ಅಕ್ರಮ ಆಸ್ತಿಗಳಿಸಿರುವ ಆರೋಪದ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ಖಾನಾಪೂರ ತಾಲ್ಲೂಕಿನ ತಹಶೀಲ್ದಾರ್ ಪ್ರಕಾಶ್ ಶ್ರೀಧರ ಗಾಯಕವಾಡ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.
ಗಾಯಕವಾಡ ಅವರ ಮನೆ, ಕಚೇರಿ ಮೇಲೆ ಜ.8ರಂದು ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಅವರ ಆಸ್ತಿ ದಾಖಲೆಗಳನ್ನು, ನಗದು ವಶಪಡಿಸಿಕೊಂಡಿದ್ದರು. ಇದೀಗ ಲೋಕಾಯುಕ್ತ ಪೊಲೀಸರು ಸರ್ಕಾರಕ್ಕೆ ವರದಿ ಸಲ್ಲಿಸಿದ್ದು, ವರದಿಯಲ್ಲಿ ರೂ.4 ಕೋಟಿಗೂ ಹೆಚ್ಚು ಮೌಲ್ಯದ ಅಕ್ರಮ ಆಸ್ತಿ ಗಳಿಸಿದ್ದಾರೆ ಎಂದು ಉಲ್ಲೇಖಿಸಿದ ಹಿನ್ನೆಲೆಯಲ್ಲಿ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಎಂದು ಕಂದಾಯ ಇಲಾಖೆಯ ಅಧೀನ ಕಾರ್ಯದರ್ಶಿಗಳು ಆದೇಶದಲ್ಲಿ ತಿಳಿಸಿದ್ದಾರೆ.