ಬೆಳಗಾವಿ | ಎರಡನೇ ಪತ್ನಿಗಾಗಿ ಮೊದಲ ಪತ್ನಿಯ ಕೊಲೆ; ಆರೋಪಿಗಳು ಪರಾರಿ

Date:

ವ್ಯಕ್ತಿಯೊಬ್ಬ ತನ್ನ ಎರಡನೇ ಪತ್ನಿಯ ಮಾತು ಕೇಳಿ ಮೊದಲ ಪತ್ನಿಯನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಿ ಪರಾರಿಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಇಂಚಲ ಗ್ರಾಮದಲ್ಲಿ ನಡೆದಿದೆ.

- Advertisement -

ಇಂಚಲ ಗ್ರಾಮದ ಶಮಾ ಪಠಾಣ್(25) ಕೊಲೆಯಾದ ಮಹಿಳೆಯಾಗಿದ್ದು, ಆರೋಪಿತರನ್ನು ರಿಯಾಜ್ ಸಾಹೇಬ‌ ಖಾನ ಪಠಾಣ್ ಮತ್ತು ಫರ್ಜಾನಾ ರಿಯಾಜ್ ಪಠಾಣ್(28) ಎಂದು ಗುರುತಿಸಲಾಗಿದೆ. ಇಬ್ಬರು ಆರೋಪಿಗಳೂ ತಲೆಮರೆಸಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕತ್ತಲೆಯಿಂದ ಬೆಳಕಿನತ್ತ ಸೌಜನ್ಯ ಹೋರಾಟ: ಸುಪ್ರೀಂ ಆದೇಶದೊಂದಿಗೆ ಮೂಡಿದ...

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣವು ಕೇವಲ ಒಂದು ಕಾನೂನು ಪ್ರಕ್ರಿಯೆಯಾಗಿ ಉಳಿಯದೆ, ಸಾರ್ವಜನಿಕ ಜಾಗೃತಿ ಮತ್ತು ನ್ಯಾಯದ ಪರವಾದ ಗಟ್ಟಿಯಾದ ಧ್ವನಿಯಾಗಿ ಮಾರ್ಪಟ್ಟಿದೆ. ಸುಪ್ರೀಂ ಕೋರ್ಟ್‌ನ ಈ ಹೊಸ ಆದೇಶವು ಸೌಜನ್ಯ ಕುಟುಂಬಕ್ಕೆ...

ವಿಜಯಪುರ | ಮಳೆ ಕೊರತೆಯಿಂದ ಮೇವಿಗೂ ಬರ: ಜಾನುವಾರು...

ಹಸಿರು ಮೇವು ಕಡಿಮೆಯಾಗಿ, ಸಂಗ್ರಹಿತ ಒಣಮೇವು ಖಾಲಿಯಾಗುತ್ತಿರುವುದರಿಂದ ಹೈನುಗಾರಿಕೆ ಮತ್ತು ಕುರಿ-ಮೇಕೆ ಸಾಕಾಣಿಕೆ ಅವಲಂಬಿತ ಕುಟುಂಬಗಳ ಆದಾಯಕ್ಕೆ ಹೊಡೆತ ಬೀಳುವ ಭೀತಿ ಎದುರಾಗಿದೆ. ಬೋರ್‌ವೆಲ್‌ಗಳಲ್ಲಿನ ನೀರಿನ ಮಟ್ಟ ಕುಸಿತ ಮತ್ತು ಹೊರ ಜಿಲ್ಲೆ/ರಾಜ್ಯಗಳಿಂದ...

ತುಳುವಿಗೆ ಅಧಿಕೃತ ಮಾನ್ಯತೆ | ಭಾಷಾ ಬೆಳವಣಿಗೆಗೆ ಇಷ್ಟೇ...

ತುಳು ಭಾಷೆಗೆ ಸಿಗುವ ಹೊಸ ಸ್ಥಾನಮಾನ ಭಾಷಾ ಹೋರಾಟದ ಅಂತಿಮ ಗುರಿಯಾಗಬಾರದು. ಬದಲಾಗಿ ಅದೊಂದು ಹೊಸ ಅಧ್ಯಾಯದ ಆರಂಭವಾಗಬೇಕು. ಸರ್ಕಾರಿ ಯೋಜನೆಗಳು, ಶೈಕ್ಷಣಿಕ ಪೋಷಣೆ ಮತ್ತು ಸ್ಥಳೀಯ ಆರ್ಥಿಕತೆಯ ಬೆಂಬಲ ಸಿಕ್ಕಾಗ ಮಾತ್ರವೇ...

