ಬೆಳಗಾವಿ | ಶಾಸಕನ ಮನೆ ಮುಂದೆ ಆತ್ಮಹತ್ಯೆ ಬೆದರಿಕೆ; ಗ್ರಾ.ಪಂ ಸದಸ್ಯ ಬಂಧನ

Date:

ಕಾಂಗ್ರೆಸ್‌ ಶಾಸಕ ರಾಜು ಕಾಗೆ ಮನೆ ಮುಂದೆ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಬೆದರಿಗೆ ಹಾಕಿದ್ದ ಗ್ರಾಮ ಪಂಚಾಯತಿ ಸದಸ್ಯನನ್ನು ಬೆಳಗಾವಿ ಜಿಲ್ಲೆಯ ಅಥಣಿ ಪೊಲೀಸರು ಬಂಧಿಸಿದ್ದಾರೆ.

ಶಿರಗುಪ್ಪಿ ಗ್ರಾಮ ಪಂಚಾಯತಿ ಸದಸ್ಯ ರಾಮನಗೌಡ ಪಾಟೀಲ್​ ಬಂಧಿತ ಆರೋಪಿ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಬೆಂಬಲಿಸಿದ್ದಕ್ಕೆ ಕಾಂಗ್ರೆಸ್‌ ಶಾಸಕ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದ ರಾಮನಗೌಡ ಪಾಟೀಲ್, ತನ್ನ ಕುಟುಂಬಸ್ಥರೊಂದಿಗೆ ಶಾಸಕನ ಮನೆ ಮುಂದೆ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಬೆದರಿಕೆ ಆಹಕಿದ್ದರು ಎಂದು ತಿಳಿದುಬಂದಿದೆ.

ಸೋಮವಾರ, ಶಾಸಕ ರಾಜು ಕಾಗೆ ಅವರಿಗೆ ಕರೆ ಮಾಡಿದ್ದ ರಾಮನಗೌಡ ಪಾಟೀಲ್, “ನನ್ನ ಹೆಂಡತಿ, ಮಕ್ಕಳ ಸಮೇತ ನಿಮ್ಮ ಮನೆ ಬಳಿ ಬಂದು ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ” ಎಂದು ಬೆದರಿಕೆ ಹಾಕಿದ್ದರು. ಮಾತ್ರವಲ್ಲದೆ, ಶಿರಗುಪ್ಪಿ ಗ್ರಾಮದಲ್ಲಿ ಮೈಕ್ ಅಳವಡಿಸಿ, ತಾನು ಮಾತನಾಡುವುದು ಇಡೀ ಊರಿಗೆ ಕೇಳುವಂತೆ ಮಾಡಿದ್ದರು ಎಂದು ತಿಳಿದುಬಂದಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ತನ್ನ ಮೇಲಿನ ಆರೋಪದ ಬಗ್ಗೆ ಪ್ರತಿಕ್ರಿಯಿಸಿರುವ ಶಾಸಕ ರಾಜು ಕಾಗೆ, “ರಾಮನಗೌಡ ಪಾಟೀಲ್ ಮಾಡಿರುವ ಆರೋಪಕ್ಕೂ ನನಗೂ ಯಾವುದೇ ಸಂಬಂಧವಿಲ್ಲ. ಬದಲಾಗಿ, ಆತನೇ ನನಗೆ ಮಾನಸಿಕ ಹಿಂಸೆ ನೀಡುತ್ತಿದ್ದಾನೆ. ನಾನು ಆತನಿಗೆ ಕಿರುಕುಳ ನೀಡಿದ್ದರೆ, ಅದಕ್ಕೆ ಸಂಬಂಧಿಸಿದ ಸಾಕ್ಷಿ ಆತನ ಬಳಿ ಇದ್ದರೆ, ನ್ಯಾಯಾಲಯದಲ್ಲಿ ದೂರು ದಾಖಲಿಸಲಿ. ಆತನ ವಿರುದ್ಧ ಮಾನನಷ್ಟ ಪ್ರಕರಣ​ ದಾಖಲಿಸುತ್ತೇನೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏ.20ರಂದು ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟದ ವಿವರ ಇಲ್ಲಿದೆ

ರಾಜ್ಯದಲ್ಲಿ ವಾಡಿಕೆಯಂತೆ ಮಳೆಯಾಗದೆ. ಕರಾವಳಿ ಪ್ರದೇಶಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ,...

ಬೆಂಗಳೂರು ಗ್ರಾಮಾಂತರ | ಕಾಂಗ್ರೆಸ್‌ನ ಡಿ.ಕೆ. ಸುರೇಶ್ ಪರ ನಟ ದರ್ಶನ್ ಪ್ರಚಾರ

ಲೋಕಸಭಾ ಚುನಾವಣೆಯ ಹಿನ್ನೆಲೆ, ರಾಜ್ಯದಲ್ಲಿ ರಾಜಕೀಯ ಪಕ್ಷದ ಅಭ್ಯರ್ಥಿಗಳು ಪ್ರಚಾರ ಭರಾಟೆ...

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಹಿತಕ್ಕಾಗಿ ಸೌಮ್ಯ ರೆಡ್ಡಿಗೆ ಮತ ನೀಡಿ: ನಟ ಧ್ರುವ ಸರ್ಜಾ

ಲೋಕಸಭಾ ಚುನಾವಣೆ ಹಿನ್ನೆಲೆ, ಅಭ್ಯರ್ಥಿಗಳ ಪ್ರಚಾರದ ಭರಾಟೆ ಜೋರಾಗಿದೆ. ಬೆಂಗಳೂರು ದಕ್ಷಿಣ...

ಕಲಬುರಗಿ | ನೇಹಾಳ ಭೀಕರ ಕೊಲೆ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಲು ಎಸ್ಎಫ್ಐ ಆಗ್ರಹ

ಹುಬ್ಬಳ್ಳಿಯ ಬಿವಿಬಿ ಕಾಲೇಜ್ ಕ್ಯಾಂಪಸ್‌ನಲ್ಲಿ ನಡೆದ ವಿದ್ಯಾರ್ಥಿನಿ ನೇಹಾಳ ಭೀಕರ ಕೊಲೆ,...