ಬೆಳಗಾವಿ | ಶಿಕ್ಷಕಿಗೆ ವಿಡಿಯೋ ಕಾಲ್‌ ಬೆದರಿಕೆ; ₹13.75 ಲಕ್ಷ ವಂಚನೆ

Date:

ವಿಡಿಯೊ ಕಾಲ್‌ಗಳ ಮೂಲಕ ವ್ಯಕ್ತಿಗತ ದೃಶ್ಯಗಳನ್ನು ಬಳಸಿಕೊಂಡು ಶಿಕ್ಷಕಿಯೊಬ್ಬರಿಂದ ₹13.75 ಲಕ್ಷ ಹಣ ವಂಚಿಸಿರುವ ಗಂಭೀರ ಪ್ರಕರಣ ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ದಾವನಕಟ್ಟಿ ಗ್ರಾಮದಲ್ಲಿ ನಡೆದಿದೆ. ಈ ಕುರಿತಂತೆ ಜಿಲ್ಲಾ ಸೈಬರ್ ಅಪರಾಧ ವಿಭಾಗ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

ಆರೋಪಿ ಅದೇ ಗ್ರಾಮದ ಶಿವನಾಯಕ ಯಳ್ಳೂರೆ ಎಂಬಾತ ಶಿಕ್ಷಕಿಯೊಂದಿಗೆ ಆತ್ಮೀಯತೆ ಬೆಳೆಸಿಕೊಂಡಿದ್ದಾನೆ. ಶಿಕ್ಷಕಿ ತನ್ನ ವೈಯಕ್ತಿಕ ಮತ್ತು ಕೌಟುಂಬಿಕ ಸಮಸ್ಯೆಗಳನ್ನು ಆರೋಪಿ ಜೊತೆ ಹಂಚಿಕೊಂಡಿದ್ದರು. ಈ ಸಂದರ್ಭಗಳಲ್ಲಿ ಆರೋಪಿ ವಿಡಿಯೊ ಕಾಲ್‌ಗಳನ್ನು ರೆಕಾರ್ಡ್ ಮಾಡಿಕೊಂಡು, ನಂತರ ಅವನ್ನು ಬಳಸಿಕೊಂಡು ಬೆದರಿಕೆ ನೀಡಲು ಮುಂದಾಗಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಈ ವಿಡಿಯೋಗಳನ್ನು ಮುಂದಿಟ್ಟುಕೊಂಡು ಆರೋಪಿ ಶಿಕ್ಷಕಿಗೆ ₹15 ಲಕ್ಷ ಬೇಡಿಕೆ ಇಟ್ಟು, ಹಣ ಕೊಡದಿದ್ದಲ್ಲಿ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಸಿದ್ದಾನೆ. ಶಿಕ್ಷಕಿಯ ಪತಿಗೂ ಸಂಪರ್ಕಿಸಿ ಹಣ ನೀಡುವಂತೆ ಒತ್ತಡ ಹೇರಿದ್ದಾನೆ.

2024ರ ಏಪ್ರಿಲ್ ತಿಂಗಳಿನಿಂದ ಇದುವರೆಗೆ ಶಿಕ್ಷಕಿ ಒಟ್ಟು ₹7.75 ಲಕ್ಷ ನಗದು ಹಾಗೂ ₹5 ಲಕ್ಷ ಮೌಲ್ಯದ ಚಿನ್ನಾಭರಣ ಸೇರಿದಂತೆ ₹13.75 ಲಕ್ಷ ಮೌಲ್ಯದ ವಸ್ತುಗಳನ್ನು ನೀಡಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ: ಬೆಳಗಾವಿ | ಸಾರ್ವಜನಿಕ ಸ್ಥಳದಲ್ಲಿ ತಲ್ವಾರ್ ಪ್ರದರ್ಶನ; ಇಬ್ಬರು ಯುವಕರ ಬಂಧನ

ವಿಷಯ ಶಿಕ್ಷಕಿಯ ಮೈದುನನಿಗೆ ಗೊತ್ತಾದ ಬಳಿಕ ಪ್ರಕರಣ ಠಾಣೆ ಮೆಟ್ಟಿಲೇರಿದೆ. ಸದ್ಯಕ್ಕೆ ಈ ಕುರಿತು ಜಿಲ್ಲಾ ಸಿಇಎನ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹನೂರು | ರಾತ್ರಿಪೂರ್ತಿ ಸುರಿದ ಭಾರೀ ಮಳೆ: ಮನೆ, ಅಂಗಡಿಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಬಹುತೇಕ ಕಡೆ ರಾತ್ರಿಪೂರ್ತಿ ಭಾರೀ ಮಳೆಯಾಗಿದ್ದು,...

​ಶಿಡ್ಲಘಟ್ಟ | ಒಂಬತ್ತನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ:ಪ್ರಾಂಶುಪಾಲ ಈಶ್ವರ್ ರೆಡ್ಡಿಗೆ ಕಠಿಣ ಶಿಕ್ಷೆಗೆ ಒತ್ತಾಯ

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ಗುರ್ಲಗುಮ್ಮನಹಳ್ಳಿ(11ನೇ ಮೈಲಿ) ಬಳಿ ವಸತಿ ಶಾಲೆಯ...

ಬೆಂಗಳೂರು | 700 ಕೆ.ಜಿ ಪಿಒಪಿ ಗಣೇಶ ಮೂರ್ತಿ ತ್ಯಾಜ್ಯ ತೆರವುಗೊಳಿಸಿದ ‘ವಿ ಆರ್ ಆರಂಭ್’

ಬೆಂಗಳೂರಿನ ಸರ್ಜಾಪುರ ಸಮೀಪದ ಹಲನಾಯಕನಹಳ್ಳಿ ಕೆರೆಯಲ್ಲಿ ಸಂಗ್ರಹವಾಗಿದ್ದ ಪ್ಲಾಸ್ಟರ್ ಆಫ್ ಪ್ಯಾರಿಸ್...