ಬೆಳಗಾವಿ | ಸೋಲಿಡಾರಿಟಿ ಪ್ರಕಟಿಸಿರುವ ‘ವಕ್ಫ್: ಅಪಪ್ರಚಾರ ಮತ್ತು ವಾಸ್ತವ’ ಪುಸ್ತಕ ಬಿಡುಗಡೆ

Date:

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕದ ವತಿಯಿಂದ ಲೇಖನಗಳ ಸಂಕಲನವಾಗಿ ರಚಿಸಲಾದ ‘ವಕ್ಫ್: ಅಪಪ್ರಚಾರ ಮತ್ತು ವಾಸ್ತವ’ ಪುಸ್ತಕವನ್ನು ಇಂದು ಬಿಡುಗಡೆಗೊಳಿಸಲಾಯಿತು.

- Advertisement -

ಈ ಪುಸ್ತಕವನ್ನು ವಸತಿ, ಅಲ್ಪಸಂಖ್ಯಾತರ ಹಾಗೂ ವಕ್ಫ್ ಸಚಿವರಾದ ಜಮೀರ್ ಅಹ್ಮದ್, ವಿಧಾನ ಪರಿಷತ್ ಸದಸ್ಯರು ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ನಸೀರ್ ಅಹ್ಮದ್ ಮತ್ತು ಬೆಳಗಾವಿ ಉತ್ತರ ಕ್ಷೇತ್ರದ ಶಾಸಕರಾದ ಆಸಿಫ್ ಸೇಠ್ ಅವರು ಬಿಡುಗಡೆಗೊಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

ವಕ್ಫ್ ವಿಷಯಕ್ಕೆ ಸಂಬಂಧಿಸಿ ಸಮಾಜದಲ್ಲಿ ವ್ಯಾಪಕವಾಗಿ ಹರಡಿರುವ ತಪ್ಪು ಕಲ್ಪನೆಗಳನ್ನು ದೂರಗೊಳಿಸುವ ಉದ್ದೇಶದಿಂದ ಈ ಪುಸ್ತಕವನ್ನು ರಚಿಸಲಾಗಿದೆ. ಇಂತಹ ಜಾಗೃತಿಪೂರ್ಣ ಹಾಗೂ ಸಂಶೋಧನಾತ್ಮಕ ಪ್ರಯತ್ನಗಳು ಅತ್ಯಂತ ಸ್ವಾಗತಾರ್ಹವಾಗಿದ್ದು, ಸಮಾಜದಲ್ಲಿ ಸರಿಯಾದ ಅರಿವು ಮೂಡಿಸಲು ಸಹಕಾರಿಯಾಗುತ್ತವೆ ಎಂದು ಸಚಿವ ಜಮೀರ್ ಅಹ್ಮದ್ ಅಭಿಪ್ರಾಯಪಟ್ಟರು.

ಸೋಲಿಡಾರಿಟಿ ಯೂತ್ ಮೂವ್ಮೆಂಟ್‌ನಂತಹ ಸಂಘಟನೆಗಳು ಈ ರೀತಿಯ ರಚನಾತ್ಮಕ ಕಾರ್ಯಗಳಲ್ಲಿ ತೊಡಗಿಕೊಳ್ಳುವುದರಿಂದ ಸಮಾಜದಲ್ಲಿ ಶಾಂತಿ ಮತ್ತು ಸೌಹಾರ್ದತೆ ಸ್ಥಾಪನೆಗೊಳ್ಳಲು ಸಹಕಾರಿಯಾಗುತ್ತದೆ ಎಂದು ನಸೀರ್ ಅಹ್ಮದ್ ತಿಳಿಸಿದರು.

ಇದನ್ನು ಓದಿದ್ದೀರಾ? ʼಈ ದಿನ ಸರಣಿʼ ಭಾಗ-1 | ಮಂಡ್ಯದ ಕಾಳಿಕಾಂಬ ಕೊಳಗೇರಿಯ ಕೋರ್ಟ್‌ ತೀರ್ಪು ಮೀರಿದ ಬಲಾಢ್ಯರು: ನ್ಯಾ. ಎಂ. ನಾಗಪ್ರಸನ್ನ ಕಳವಳ

ಈ ವೇಳೆ ಸೋಲಿಡಾರಿಟಿ ಯೂತ್ ಮೂವ್ಮೆಂಟ್ ರಾಜ್ಯಾಧ್ಯಕ್ಷರಾದ ಡಾ. ನಸೀಮ್ ಅಹ್ಮದ್ ಅವರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯ ಸಂಪುಟದಲ್ಲಿ ಮಹಿಳಾ ಪ್ರಾತಿನಿಧ್ಯದ ಚರ್ಚೆ: ಅನ್ನಪೂರ್ಣ ಹೆಸರು ಮುನ್ನೆಲೆಗೆ!

ರಾಜ್ಯ ಸಚಿವ ಸಂಪುಟದಲ್ಲಿ ಸದ್ಯ ಎರಡು ಸಚಿವ ಸ್ಥಾನಗಳು ಖಾಲಿ ಉಳಿದಿದ್ದು,...

ಕೊಡಗಿನಲ್ಲಿ ಮಳೆ ಕೊರತೆ; ಭತ್ತಕ್ಕೆ ಬೆಂಕಿ ರೋಗ-ಕೀಟ ಬಾಧೆ

ಕೊಡಗು ಎಂದರೆ ಕಾಫಿ ತೋಟಗಳು, ಮೆಣಸಿನ ಬಳ್ಳಿ, ಶುಂಠಿ ಹಾಗೂ ಭತ್ತದ...

ಚಿಕ್ಕಮಗಳೂರು | ಬೇಟೆ ವೇಳೆ ಆಕಸ್ಮಿಕವಾಗಿ ಗುಂಡು ತಗುಲಿ ಯುವಕ ಸಾವು

ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲ್ಲೂಕಿನ ಹಿರೇಗದ್ದೆ ಗ್ರಾಮದಲ್ಲಿ ಗುರುವಾರ ರಾತ್ರಿ ಬೇಟೆಯಾಡುತ್ತಿದ್ದ...

ಚೈತ್ರಾ ಗೋಶಾಲೆಗೆ ರೈತ ಸಂಘ ಮುತ್ತಿಗೆ; 7 ಹಸು-ಕರುಗಳ ಬಿಡುಗಡೆ

ನ್ಯಾಯಾಲಯದ ಆದೇಶವಿದ್ದರೂ ರೈತರಿಗೆ ಹಸುಗಳನ್ನು ಹಸ್ತಾಂತರಿಸದೆ ವಿಳಂಬ ಮಾಡಲಾಗುತ್ತಿದೆ ಎಂದು ಆರೋಪಿಸಿ,...