ರಸ್ತೆ ಬದಿಯಲ್ಲಿ ನಿಂತಿದ್ದ ಟ್ರಕ್‌ಗೆ ಬೈಕ್ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ.
ಅಥಣಿ ಶಿವಾಜಿ ಸರ್ಕಲ್ ನಿವಾಸಿ ಅಪ್ಪಾಸಾಹೇಬ ಲಕ್ಷ್ಮಣ ನರೋಡೆ (43) ಮೃತಪಟ್ಟವರು.
ಶಿನ್ನಾಳ ಡಾಂಬರ ರಸ್ತೆಯಲ್ಲಿರುವ ಸ್ವಾಗತ ಹೋಟೆಲ್ ಸಮೀಪ ರಾತ್ರಿ ಸುಮಾರು 7.30ರ ವೇಳೆಗೆ ಅಪ್ಪಾಸಾಹೇಬ ಅವರು ಹೀರೋ ಎಚ್‌ಎಫ್ ಡಿಲಕ್ಸ್ ಬೈಕ್‌ನಲ್ಲಿ ತೆರಳುತ್ತಿದ್ದರು. ಈ ವೇಳೆ ರಸ್ತೆ ಮೇಲೆ ನಿಂತಿದ್ದ ಟಾಟಾ ಗೂಡ್ಸ್ ಕ್ಯಾರಿಯರ್ ಟ್ರಕ್‌ಗೆ ಬೈಕ್ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ರಭಸಕ್ಕೆ ಅಪ್ಪಾಸಾಹೇಬ ಅವರ ಮುಖ ಹಾಗೂ ತಲೆಗೆ ಗಂಭೀರ ಗಾಯಗಳಾಗಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಘಟನೆ ಕುರಿತು ಮಾಹಿತಿ ಪಡೆದ ಅಥಣಿ ಗ್ರಾಮೀಣ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು. ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.