ಕೊಲೆ ಆರೋಪಿ ರಿಯಾಜ್ ಕಳೆದ ಒಂದು ವರ್ಷದ ಹಿಂದೆ ಫರ್ಜಾನಾ ಎಂಬುವವರನ್ನು ಎರಡನೇ ಮದುವೆಯಾಗಿದ್ದ. ಮೊದಲನೇ ಹೆಂಡತಿ ಶಮಾ ಹಾಗೂ ರಿಯಾಜ್ ನಡುವೆ ವೈಮನಸ್ಸು ಉಂಟಾಗಿ ಹೊಂದಾಣಿಕೆ ಆಗದಿರುವ ಕಾರಣ ಅವಳು ತನ್ನ ತವರುಮನೆ ಇಂಚಲ ಗ್ರಾಮಕ್ಕೆ ಬಂದು ವಾಸವಾಗಿದ್ದಳು.

“ಆರೋಪಿ ತನ್ನ ಎರಡನೇ ಹೆಂಡತಿ ಫರ್ಜಾನಾಳನ್ನೂ ಕೂಡಾ ಇಂಚಲ ಗ್ರಾಮಕ್ಕೆ ಕರೆದುಕೊಂಡು ಬಂದು ಇಬ್ಬರಿಗೂ ಬೇರೆ ಮನೆ ಮಾಡಿದ್ದನು. ಎರಡನೇ ಹೆಂಡತಿ ಫರ್ಜಾನಾಳ ಕುಮ್ಮಕ್ಕಿನಿಂದ ತಾನು ಮೊದಲ ಪತ್ನಿಯನ್ನು ಕೊಲ್ಲುವುದಾಗಿ ಯತ್ನಿಸಿದ್ದು, ಶಮಾ ಮನೆಯಲ್ಲಿ ಮಲಗಿದಾಗ ಮುಖ ಮತ್ತು ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿದ್ದಾನೆ” ಎಂದು ದಾವಲಸಾಬ ಮಕ್ತುಮ ಸಾಬ ಬುಡ್ಡನ್ನವರ ಮುರಗೋಡ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.‌

ಈ ಸುದ್ದಿ ಓದಿದ್ದೀರಾ?: ಬೆಳಗಾವಿ | ಅಪ್ರಾಪ್ತೆಯರ ಮೇಲೆ ಸಾಮೂಹಿಕ ಅತ್ಯಾಚಾರ; ವಿಡಿಯೊ ತೋರಿಸಿ ಬೆದರಿಸುತ್ತಿದ್ದ ಆರೋಪಿಗಳ ಬಂಧನ

ಘಟನಾ ಸ್ಥಳಕ್ಕೆ ಹೆಚ್ಚುವರಿ ಎಸ್ ಪಿ ಬಸರಗಿ, ಡಿವೈಎಸ್‌ಪಿ ಚಿದಂಬರ, ಪಿಐ ವೀರೇಶ ಮಠಪತಿ ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಅಧಿಕಾರಿಗಳ ನಿರ್ಲಕ್ಷ್ಯದಿಂದ ದೌರ್ಜನ್ಯಗಳಿಗೆ ಕಡಿವಾಣ ಬೀಳುತ್ತಿಲ್ಲ : ಸಂಜೀವ ಬಳ್ಕೂರು

ರಾಯಚೂರು ಜಿಲ್ಲೆಯಲ್ಲಿ ದಲಿತ ಮಹಿಳೆಯರ ಮೇಲೆ ನಿರಂತರವಾಗಿ ನಡೆಯುತ್ತಿರುವ ಅತ್ಯಾಚಾರ ಹಾಗೂ...

ಗದಗ | ಅಲ್ಪಸಂಖ್ಯಾತರ ಅಭಿವೃಧ್ದಿ ನಿಗಮದಲ್ಲಿ ಮಧ್ಯವರ್ತಿಗಳ ಹಾವಳಿ: ಕಡಿವಾಣಕ್ಕೆ ಆಗ್ರಹ

ಗದಗ ಜಿಲ್ಲೆಯ ಬಡ ಅಲ್ಪಸಂಖ್ಯಾತರ ಕುಟುಂಬಗಳಿಗೆ ಸರ್ಕಾರದ ಯೋಜನೆಗಳು ಪ್ರಮಾಣಿಕವಾಗಿ ದೊರಕಿಸಿ...

ಕೋಲಾರ | ವಿದ್ಯಾರ್ಥಿನಿಯ ನಾಲ್ಕು ವರ್ಷದ ವಿದ್ಯಾಭ್ಯಾಸಕ್ಕೆ ಎಲ್.ಜಿ. ಫೌಂಡೇಶನ್ ನೆರವು

ವಕ್ಕಲೇರಿ ಗ್ರಾಮದ ಕೂಲಿ ಕಾರ್ಮಿಕ ನಾಗರಾಜ್ ಅವರ ಪುತ್ರಿಯ ನಾಲ್ಕು ವರ್ಷದ...