ಬೆಳಗಾವಿ | ಕೆಎಸ್‌ಆರ್‌ಟಿಸಿ ಬಸ್​ನಲ್ಲೇ ಸಾರಿಗೆ ನೌಕರ ಆತ್ಮಹತ್ಯೆ

Date:

ಕೆಎಸ್‌ಆರ್‌ಟಿಸಿಯಲ್ಲ ಮೆಕ್ಯಾನಿಕ್‌ ನೌಕರನಾಗಿ ಕೆಲಸ ಮಾಡುತ್ತಿದ್ದ ನೌಕರರೊಬ್ಬರು ಸಾರಿಗೆ ಬಸ್‌ನಲ್ಲಿಯೇ ನೇಟು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿಯ ಎನ್‌ಡಬ್ಲ್ಯೂಆರ್‌ಟಿಸಿ ಡಿಪೋ-1ರಲ್ಲಿ ನಡೆದಿದೆ.

- Advertisement -

ಮೃತನನ್ನು ಬಸ್​​ ಮೆಕ್ಯಾನಿಕ್ ಕೇಶವ ಕಮಡೊಳಿ (57) ಎಂದು ಗುರುತಿಸಲಾಗಿದೆ. ಅವರು ಬೆಳಗಾವಿಯ ಹಳೇ ಗಾಂಧಿನಗರದ ನಿವಾಸಿಯಾಗಿದ್ದಾರೆ. ಮೇಲಧಿಕಾರಿಗಳ ಒತ್ತಡದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಕೇಶವ ಅವರು ಕೆಲ ದಿನಗಳಿಂದ ಬೆನ್ನು ನೋವಿಗೆ ತುತ್ತಾಗಿದ್ದರು. ಕೆಲವು ದಿನಗಳವರೆಗೆ ತಮ್ಮ ಕೆಲಸವನ್ನು ಬದಲಿಸದಂತೆ ಡಿಪೋ ಮ್ಯಾನೇಜರ್​​ ಲಿಂಗರಾಜ ಲಾಠಿ ಅವರು ಸಹಾಯಕ ಕಾರ್ಯ ಅಧೀಕ್ಷಕ ಅನಿಲ್​​​ ಬಾಂದೇಕರ್​ ಅವರಿಗೆ ಮನವಿ ಮಾಡಿದ್ದರು. ಆದರೂ, ಅವರನ್ನು ಅಧಿಕಾರಿಗಳು ಪಂಚರ್ ಹಾಕುವ ವಿಭಾಗಕ್ಕೆ ಬದಲಾಯಿಸಿ, ನಿಯೋಜಿಸಿದ್ದರು. ಇದರಿಂದ ನೊಂದ ಕೇಶವ ಅವರು ಕೆಲಸದ ಸ್ಥಳದಲ್ಲಿಯೇ ಬಸ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.

ಸ್ಥಳಕ್ಕೆ ಬೆಳಗಾವಿ ಮಾರ್ಕೆಟ್ ಠಾಣೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮೃತನ ಕುಟುಂಬಸ್ಥರು ಕೇಶವ ಅವರ ಮೃತದೇಹವನ್ನು ಡಿಪೋ-1ರ ಎದುರು ಇಟ್ಟು ಪ್ರತಿಭಟನೆ ನಡೆಸಿದ್ದಾರೆ. ಕೆಎಸ್‌ಆರ್‌ಟಿಸಿ ಅಧಿಕಾರಿಗಳ ವಿರುದ್ಧ ಮೃತ ಕೇಶವ ಕುಟುಂಬಸ್ಥರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನ್ಯಾಯ ಸಿಗುವವರೆಗೂ ಮೃತದೇಹವನ್ನು ಕೊಂಡೊಯ್ಯುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.

ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ… ಆತ್ಮಹತ್ಯೆಗಳ ಕುರಿತು ಚರ್ಚಿಸುವುದು ಕೂಡ ಕೆಲವರಿಗೆ ಪ್ರಚೋದನೆ ನೀಡಬಹುದು. ಸಮಸ್ಯೆಗಳ ಬಗ್ಗೆ ಆಪ್ತರೊಂದಿಗೆ ಹಂಚಿಕೊಳ್ಳುವುದರಿಂದ, ಸಮಾಲೋಚನೆ ನಡೆಸುವುದರಿಂದ ಆತ್ಮಸ್ಥೈರ್ಯ ಹೆಚ್ಚುತ್ತದೆ. ಆತ್ಮಹತ್ಯೆಗಳನ್ನು ತಡೆಯಬಹುದು. ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ಬೆಳಗ್ಗೆ 10ರಿಂದ ಸಂಜೆ 8ರವರೆಗೆ, ಆರೋಗ್ಯ ಸಹಾಯವಾಣಿ 104.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಕಾರ್ಮಿಕರಿಗೆ ಕನಿಷ್ಠ ವೇತನ ಜಾರಿಗೆ ಒತ್ತಾಯಿಸಿ ಶಾಸಕ ಸಿ.ಎನ್ ಬಾಲಕೃಷ್ಣರಿಗೆ ಮನವಿ; ಸಿಐಟಿಯು

ಕಾರ್ಮಿಕರಿಗೆ ಕನಿಷ್ಠ ವೇತನ ಜಾರಿಗೆ ಒತ್ತಾಯಿಸಿ ಹಾಗೂ ಕಾರ್ಮಿಕರ ವಿವಿಧ ಬೇಡಿಕೆಗಳ...

ಹಾಸನ | 271 ರೈತರಿಗೆ ಪರಿಹಾರ ವಿತರಿಸುವ ಪ್ರಕ್ರಿಯೆ

ಭೂಸ್ವಾಧೀನ ಪೂರ್ಣಗೊಂಡು ಅಗತ್ಯ ಜಾಗವನ್ನು ಗುತ್ತಿಗೆದಾರರಿಗೆ ಹಸ್ತಾಂತರಿಸಿದ ಬಳಿಕ ಕಾಮಗಾರಿ ಆರಂಭಿಸಲು...

ರಾಯಚೂರು | ದೇವಸ್ಥಾನ ಕಟ್ಟೆ ಮೇಲೆ ಕುಳಿತಿದ್ದಕ್ಕೆ ಹಲ್ಲೆ ಅರೋಪ: ಐವರ ವಿರುದ್ಧ ಪ್ರಕರಣ ದಾಖಲು

ಲಿಂಗಸುಗೂರು ತಾಲೂಕಿನ ಈಚನಾಳ ಗ್ರಾಮದಲ್ಲಿ ಗದ್ದೆಮ್ಮ ದೇವಸ್ಥಾನದ ಕಟ್ಟೆ ಮೇಲೆ ಕುಳಿತಿದ್ದ...

ಸಕಲೇಶಪುರ | 25 ವರ್ಷ ನೆನಗುದಿಗೆ ಬಿದ್ದಿದ್ದ ಆಟೋ ನಿಲ್ದಾಣ ನಿರ್ಮಾಣ 

ಹಾಸನ ಜಿಲ್ಲೆ ಸಕಲೇಶಪುರ ಪಟ್ಟಣದ ಹಳೆ ಬಸ್ ನಿಲ್ದಾಣದ ಸಮೀಪ ಸ್ಥಳೀಯ...