ಒಳಮೀಸಲಾತಿ ಜಾರಿಗೆ ತರಲು ರಾಜ್ಯ ಸರ್ಕಾರ ಮೀನಮೇಷ ಎಣಿಸುತ್ತಿರುವುದು ದುರ್ದೈವದ ವಿಚಾರ ಎಂದು ದಲಿತ ಸಂಘರ್ಷ ಸಮಿತಿಯ ಮುಖಂಡ ಚಂದ್ರಕಾಂತ ಕಾದ್ರೋಳ್ಳಿ ಆಕ್ರೋಶ ವ್ಯಕ್ತಪಡಿಸಿದರು.
ಬೆಳಗಾವಿ ನಗರದ ಸರ್ಕ್ಯೂಟ್ ಹೌಸ್‌ನಲ್ಲಿ ದಲಿತ ಸಂಘರ್ಷ ಸಮಿತಿ ಸಭೆ ನಡೆಯಿತು. ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಒಳಮೀಸಲಾತಿಯ ಬಗ್ಗೆ ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಆದರೂ ರಾಜ್ಯ ಸರ್ಕಾರ ಜಾರಿಗೆ ತರಲು ಮೀನಮೇಷ ಎಣಿಸುತ್ತಿರುವದು ದುರ್ದೈವದ ಸಂಗತಿಯಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಒಳಮೀಸಲಾತಿ ಜಾರಿ ಮಾಡಲು ಇನ್ನೂ ವಿಳಂಬ ಧೋರಣೆ ಹೀಗೆ ಮುಂದುವರಿಸಿದರೆ ಒಳಮೀಸಲಾತಿಗಾಗಿ ಹೋರಾಟಗಳು ಅನಿವಾರ್ಯವಾಗುತ್ತವೆ ಎಂದು ಗುಡುಗಿದರು.
ಸಭೆಯಲ್ಲಿ ಮಾದಿಗ ಸಮುದಾಯದ ವಾಸಸ್ಥಾನಗಳಲ್ಲಿ ವಾಸ್ತವ್ಯ ಮಾಡಿ ಸಮಸ್ಯೆಗಳನ್ನು ಆಲಿಸಿ ಪರಿಹಾರ ಕಂಡುಕೊಳ್ಳುವದು ಹಾಗೂ ಒಳ ಮೀಸಲಾಯಿತಿಯ ಹೋರಾಟ ಮಾಡುವುದು. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪದಾಧಿಕಾರಿಗಳನ್ನು ಆಯ್ಕೆ ಮಾಡುವ ಕುರಿತು ನಿರ್ಣಯ ಕೈಗೊಂಡರು. ಬೈಲಹೊಂಗಲ ತಾಲೂಕಿನ ತಾಲೂಕಾಧ್ಯಕ್ಷರನ್ನಾಗಿ ಸುಧಾಕರ ಡೊಂಕನ್ನವರ ಆಯ್ಕೆಯಾದರು.
ಇದನ್ನು ಓದಿದ್ದೀರಾ? ದಾವಣಗೆರೆ | ಗಣೇಶ ವಿಸರ್ಜನೆಯ ವೇಳೆ ಕಲ್ಲು ತೂರಾಟ: 30 ಮಂದಿ ಆರೋಪಿಗಳ ಬಂಧನ, ಪರಿಸ್ಥಿತಿ ಶಾಂತ
ಈ ಸಂದರ್ಭದಲ್ಲಿ ದಲಿತ ಸಂಘರ್ಷ ಸಮಿತಿ ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.