ಬೆಳಗಾವಿ | ಮಳೆಗಾಗಿ ಕತ್ತೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು

Date:

ದೇಶದಲ್ಲಿ ಒಂದಾದ ಮೇಲೊಂದರಂತೆ ನಾನಾ ಚಂಡಮಾರುತಗಳು ಬೀಸುತ್ತಿವೆ. ಅವುಗಳ ಪರಿಣಾಮ ರಾಜ್ಯದ ಹಲವು ಭಾಗಗಳಲ್ಲಿ ಮುಂಗಾರು ಪೂರ್ವ ಮಳೆಯಾಗಿದೆ. ಐದಾರು ಮಂದಿ ಪ್ರಾಣವನ್ನೂ ತೆತ್ತಿದ್ದಾರೆ. ಇದೇ ಸಮಯದಲ್ಲಿ ಇನ್ನೂ ಹಲವೆಡೆ ಮಳೆ ಬಾರದೆ, ನೀರೂ ಇಲ್ಲದೆ ಕುಡಿಯುವ ನೀರಿಗೂ ಹಾಹಾಕಾರ ಶುರುವಾಗಿದೆ. ಮಳೆಗಾಗಿ ಜನರು ಆಕಾಶದತ್ತ ಕಣ್ಣು ಹಾಯಿಸಿ ಕಾದು ಕುಳಿತಿದ್ದಾರೆ.

ಕೆಲವು ಭಾಗಗಳಲ್ಲಿ ಮಳೆ ಬರಲೆಂದು ನಾನಾ ರೀತಿಯ ಪೂಜೆಗಳು ನಡೆಯುತ್ತಿವೆ. ಇದೇ ಹೊತ್ತಿನಲ್ಲಿ ಮಳೆ ಕಾಣದೆ ಕಂಗಾಲಾಗಿರುವ ಬೆಳಗಾವಿ ಜಿಲ್ಲೆಯ ಹಳ್ಳಿಯೊಂದರಲ್ಲಿ ಮಳೆ ಸುರಿಯಲೆಂದು ಗ್ರಾಮಸ್ಥರು ಕತ್ತೆಗಳಿಗೆ ಮದುವೆ ಮಾಡಿದ್ದಾರೆ.

ಜಿಲ್ಲೆಯ ಅಥಣಿ ತಾಲೂಕಿನ ಸಂಬರಗಿ ಗ್ರಾಮದ ಗ್ರಾಮಸ್ಥರು ಎರಡು ಕತ್ತೆಗಳಿಗೆ ಮದುವೆ ಮಾಡಿದ್ದಾರೆ. ದೇವಸ್ಥಾನದ ಎದುರು ಹೋಮ ಕುಂಡವಿಟ್ಟು, ವಾದ್ಯಮೇಳ ನುಡಿಸಿ ಶಾಸ್ತ್ರೋತ್ತವಾಗಿ ಮದುವೆ ಮಾಡಲಾಗಿದೆ. ಕತ್ತೆಗಳಿಗೆ ಮದುವೆ ಮಾಡಿದರೆ, ಮಳೆಯಾಗುತ್ತದೆ ಎಂಬ ನಂಬಿಕೆಯಿಂದ ಹೀಗೆ ಮಾಡಿರುವುದಾಗಿ ಗ್ರಾಮಸ್ಥರು ಹೇಳಿಕೊಂಡಿದ್ದಾರೆ.

ಬೆಳಗಾವಿ ಜಿಲ್ಲೆಯ ನೂತನ ಉಸ್ತುವಾರಿ ಸಚಿವರಾಗಿ ಸತೀಶ್‌ ಜಾರಕಿಹೊಳಿ ಆಯ್ಕೆಯಾಗಿದ್ದಾರೆ. ಅವರು ಮೂಲತಃ ಬೆಳಗಾವಿ ಜಿಲ್ಲೆಯವರೇ ಆಗಿದ್ದಾರೆ. ಮೌಡ್ಯದ ವಿರುದ್ಧ ನಿರಂತರ ಹೋರಾಟವನ್ನೂ ಮಾಡುತ್ತಿದ್ದಾರೆ. ಅವರದ್ದೇ ಜಿಲ್ಲೆಯಲ್ಲಿ ಗ್ರಾಮಸ್ಥರು ಕತ್ತೆಗಳಿಗೆ ಮದುವೆ ಮಾಡಿಸಿ, ಮೌಡ್ಯಾಚರಣೆ ಮಾಡಿದ್ದಾರೆ. ಇಂತಹ ಮೌಡ್ಯಗಳ ವಿರುದ್ಧ ಜನರಲ್ಲಿ ಜಾಗೃತಿ ಮೂಡಿಸುವ ಜವಾಬ್ದಾರಿ ಸತೀಶ್‌ ಜಾರಕಿಹೊಳಿ ಅವರ ಮೇಲಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಕ್ಷಿಣ ಕನ್ನಡ | ಅಲೆಮಾರಿ ಶಿಳ್ಳೆಕ್ಯಾತ ಕುಟುಂಬಗಳಿಗೆ ಶಾಶ್ವತ ಸೂರು ಕಲ್ಪಿಸಲು ಡಿವೈಎಫ್ಐ ಒತ್ತಾಯ

ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಗೆ ಒಳಪಡುವ ಬೋಳಾರ...

ಬೆಳಗಾವಿ | ಹಿಡಕಲ್ ಡ್ಯಾಂನಿಂದ ನೀರು ಹರಿಸುವಂತೆ ರೈತರ ಪ್ರತಿಭಟನೆ

ಹಿಡಕಲ್‌ ಜಲಾಶಯದಿಂದ ಘಟಪ್ರಭಾ ಎಡದಂಡೆ ನಾಲೆಯ ರೈತರಿಗೆ ನೀರುಹರಿಸುವಂತೆ ಕೋರಿ ಚಿಕ್ಕೋಡಿ-ಮಿರಜ್‌...

ಗದಗ | ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿಗಿಲ್ಲ ಬೋಧಕರು; ವಿದ್ಯಾರ್ಥಿಗಳ ಭವಿಷ್ಯ ಅತಂತ್ರ

ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸುಮಾರು 380...

ರಾಯಚೂರು | ಪತ್ನಿ ಹತ್ಯೆಗೈದು ಪತಿ ಆತ್ಮಹತ್ಯೆ

ಪತ್ನಿಯನ್ನು ಕಲ್ಲಿನಿಂದ ಜಜ್ಜಿ ಹತ್ಯೆ ಮಾಡಿದ್ದ ದುರುಳ ಪತಿಯೊಬ್ಬ, ತಾನೂ ನೇಣು...