ಎದುರಿಗೆ ಬರುತ್ತಿದ್ದ ವಾಹನ ಅಪಘಾತ ತಪ್ಪಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿ ಕಾಮಗಾರಿ ನಡೆಯುತ್ತಿದ್ದ ಪೈಪ್‌ಗೆ ಕಾರ್ ಒಂದು ಡಿಕ್ಕಿ ಹೊಡೆದ ಪರಿಣಾಮ ಬಾಲಕನೋರ್ವ ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಸಂಗೊಳ್ಳಿ ಗ್ರಾಮದ ಬಳಿ ನಡೆದಿದೆ.
ಗೋಕಾಕ್ ತಾಲೂಕಿನ ಹನುಮಾಪುರ ಗ್ರಾಮದ ರಮೇಶ ತೋಳಿನವರ (7) ಮೃತ ಬಾಲಕ. ಕುಟುಂಬಸ್ಥರು ಸಂಗೊಳ್ಳಿ ರಾಕ್ ಗಾರ್ಡ್‌ನ ವೀಕ್ಷಣೆ ಮಾಡಿ ಮರಳಿ ಊರಿಗೆ ತೆರಳುವಾಗ ಘಟನೆ ನಡೆದಿದೆ ಎನ್ನಲಾಗಿದೆ. ಅಪಘಾತದಿಂದ ಬಾಲಕ ಹೆದರಿ ಪ್ರಜ್ಞೆ ತಪ್ಪಿದ್ದರಿಂದ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೇ ಬಾಲಕ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.
ಈ ಸುದ್ದಿ ಓದಿದ್ದೀರಾ?: ಬೆಳಗಾವಿ | ಎರಡನೇ ಪತ್ನಿಗಾಗಿ ಮೊದಲ ಪತ್ನಿಯ ಕೊಲೆ; ಆರೋಪಿಗಳು ಪರಾರಿ
ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಚಿಕಿತ್ಸೆಗೆ ದಾಖಲಿಸಲು ಹೋದಾಗ ಆಸ್ಪತ್ರೆ ಸಿಬ್ಬಂದಿಗಳು ಬೇಜವಾಬ್ದಾರಿಯಿಂದ ವರ್ತಿಸಿ ಕಾಲಹರಣ ಮಾಡಿದ್ದರಿಂದಲೇ ಬಾಲಕ ಸಾವನ್ನಪ್ಪಿದ್ದಾನೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
