ಬೆಳಗಾವಿ ನಗರರದ ಕೆಎಲ್‌ಇ ಸಂಸ್ಥೆಯ ರಾಜಾ ಲಖಮಗೌಡ ವಿಜ್ಞಾನ ಪದವಿಪೂರ್ವ ಮಹಾವಿದ್ಯಾಲಯದ ಪ್ರಥಮ ವರ್ಷದ ವಿದ್ಯಾರ್ಥಿಗಳು ಮತ್ತು ಪಾಲಕರಿಗೆ ಹಮ್ಮಿಕೊಂಡಿದ್ದ ಪುನಃಶ್ವೇತನ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಪ್ರಭಾಕರ ಕೋರೆ ಮಾತನಾಡಿ ಪ್ರತಿಭಾವಂತ ವಿದ್ಯಾರ್ಥಿಗಳು ಎಲ್ಲ ರಂಗಗಳ ಮಿಂಚುತ್ತಾರೆ. ವಿದ್ಯಾರ್ಥಿಗಳು ಶಿಕ್ಷಣದ ಜತೆಗೆ, ಆರೋಗ್ಯದ ಕಡೆ ಗಮನ ಹರಿಸಬೇಕು ವೈದ್ಯಕೀಯ, ಎಂಜಿನಿಯರಿಂಗ್ ಜತೆಗೆ, ಅರ್ಥಶಾಸ್ತ್ರ, ಇತಿಹಾಸ, ಕಾನೂನುಶಾಸ್ತ್ರ ಮತ್ತಿತರ ಕೋರ್ಸ್‌ಗಳಲ್ಲೂ ಸಾಧನೆ ಮಾಡಲು ಅತ್ಯುತ್ತಮ ಅವಕಾಶಗಳಿವೆ. ಪಾಲಕರು ತಮ್ಮ ಮಕ್ಕಳಿಗೆ ಆಸಕ್ತಿಗೆ ಅನುಗುಣವಾಗಿ ಶಿಕ್ಷಣ ಕೊಡಿಸಬೇಕು ಎಂದು ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ಹೇಳಿದರು.
ಉದ್ಘಾಟಿಸಿದ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಸಿ.ಎಂ.ತ್ಯಾಗರಾಜ, ‘ಬದುಕಿನಲ್ಲಿ ಎಲ್ಲವನ್ನೂ ಕಳೆದುಕೊಂಡಾಗ ಶಿಕ್ಷಣವೇ ಚೈತನ್ಯ ನೀಡುವ ಶಕ್ತಿಯಾಗುತ್ತದೆ. ವಿದ್ಯಾರ್ಥಿಗಳು ಸತತ ಅಧ್ಯಯನದ ಮೂಲಕ ಬದುಕು ರೂಪಿಸಿಕೊಳ್ಳಬೇಕು’ ಎಂದರು.
ರಾಜಾ ಲಖಮಗೌಡ ಕಾಲೇಜಿನ ಸ್ಥಾನಿಕ ಆಡಳಿತ ಮಂಡಳಿ ಸದಸ್ಯ ವಿಜಯಕುಮಾರ ಪಾಟೀಲ ಉಪಸ್ಥಿತರಿದ್ದರು. ಪ್ರಾಚಾರ್ಯ ವಿಶ್ವನಾಥ ಕಾಮಗೋಳ ಸ್ವಾಗತಿಸಿದರು. ಎನ್.ಆರ್.ಚಮಕೇರಿ ಅತಿಥಿ ಪರಿಚಯಿಸಿದರು. ಅರುಣಕುಮಾರ ವಂದಿಸಿದರು. ಪ್ರಿಯಾಂಕ ಮತ್ತು ಸರೋಜ ನಿರೂಪಿಸಿದರು.