ಬೆಳಗಾವಿ ನಗರದ ಖಾಸಗಿ ಹೋಟೆಲ್‌ವೊಂದರಲ್ಲಿ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಅವರ ಸಹೋದರ ಡಿ.ಕೆ.ಸುರೇಶ್ ಪ್ರತ್ಯೇಕ ಸಭೆ ನಡೆಸಿದ್ದಾರೆ.
ಸಭೆಯಲ್ಲಿ ಮೂವರೂ ನಾಯಕರು ಚರ್ಚೆ ನಡೆಸಿದ ಬಳಿಕ ಒಂದೇ ವಾಹನದಲ್ಲಿ ಹೋಟೆಲ್‌ನಿಂದ ವಿಜಯಾ ಆಸ್ಪತ್ರೆಗೆ ತೆರಳಿ, ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆರೋಗ್ಯ ವಿಚಾರಿಸಿದರು.
ಇದಕ್ಕೂ ಮುನ್ನ ಸುರ್ಜೇವಾಲ ಸಚಿವ ಸತೀಶ ಜಾರಕಿಹೊಳಿ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದರು. ಹೀಗಾಗಿ, ಡಿ.ಕೆ.ಶಿವಕುಮಾರ ಜೊತೆಗೆ ನಡೆಸಿದ ಸಭೆಯು ಕುತೂಹಲಕ್ಕೆ ಉಂಟುಮಾಡಿದೆ.