ಗೂಗಲ್ ಮ್ಯಾಪ್ ಹಾಕಿಕೊಂಡು ಕಾರಿನಲ್ಲಿ ಸಂಚರಿಸುತ್ತಿದ್ದ ಪ್ರಯಾಣಿಕರು ಮಧ್ಯರಾತ್ರಿ ದಾರಿ ತಪ್ಪಿ ಕಾಡಿನಲ್ಲಿ ಸಿಲುಕಿಕೊಂಡ ಘಟನೆ ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕಿನ ಮಾಡಿಗುಂಜಿ ಬಳಿ ನಡೆದಿದೆ.
ಆಂಧ್ರ ಪ್ರದೇಶದಿಂದ ಗೋವಾ ಕಡೆಗೆ ಕಾರಿನಲ್ಲಿ ಸಂಚರಿಸುತ್ತಿದ್ದ ಪ್ರಯಾಣಿಕರು ಮಾಡಿಗುಂಜಿ ಬಳಿ ಗೂಗಲ್ ಮ್ಯಾಪ್ ಹಾಕಿಕೊಂಡದ್ದ ವೇಳೆ ಪಶ್ಚಿಮ ಘಟ್ಟ ಅರಣ್ಯ ಪ್ರದೇಶದಲ್ಲಿ ಮಧ್ಯರಾತ್ರಿ ದಾರಿ ತಪ್ಪಿದ ಪರಿಣಾಮ, 10ಕಿ.ಮೀ ಕಾಡಿನಲ್ಲಿ ಪ್ರಯಾಣಿಸಿದ್ದಾರೆ. ಅಷ್ಟರಲ್ಲಿ, ರಸ್ತೆ ಮುಗಿದು ಹಳ್ಳ ಕಾಣಿಸಿದೆ. ಹಾಗ ಪ್ರಯಾಣಿಕರಿಗೆ ದಾರಿ ತಪ್ಪಿದ್ದು ಗೊತ್ತಾಗಿದೆ.
ಈ ವರದಿ ಓದಿದ್ದೀರಾ? ಧಾರವಾಡ | ಉದ್ಯಮಿ ಕೊಲೆ ಪ್ರಕರಣ: ನಾಲ್ವರು ಆರೋಪಿಗಳ ಬಂಧನ: ಪೊಲೀಸರು ಹೇಳಿದ್ದೇನು?
ದಾರಿ ತಪ್ಪಿದ ಪ್ರಯಾಣಿಕರಿಗೆ ಅಲ್ಲಿಂದ ಎತ್ತ ಕಡೆ ತೆರಳಬೇಕು ಎಂಬುದು ಗೊತ್ತಾಗದೆ ಚಾಲಕ ಪೊಲೀಸ್ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿದ್ದು ಸ್ಥಳಕ್ಕೆ ತೆರಳಿದ ಪೊಲೀಸ್ ಸಿಬ್ಬಂದಿ ನಾಲ್ವರನ್ನೂ ಸುರಕ್ಷಿತವಾಗಿ ವಾಪಸ್ ಕರೆದುಕೊಂಡು ಬಂದಿದ್ದಾರೆ ಎಂದು ತಿಳಿದುಬಂದಿದೆ.