ಬೆಳಗಾವಿ | ಸುಳ್ಳು ಹೆಸರು ದಾಖಲಿಸಿ, ಶಿಶುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪರಾರಿಯಾದ ತಾಯಿ

Date:

ಹೆರಿಗೆಯಾದ 24 ಗಂಟೆಗಳ ಬಳಿಕ ಬಾಣಂತಿ ಹಾಗೂ ಅವರ ಅತ್ತೆ‌ ಜನಿಸಿದ ಶಿಶುವನ್ನು ಆಸ್ಪತ್ರೆಯಲ್ಲಿಯೇ ಬಿಟ್ಟು ಪರಾರಿಯಾದ ಘಟನೆ ಬೆಳಗಾವಿ ಜಿಲ್ಲಾ ಆಸ್ಪತ್ರೆಯಲ್ಲಿ ನಡೆದಿದೆ.

- Advertisement -

ಬೀಬಿಜಾನ್‌ ಸದ್ದಾಂ ಸಯ್ಯದ್ (28) ಎಂದು ಹೆಸರು ಬರೆಯಿಸಿದ್ದ ಮಹಿಳೆ ಪರಾರಿಯಾದ ಬಾಣಂತಿ ಎನ್ನಲಾಗಿದೆ. ಹೆಸರಿನ ಜೊತೆಗೆ ಊರು ಮತ್ತು ವಿಳಾಸ ತಪ್ಪಾಗಿ ನೀಡಿದ್ದು, ಪತ್ತೆ ಮಾಡಲು ಸಾಧ್ಯವಾಗಿಲ್ಲ ಎಂದು ಜಿಲ್ಲಾಸ್ಪತ್ರೆ ಮೂಲಗಳು ತಿಳಿಸಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಆರೂವರೆ ತಿಂಗಳ ಗರ್ಭಿಣಿಯಾಗಿದ್ದ ಬೀಬಿಜಾನ್ ಎಂಬ ಸುಳ್ಳು ಹೆಸರಿನ ಮಹಿಳೆ ಡಿ. 8ರಂದು ಕಾಲುಜಾರಿ ಬಿದ್ದಿದ್ದರು. ಬೈಲಹೊಂಗಲದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ, ನಂತರ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ಕರೆತರಲಾಗಿತ್ತು. ಅದೇ ದಿನ ರಾತ್ರಿ 9ಕ್ಕೆ ಹೆರಿಗೆಯಾಯಿದ್ದು, ಶಿಶು ಕೇವಲ 735 ಗ್ರಾಂ ತೂಕವಿದ್ದ ಕಾರಣ ಎನ್‌ಐಸಿಯು ಘಟಕದಲ್ಲಿ ದಾಖಲಿಸಿದ್ದರು. ಮಾರನೇ (ಡಿ.10) ದಿನ ಬಾಣಂತಿ ಹಾಗೂ ಅವರ ಅತ್ತೆ ಆಸ್ಪತ್ರೆಯಿಂದ ಪರಾರಿ ಆಗುತ್ತಾರೆ.

ಈ ವರದಿ ಓದಿದ್ದೀರಾ? ಧಾರವಾಡ | ನಾವೆಲ್ಲ ಒಂದೇ ಅನ್ನುವ ಭಾವದಿಂದ ದೇಶದ ಪ್ರಗತಿ ಸಾಧ್ಯ: ಈಶಪ್ಪ ಭೂತೆ

ನಂತರ ಚಿಕಿತ್ಸೆಗೆ ಸ್ಪಂದಿಸದ ಶಿಶು ಡಿ.10ರಂದು ಮೃತಪಟ್ಟಿತು ಎಂದು ಮೂಲಗಳು ತಿಳಿಸಿದ್ದು, ಈ ಬಗ್ಗೆ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಎಂಎಸ್‌ಪಿ ಬೆಲೆ ₹60 ಹೆಚ್ಚಿಸುವುದಾದರೆ ಮಾತ್ರ ದೆಹಲಿಗೆ: ಚೂನಪ್ಪ ಪೂಜೇರಿ

ಸಕ್ಕರೆಯ ಕನಿಷ್ಠ ಮಾರಾಟ ಬೆಲೆ (ಎಂಎಸ್‌ಪಿ) ಕೆ.ಜಿಗೆ ₹60ಕ್ಕೆ ಹೆಚ್ಚಿಸುವುದಾಗಿ ಕೇಂದ್ರ...

ಬೆಳಗಾವಿ | ಪತ್ನಿ ಮರಣದ ಸುದ್ದಿ ಕೇಳಿ ಪತಿಯೂ ಸಾವು

ಪತ್ನಿಯ ನಿಧನದ ಸುದ್ದಿ ಕೇಳಿ ತೀವ್ರ ಮನನೊಂದ ಪತಿಯೂ ಕೇವಲ ಒಂದೂವರೆ...

ಹವಾಮಾನ ವೈಪರೀತ್ಯ: ಮುನ್ನೆಚ್ಚರಿಕೆ ವಹಿಸಿ-ಸಚಿವ ಪಿ.ಎಂ. ನರೇಂದ್ರಸ್ವಾಮಿ

ಹವಾಮಾನ ವೈಪರೀತ್ಯದಿಂದ ಮುಂದಿನ ಎರಡು-ಮೂರು ತಿಂಗಳಲ್ಲಿ ಗಂಭೀರ ಪರಿಣಾಮಗಳನ್ನು ಎದುರಿಸಬೇಕಾಗಬಹುದು. ಜನರು...

ಮುಂಡಗೋಡ, ಶಿರಸಿಯಲ್ಲಿ ಗಾಂಜಾ ಸೇವನೆ ಆರೋಪ; ಇಬ್ಬರ ವಿರುದ್ಧ ಪ್ರಕರಣ ದಾಖಲು

ಉತ್ತರ ಕನ್ನಡ: ಜಿಲ್ಲೆಯ ಮುಂಡಗೋಡ ಹಾಗೂ ಶಿರಸಿ ಪಟ್ಟಣದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ...