ಸ್ವಾತಂತ್ರ್ಯ ಚಳುವಳಿಯ ಸಮಯದಲ್ಲಿ 1924ರಲ್ಲಿ ಮಹಾತ್ಮ ಗಾಂಧಿ ಅಧ್ಯಕ್ಷತೆಯಲ್ಲಿ ನಡೆದಿದ್ದ ಕಾಂಗ್ರೆಸ್ ಮಹಾ ಅಧಿವೇಶನಕ್ಕೆ ನೂರು ವರ್ಷಗಳಾಗಿವೆ. ಆ ಅಧಿವೇಶನದ ಶತಮಾನೋತ್ಸವವನ್ನು ರಾಜ್ಯ ಸರ್ಕಾರ ವಿಜೃಂಬಣೆಯಿಂದ ನಡೆಸಲು ಸಿದ್ದತೆ ನಡೆಸುತ್ತಿದೆ. ಡಿಸೆಂಬರ್ 26 ಮತ್ತು 27ರಂದು ಶತಮಾನೋತ್ಸವ ಕಾರ್ಯಕ್ರಮ ನಡೆಯಲಿದ್ದು, ಈ ಎರಡು ದಿನಗಳ ಕಾಲ ಬೆಳಗಾವಿ ನಗರ ಮತ್ತು ತಾಲೂಕಿನ ಎಲ್ಲ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳಿಗೆ ರಜೆ ಘೋಷಿಸಿ ಬೆಳಗಾವಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಕಾಂಗ್ರೆಸ್‌ನ ಎಲ್ಲ ನಾಯಕರು ಈಗಾಗಲೇ ಬೆಳಗಾವಿಯಲ್ಲಿ ಬೀಡುಬಿಟ್ಟಿದ್ದಾರೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ಡಿಸಿಎಂ ಡಿಕೆ ಶಿವಕುಮಾರ್, ಸಚಿವರಾದ ಸತೀಶ್ ಜಾರಕಿಹೊಳಿ, ಮುನಿಯಪ್ಪ, ಎಂಬಿ ಪಾಟೀಲ್ ಅವರು ಸಿದ್ದತೆಯ ಮೇಲ್ವಿಚಾರಣೆ ನಡೆಸುತ್ತಿದ್ದಾರೆ.
ಗುರುವಾರ (ಡಿ.25), ಬೆಳಗಾವಿಯ ಸುವರ್ಣಸೌಧದಲ್ಲಿ ಗಾಂಧಿ ಪ್ರತಿಮೆಯ ಉದ್ಘಾಟನೆ ನಡೆಯಲಿದೆ. ಶತಮಾನೋತ್ಸವ ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಕಾಂಗ್ರೆಸ್ ಅಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು ಹಾಗೂ ಕಾಂಗ್ರೆಸ್‌ನ 140 ಸಂಸದರು ಭಾಗಿಯಾಗಲಿದ್ದಾರೆ.