ಬೆಳಗಾವಿಯ ವಿದ್ಯಾರ್ಥಿನಿ ಮೇಲೆ ಸಹಪಾಠಿಗಳಿಂದಲೇ ಸಾಮೂಹಿಕ ಅತ್ಯಾಚಾರ; ಮೂವರು ಕಾಮುಕರ ಬಂಧನ

Date:

ವೈದ್ಯಕೀಯ ವಿದ್ಯಾರ್ಥಿನಿಯ ಮೇಲೆ ಆಕೆಯ ಸಹಪಾಠಿಗಳೇ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ನಡೆದಿದೆ.

- Advertisement -

ಬೆಳಗಾವಿ ಮೂಲದ ಯುವತಿ ಸಾಂಗ್ಲಿಯ ವೈದ್ಯಕೀಯ ಕಾಲೇಜಿನಲ್ಲಿ 3ನೇ ವರ್ಷದ ಎಂಬಿಬಿಎಸ್‌ ವ್ಯಾಸಂಗ ಮಾಡುತ್ತಿದ್ದರು. ಆಕೆಯ ಮೇಲೆ ಇಬ್ಬರು ಸಹಪಾಠಿಗಳು ಮತ್ತು ಅವರ ಇಬ್ಬರು ಸ್ನೇಹಿತರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಆರೋಪಿಗಳನ್ನು ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಯುವತಿಯನ್ನು ಆಕೆಯ ಸ್ನೇಹಿತರು ಸಿನಿಮಾ ನೋಡಲೆಂದು ಚಿತ್ರಮಂದಿರಕ್ಕೆ ಕರೆದೊಯ್ದಿದ್ದರು. ಅಲ್ಲಿಂದ, ತಮ್ಮ ಮನೆಗೆ ಕರೆದೊಯ್ದ ಸ್ನೇಹಿತರು, ಆಕೆಗೆ ಮತ್ತು ಬರುವ ಔಷಧಿ ಕೊಟ್ಟು, ಪ್ರಜ್ಞೆ ತಪ್ಪಿಸಿ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.

ಆರೋಪಿಗಳು ಪುಣೆ, ಸೋಲಾಪುರ ಹಾಗೂ ಸಾಂಗ್ಲಿ ಮೂಲದವರು ಎಂದು ಹೇಳಾಗಿದೆ. ಆರೋಪಿಗಳನ್ನು ನ್ಯಾಯಾಲಯವು ಮೇ 27ರವರೆಗೆ ಪೊಲೀಸ್‌ ಕಸ್ಟಡಿಗೆ ನೀಡಿದೆ.

ಈ ಲೇಖನ ಓದಿದ್ದೀರಾ?: ಪಹಲ್ಗಾಮ್‌ ದಾಳಿಗೆ ಒಂದು ತಿಂಗಳು; ಸಿಂಧೂರ ಅಳಿಸಿದ ಹಂತಕರನ್ನು ಹಿಡಿದರೇ ಮೋದಿ?

ಆರೋಪಿಗಳು ಮದ್ಯದಲ್ಲಿ ಅಮಲಿನ ಔಷಧ ಬೆರೆಸಿ, ಆಕೆಗೆ ಕುಡಿಸಿದ್ದಾರೆ. ಆಕೆ ಪ್ರಜ್ಞಾಹೀನಳಾದ ಬಳಿಕ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ. ಮಾರನೆಯ ದಿನ, ಯುವತಿಗೆ ಪ್ರಜ್ಞೆ ಬಂದ ಬಳಿಕ ತನ್ನ ಮೇಲೆ ಅತ್ಯಾಚಾರ ನಡೆದಿರುವುದು ಆಕೆಗೆ ಗೊತ್ತಾಗಿದೆ. ಬಳಿಕ, ತನ್ನ ಮೇಲಾದ ದೌರ್ಜನ್ಯದ ಬಗ್ಗೆ ಪೋಷಕರ ಬಳಿ ಹೇಳಿಕೊಂಡಿದ್ದಾರೆ ಎಂದು ವರದಿಯಾಗಿದೆ.

ಪೋಷಕರು ಪೊಲೀಸ್‌ ಠಾಣೆಯನ್ನು ಸಂಪರ್ಕಿಸಿ ದೂರು ದಾಖಲಿಸಿದ್ದಾರೆ. ಅವರ ದೂರಿನ ಆಧಾರದ ಮೇಲೆ ವಿಶ್ರಂಬಾಗ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತ: ಇಬ್ಬರು ಸಾವು, ಇಬ್ಬರಿಗೆ ಗಂಭೀರ ಗಾಯ

ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತಕ್ಕೀಡಾಗಿ ನಾಲ್ವರ ಪೈಕಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು,...

ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...