ಬೆಳಗಾವಿ ರಾಜ್ಯದಲ್ಲೇ ದೊಡ್ಡ ಜಿಲ್ಲೆಯಾಗಿದ್ದು ಆಡಳಿತಾತ್ಮಕ ದೃಷ್ಟಿಯಿಂದ ವಿಭಜನೆಗೊಳಿಸಿ ಮೂರು ಜಿಲ್ಲೆಯನ್ನಾಗಿಸಬೇಕಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಅಭಿಮತ ವ್ಯಕ್ತಪಡಿಸಿದ್ದಾರೆ.
ಬೆಳಗಾವಿ, ಚಿಕ್ಕೋಡಿ ಮತ್ತು ಗೋಕಾಕನ್ನು ಜಿಲ್ಲೆಗಳನ್ನಾಗಿ ಘೋಷಿಸಬೇಕಿದೆ. ಜಿಲ್ಲಾ ವಿಭಜನೆ ಘೋಷಣೆಯನ್ನು ಯಾವ ಸಂದರ್ಭದಲ್ಲಾದರೂ ಮಾಡಬಹುದು ಎಂದೂ ಅವರು ತಿಳಿಸಿದ್ದಾರೆ.
ಜಿಲ್ಲಾ ವಿಭಜನೆ ಘೋಷಣೆಯಾದರೂ ಪೂರ್ಣಪ್ರಮಾಣದಲ್ಲಿ ಜಾರಿಯಾಗಬೇಕಾದರೆ ಐದು ವರ್ಷಗಳ ಅವಧಿ ಬೇಕಾಗುತ್ತದೆ. ಜಿಲ್ಲೆಯನ್ನು ವಿಭಜಿಸಿ, ಮೂರು ಜಿಲ್ಲೆಯನ್ನಾಗಿ ಮಾಡುವುದರಿಂದ ಯಾವುದೇ ಸಮಸ್ಯೆ ಇಲ್ಲ ಬದಲಾಗಿ ಆಡಳಿತ ಸುವ್ಯವಸ್ಥೆಗೆ ಅನುಕೂಲವಾಗುತ್ತದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ಬೆಳಗಾವಿ |ಆರ್ ಸಿಬಿ ವಿಜಯೋತ್ಸವದ ವೇಳೆ ಕಾಲ್ತುಳಿತ : ಕಂಬನಿ ಮಿಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್