ವೈದ್ಯಕೀಯ ವಿದ್ಯಾರ್ಥಿನಿಯ ಮೇಲೆ ಆಕೆಯ ಸಹಪಾಠಿಗಳೇ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ನಡೆದಿದೆ.
ಬೆಳಗಾವಿ ಮೂಲದ ಯುವತಿ ಸಾಂಗ್ಲಿಯ ವೈದ್ಯಕೀಯ ಕಾಲೇಜಿನಲ್ಲಿ 3ನೇ ವರ್ಷದ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದರು. ಆಕೆಯ ಮೇಲೆ ಇಬ್ಬರು ಸಹಪಾಠಿಗಳು ಮತ್ತು ಅವರ ಇಬ್ಬರು ಸ್ನೇಹಿತರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಆರೋಪಿಗಳನ್ನು ಮೂವರನ್ನು ಪೊಲೀಸರು ಬಂಧಿಸಿದ್ದಾರೆ.
ಯುವತಿಯನ್ನು ಆಕೆಯ ಸ್ನೇಹಿತರು ಸಿನಿಮಾ ನೋಡಲೆಂದು ಚಿತ್ರಮಂದಿರಕ್ಕೆ ಕರೆದೊಯ್ದಿದ್ದರು. ಅಲ್ಲಿಂದ, ತಮ್ಮ ಮನೆಗೆ ಕರೆದೊಯ್ದ ಸ್ನೇಹಿತರು, ಆಕೆಗೆ ಮತ್ತು ಬರುವ ಔಷಧಿ ಕೊಟ್ಟು, ಪ್ರಜ್ಞೆ ತಪ್ಪಿಸಿ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.
ಆರೋಪಿಗಳು ಪುಣೆ, ಸೋಲಾಪುರ ಹಾಗೂ ಸಾಂಗ್ಲಿ ಮೂಲದವರು ಎಂದು ಹೇಳಾಗಿದೆ. ಆರೋಪಿಗಳನ್ನು ನ್ಯಾಯಾಲಯವು ಮೇ 27ರವರೆಗೆ ಪೊಲೀಸ್ ಕಸ್ಟಡಿಗೆ ನೀಡಿದೆ.
ಈ ಲೇಖನ ಓದಿದ್ದೀರಾ?: ಪಹಲ್ಗಾಮ್ ದಾಳಿಗೆ ಒಂದು ತಿಂಗಳು; ಸಿಂಧೂರ ಅಳಿಸಿದ ಹಂತಕರನ್ನು ಹಿಡಿದರೇ ಮೋದಿ?
ಆರೋಪಿಗಳು ಮದ್ಯದಲ್ಲಿ ಅಮಲಿನ ಔಷಧ ಬೆರೆಸಿ, ಆಕೆಗೆ ಕುಡಿಸಿದ್ದಾರೆ. ಆಕೆ ಪ್ರಜ್ಞಾಹೀನಳಾದ ಬಳಿಕ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ. ಮಾರನೆಯ ದಿನ, ಯುವತಿಗೆ ಪ್ರಜ್ಞೆ ಬಂದ ಬಳಿಕ ತನ್ನ ಮೇಲೆ ಅತ್ಯಾಚಾರ ನಡೆದಿರುವುದು ಆಕೆಗೆ ಗೊತ್ತಾಗಿದೆ. ಬಳಿಕ, ತನ್ನ ಮೇಲಾದ ದೌರ್ಜನ್ಯದ ಬಗ್ಗೆ ಪೋಷಕರ ಬಳಿ ಹೇಳಿಕೊಂಡಿದ್ದಾರೆ ಎಂದು ವರದಿಯಾಗಿದೆ.
ಪೋಷಕರು ಪೊಲೀಸ್ ಠಾಣೆಯನ್ನು ಸಂಪರ್ಕಿಸಿ ದೂರು ದಾಖಲಿಸಿದ್ದಾರೆ. ಅವರ ದೂರಿನ ಆಧಾರದ ಮೇಲೆ ವಿಶ್ರಂಬಾಗ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.