರು ದಾಳಿ ನಡೆಸಿದ್ದಾರೆ ಎಂಬ ವದಂತಿ ಹಬ್ಬಿದೆ. ಈ ಬಗ್ಗೆ ಬೆಳಗಾವಿ ಪೊಲೀಸ್‌ ವರಿಷ್ಠಾಧಿಕಾರಿ ಭೀಮಾಶಂಕರ್ ಗುಳೇದ್ ಸ್ಪಷ್ಟನೆ ನೀಡಿದ್ದಾರೆ ವದಂತಿಯಲ್ಲಿ ತಳ್ಳಿಹಾಕಿದ್ದಾರೆ.

- Advertisement -

ಸೋಫಿಯಾ ಅವರು ಪತಿ ಕೂಡ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಅವರ ಕುಟುಂಬಸ್ಥರು ಬೆಳಗಾವಿಯ ಕೊಣ್ಣೂರು ಗ್ರಾಮದಲ್ಲಿ ನೆಲೆಸಿದ್ದಾರೆ. ಅವರ ಮನೆಯ ಮೇಲೆ ಆರ್‌ಎಸ್‌ಎಸ್‌ ದಾಳಿ ನಡೆಸಿದೆ ಎಂಬ ಪೋಸ್ಟ್‌ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಈ ವರದಿ ಓದಿದ್ದೀರಾ?:ಉಗ್ರರಿಗೆ ಪಾಠ ಕಲಿಸಲು ಅವರ ಸಹೋದರಿಯನ್ನೇ ಕಳುಹಿಸಿದ್ದೆವು: ಸಚಿವ ವಿಜಯ್ ಶಾ ವಿವಾದಾತ್ಮಕ ಹೇಳಿಕೆ

ಅನೀಸ್ ಉದ್ದೀನ್ ಎಂಬಾತ ತನ್ನ ಎಕ್ಸ್‌ ಖಾತೆಯಲ್ಲಿ ಈ ಬಗ್ಗೆ ಪೋಸ್ಟ್‌ ಹಂಚಿಕೊಂಡಿದ್ದರು. ಈ ಬೆನ್ನಲ್ಲೇ, ಪೋಸ್ಟ್‌ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಹಲವಾರು ನೆಟ್ಟಿಗರು ಆ ಪೋಸ್ಟ್‌ ಸತ್ಯವೆಂದು ನಂಬಿ, ಹಲವರು ಆರ್‌ಎಸ್‌ಎಸ್‌ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವೈರಲ್ ಆದ ಪೋಸ್ಟ್‌ ಬಗ್ಗೆ ಸ್ಪಷ್ಟನೆ ನೀಡಿರುವ ಎಸ್‌ಪಿ ಭೀಮಾಶಂಕರ್‌ ಗುಳೇದ್‌, “ಕರ್ನಲ್​ ಸೋಫಿಯಾ ಖುರೇಶಿ ಅವರ ಕುಟುಂಬಸ್ಥರ ಮನೆ ಮೇಲೆ ಆರ್‌ಎಸ್‌ಎಸ್‌ ದಾಳಿ ನಡೆಸಿದೆ ಎಂಬುದು ಸಂಪೂರ್ಣ ಸುಳ್ಳು. ಇಂತಹ ಸುಳ್ಳು, ವದಂತಿಗಳಿಗೆ ಸಾರ್ವಜನಿಕರು ಕಿವಿಗೊಡಬಾರದು” ಎಂದು ತಿಳಿಸಿದ್ದಾರೆ. ಅಲ್ಲದೆ, ಸೋಫಿಯಾ ಅವರ ಮಾವ ಗೌಸಸಾಬ್ ಬಾಗೇವಾಡಿ ಅವರ ಮನೆಗೆ ಭದ್ರತೆ ನೀಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಸಾರಿಗೆ ಬಸ್ ಟಾಯರ್ ಸ್ಪೋಟ ಪರಿಣಾಮ ಕಂಡಕ್ಟರ್ ಕಾಲಿಗೆ ಗಾಯ

ಲಕ್ಷ್ಮೇಶ್ವರ ಮಾರ್ಗದಲ್ಲಿ ಸಂಚರಿಸುತ್ತಿದ್ದ ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ (ಸಂಖ್ಯೆ:...

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...